25.6 C
Bengaluru
Saturday, January 18, 2020

ಸಚಿವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗೆ ಆಗ್ರಹ

Latest News

ಪುಣೆ-ಮುಂಬೈ ಎಕ್ಸ್​​ಪ್ರೆಸ್​ ಹೈವೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ನಟಿ ಶಬಾನಾ ಆಜ್ಮಿ ಗಾಯ

ಮುಂಬೈ: ಪುಣೆ ಎಕ್ಸ್​ಪ್ರೆಸ್​ ಹೈವೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಟಿ ಶಬಾನಾ ಆಜ್ಮಿ ಗಾಯಗೊಂಡಿದ್ದಾರೆ.ಅಪಘಾತದಲ್ಲಿ ಗಾಯಗೊಂಡ ಅವರನ್ನು ನವಿ ಮುಂಬಯಿಯ ಖಾಸಗಿ ಆಸ್ಪತ್ರೆಗೆ...

ರೆಡ್ ಕ್ರಾಸ್​ ತತ್ವ ಅಳವಡಿಸಿಕೊಳ್ಳಿ

ಕಲಬುರಗಿ: ವಿದ್ಯಾರ್ಥಿಗಳು ಯುವ ರೆಡ್ಕ್ರಾಸ್ ಮತ್ತು ಕಿರಿಯರ ರೆಡ್ ಕ್ರಾಸ್ ಚಟುವಟಿಕೆಯಲ್ಲಿ ಭಾಗವಹಿಸುವ ಮೂಲಕ ತತ್ವ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ರೆಡ್ಕ್ರಾಸ್ ಸಂಸ್ಥೆ...

ಜೀವನಶೈಲಿಯೇ ರೋಗಕ್ಕೆ ಕಾರಣ

ವಿಜಯವಾಣಿ ಸುದ್ದಿಜಾಲ ಕಲಬುರಗಿಬದಲಾದ ಜೀವನ ಶೈಲಿ ಹಾಗೂ ಆಹಾರ ಪದ್ಧತಿಯಿಂದಾಗಿ ಜನರಲ್ಲಿ ಹೊಸ ಹೊಸ ರೋಗಗಳು ಕಾಣಿಸಿಕೊಳ್ಳುತ್ತಿವೆ. ಈ ಮೂಲಕ ಸಮಾಜದ ಸ್ವಾಸ್ಥ್ಯ...

ಪಾಕಿಸ್ತಾನಿಗಳು ಭಾರತ ಪ್ರವೇಶಿಸಬಹುದಾದ್ರೆ ಮಹಾರಾಷ್ಟ್ರದವರು ಬೆಳಗಾವಿಗೆ ಭೇಟಿ ನೀಡಬಾರದಾ?: ಸಂಜಯ್​ ರಾವತ್​

ಮುಂಬೈ: ಬೆಳಗಾವಿ ಜಿಲ್ಲೆಗೆ ಭೇಟಿ ನೀಡುವುದನ್ನು ತಡೆಯುತ್ತಿದ್ದಾರೆ ಎಂದು ಆರೋಪಿಸಿ ಶಿವಸೇನಾ ಸಂಸದ ಸಂಜಯ್​ ರಾವತ್​ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ವಿರುದ್ಧ...

ಸರ್ಕಾರಿ ನೌಕರರೆಂದು ಪರಿಗಣಿಸಲು ಪಟ್ಟು, ಹಡಗಲಿಯಲ್ಲಿ ತಹಸಿಲ್ ಕಚೇರಿವರೆಗೆ ಸಾರಿಗೆ ಸಿಬ್ಬಂದಿ ಕಾಲ್ನಡಿಗೆ

ಹೂವಿನಹಡಗಲಿ: ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ವಿಲೀನ ಹಾಗೂ ಸಿಬ್ಬಂದಿಗೆ ಸರ್ಕಾರಿ ನೌಕರರ ಎಲ್ಲ ಸೌಲಭ್ಯ ನೀಡುವಂತೆ ಒತ್ತಾಯಿಸಿ ಶನಿವಾರ ಸಾರಿಗೆ ನೌಕರರು...

ಕಲಬುರಗಿ: ಅಧಿಕಾರಿಗಳಿಗೆ ಒದಿತಿನಿ ಎನ್ನುವ ಅಸಂವಿಧಾನಿಕ ಪದ ಬಳಸಿದ ಜಿಲ್ಲೆಯ ಉಸ್ತುವಾರಿ ನೋಡಿಕೊಳ್ಳುವ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ಮಾಜಿ ಶಾಸಕ ವಾಲ್ಮೀಕಿ ನಾಯಕ ಮತ್ತು ಬಿಜೆಪಿಯ ಬೇಟಿ ಪಡಾವೋ ಬೇಟಿ ಬಚಾವೋ ರಾಜ್ಯ ಸಮಿತಿ ಅಧ್ಯಕ್ಷ ಸುಭಾಷ ರಾಠೋಡ್ ಆಗ್ರಹಿಸಿದ್ದಾರೆ.

ಕೂಡಲೇ ಪ್ರಕರಣ ದಾಖಲಿಸಿಕೊಳ್ಳಬೇಕು. ಇಲ್ಲವಾದಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು. ಸಭೆಯಲ್ಲಿ ಸಂವಿಧಾನದ ಮಿತಿಮೀರಿ ಸಚಿವರು ವರ್ತಿಸುವ ಮೂಲಕ ಅಧಿಕಾರಿ ವಲಯದಲ್ಲಿ ಘಾಸಿ ಮೂಡಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗುವವರೆಗೆ ಬಿಜೆಪಿ ನಿರಂತರ ಕಾನೂನು ಹೋರಾಟ ನಡೆಸಲಿದೆ ಎಂದು ಅವರು ಹೇಳಿದರು.

ಅಧಿಕಾರಿಗಳು ತಪ್ಪು ಮಾಡಿದ್ದಲ್ಲಿ ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಿ. ಅದನ್ನು ಬಿಟ್ಟು ಹೀಗೆ ಸಭೆಯಲ್ಲಿ ಮಾತನಾಡುವುದು ತರವಲ್ಲ. ಕೇವಲ ಆರ್.ಪಿ. ಜಾಧವ್ಗೆ ಮಾತ್ರವಲ್ಲ, ನಿಮ್ಮಂಥ ನೂರು ಜನರಿಗೆ ಒದಿತಿನಿ ಅಂದಿದ್ದು ಎಲ್ಲ ಅಧಿಕಾರಿಗಳಿಗೆ ಅಂದಂತಾಗಿದೆ ಎಂದು ಅವರು ವ್ಯಾಖ್ಯಾನಿಸಿದರು.

ಇತ್ತೀಚೆಗೆ ಫೇಸ್ಬುಕ್ನಲ್ಲಿ ಪ್ರಿಯಾಂಕ್ ಖರ್ಗೆ ಅವರಿಗೆ ಅವಮಾನಿಸಿದ್ದ ಬರಹವನ್ನು ಶೇರ್ ಮಾಡಿದ ಬಿಜೆಪಿ ಮುಖಂಡ ರವಿ ಎಂಬುವರನ್ನು ಬಂಧಿಸಲು ಪೊಲೀಸರು ಮಧ್ಯರಾತ್ರಿ ಮನೆಗೆ ನುಗ್ಗಿದ್ದು ಯಾವ ನ್ಯಾಯ ಎಂದು ಖಾರವಾಗಿ ಪ್ರಶ್ನಿಸಿದ ಅವರು, ಪೊಲೀಸರನ್ನು ಸಚಿವರು ತಮ್ಮ ಕೈಗೊಂಬೆಯಾಗಿಸಿಕೊಂಡು ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.

ಸುಶೀಲಾಬಾಯಿ ರಾಠೋಡ, ರಾಮು ರಾಠೋಡ, ಸುಭಾಷ ಗೊಬ್ಬೂರ, ಆನಂದ ಚವ್ಹಾಣ್ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಸಚಿವರ ಬೆಂಬಲಿಗರಿಂದಲೇ ಅಕ್ರಮ ಮರಳುಗಾರಿಕೆ
ಚಿತ್ತಾಪುರ ತಾಲೂಕಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಬೆಂಬಲಿಗರು ಹಾಗೂ ಹಿಂಬಾಲಕರು ಅಕ್ರಮವಾಗಿ ಮರಳು ಗಣಿಗಾರಿಕೆ ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ವಾಲ್ಮೀಕಿ ನಾಯಕ ಆರೋಪಿಸಿದರು. ಕಾನೂನು ಬಾಹಿರ ಚಟುವಟಿಕೆ ನಡೆಸುವುದಲ್ಲದೆ ಅಧಿಕಾರಿಗಳನ್ನು ಸಹ ಗದರುತ್ತಿದ್ದಾರೆ. ಇದೆಲ್ಲ ಗಮನಿಸಿದರೆ ಅಕ್ರಮ ಚಟುವಟಿಕೆಗಳಿಗೆ ಸಚಿವರೇ ಪರೋಕ್ಷವಾಗಿ ಕುಮ್ಮಕ್ಕು ನೀಡುತ್ತಿರುವಂತಿದೆ ಎಂದು ವಾಗ್ದಾಳಿ ನಡೆಸಿದರು.

ಒದಿತಿನಿ ಪದ ಬಳಸಿದ್ದರಿಂದ ಪ್ರಿಯಾಂಕ್ ಖರ್ಗೆ ಅವರ ಸಂಸ್ಕೃತಿ ಎಂಥದ್ದು ಎಂಬುದನ್ನು ತೋರಿಸುತ್ತದೆ. ಅಧಿಕಾರಿಗಳಲ್ಲಿ ಭಯ ಮೂಡಿಸುವ ಹುನ್ನಾರ ಇದಾಗಿದೆ. ಪ್ರಜಾಪ್ರಭುತ್ವ, ಸಂವಿಧಾನ ಬಗ್ಗೆ ಮಾತನಾಡುವ ಅವರು, ಹೀಗೆ ವತರ್ಿಸಿದ್ದು ಶೋಭೆ ತರುವಂಥದ್ದಲ್ಲ. ಕೂಡಲೇ ಕ್ಷಮೆಯಾಚಿಸಬೇಕು.
| ಸುಭಾಷ ರಾಠೋಡ ಬಿಜೆಪಿ ಹಿರಿಯ ಮುಖಂಡ

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...