18 C
Bangalore
Friday, December 6, 2019

ಸಾಧಕರ ರೂಪಿಸಿದ ಎಎಸ್​ಬಿಆರ್​ಗೆ ಸುವರ್ಣ ಸಂಭ್ರಮ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಬಾಬುರಾವ ಯಡ್ರಾಮಿ ಕಲಬುರಗಿ
ಬರ ಪ್ರದೇಶ ಎಂಬ ಶಾಪ, ಹಿಂದುಳಿದ ಹಣೆಪಟ್ಟಿ ಕಟ್ಟಿಕೊಂಡೇ ಹೊರಟಿದ್ದ ಕಲಬುರಗಿಯಲ್ಲಿ ಶೈಕ್ಷಣಿಕ ಕ್ರಾಂತಿ ಮೂಲಕ ದೇಶವೇ ಹೆಮ್ಮೆಪಡುವಂಥ ಸಾಧಕರನ್ನು ರೂಪಿಸಿ ಭಾರತಾಂಬೆ ಸೇವೆಗೆ ಅರ್ಪಿಸಿದ ಕೀರ್ತಿ ಶರಣರ ಸಂತರ ನಾಡಿನ ಪ್ರಥಮ ಪಬ್ಲಿಕ್ ಶಾಲೆ ಎಂಬ ಹೆಗ್ಗಳಿಕೆಯ ಎಸ್​ಬಿಆರ್​ಗೆ ಈಗ ಸುವರ್ಣ ಸಂಭ್ರಮ.

ನಮ್ಮವರಿಗೆ ಉನ್ನತ ಗುಣಮಟ್ಟದ ಶಿಕ್ಷಣ ಸಿಗುವಂತಾಗಬೇಕು. ರಾಜರ ಮಕ್ಕಳಂತೆ ಕಲಿಯಬೇಕು ಎಂಬ ಮಹದಾಸೆಯೊಂದಿಗೆ ಮಹಾದಾಸೋಹಿ ಶರಣಬಸವೇಶ್ವರ ಸಂಸ್ಥಾನ ಪೀಠಾಧಿಪತಿ ಡಾ.ಶರಣಬಸವಪ್ಪ ಅಪ್ಪ ಕನಸು ಹೊತ್ತು ಹಲವೆಡೆ ಸುತ್ತಾಡಿ ಅಧ್ಯಯನ ನಡೆಸಿದ ಬಳಿಕ ಪ್ರತಿಷ್ಠಿತ ಶಾಲೆಗಳ ಪಟ್ಟಿಯಲ್ಲಿ ಶರಣಬಸವೇಶ್ವರ ವಸತಿ ಪಬ್ಲಿಕ್ ಶಾಲೆ 1967ರಲ್ಲಿ ಆರಂಭವಾಯಿತು.

ಎಸ್ಎಸ್ಎಲ್ಸಿ ಪ್ರಥಮ ಬ್ಯಾಚ್ 1977ರಲ್ಲಿ ಹೊರಬಂದಿತು. ಕೇವಲ 12 ವಿದ್ಯಾರ್ಥಿಗಳು, 15 ರೂ. ಶುಲ್ಕದೊಂದಿಗೆ ಆರಂಭವಾದ ಈ ಶಾಲೆಯಲ್ಲೀಗ 11000ಕ್ಕೂ ಅಧಿಕ ಮಕ್ಕಳು ಜ್ಞಾನಾರ್ಜನೆ ಪಡೆದುಕೊಳ್ಳುತ್ತಿರುವುದು ಹೆಮ್ಮೆಯ ವಿಷಯ.

ಇಷ್ಟೊಂದು ಮಕ್ಕಳು ಒಂದೇ ಶಾಲೆಯಲ್ಲಿ ಓದುತ್ತಿರುವುದು ರಾಜ್ಯದಲ್ಲೇ ಮೊದಲು. ಕಲಬುರಗಿಯಲ್ಲಿ ಪಬ್ಲಿಕ್ ಶಾಲೆ ಆರಂಭಿಸಲು ಡೆಲ್ಲಿ ಪಬ್ಲಿಕ್ ಶಾಲೆ, ಡೆಹರಾಡೂನ್ ಪಬ್ಲಿಕ್ ಶಾಲೆ, ಊಟಿ ಹೀಗೆ ದೇಶದ ಪ್ರತಿಷ್ಠಿತ ಪಬ್ಲಿಕ್ ಶಾಲೆಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ ಕಲಬುರಗಿಯಲ್ಲಿ ಕಾರ್ಯಾರಂಭ ಮಾಡಲಾಯಿತು ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರೂ ಆಗಿರುವ ಡಾ.ಶರಣಬಸವಪ್ಪ ಅಪ್ಪ ತಮ್ಮ ಸ್ಮತಿಪಟಲದಿಂದ ನೆನಪಿನ ಬುತ್ತಿ ಬಿಚ್ಚಿಟ್ಟರು.

ನವೆಂಬರ್ 9ರಿಂದ 13ವರೆಗೆ ಶರಣಬಸವೇಶ್ವರ ವಸತಿ ಪಬ್ಲಿಕ್ (ಎಸ್ಬಿಆರ್) ಶಾಲೆ ಸುವರ್ಣ ಮಹೋತ್ಸವ ಹಾಗೂ ಹಳೇ ವಿದ್ಯಾರ್ಥಿಗಳ ಸಮ್ಮಿಲನಕ್ಕೆ ಶರಣರ ನಾಡು ಅಣಿಯಾಗಿದೆ.

ಐಎಎಸ್ ಅಧಿಕಾರಿಗಳು, ಸೆಲೆಬ್ರಿಟಿ, ಉದ್ಯಮಿಗಳು: ಎಸ್​ಬಿಆರ್​ಗೆ ಶಾಲೆಯಲ್ಲಿ ಓದಿದ್ದ ತನ್ವೀರ್ ಶೇಖ್, ರಾಜೇಶ ರಾಠೋಡ, ಅಮರೇಶ್ವರ ಪಾಟೀಲ್, ರಟಕಲ್ ಸೇರಿ 6 ಜನ ಐಎಎಸ್, ಇಬ್ಬರು ಐಎ್ಎಸ್ ಅಧಿಕಾರಿಗಳಾಗಿ ಹೊರಹೊಮ್ಮಿದ್ದಾರೆ. ಅಲ್ಲದೆ ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್ ಮೊಮ್ಮಗಳು ಸಹ ಇದೇ ಸಂಸ್ಥೆಯಲ್ಲಿ ಕಲಿತಿದ್ದು ಇನ್ನೊಂದು ಹೆಮ್ಮೆ. ಖ್ಯಾತ ಚಿತ್ರನಟಿ ಮೇಘನಾ ಗಾಂವಕರ್ ಸೇರಿ ಹಲವು ಸೆಲೆಬ್ರಿಟಿಗಳು ಸಹ ಹೊರಹೊಮ್ಮಿದ್ದಾರೆ. ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ, ಗದಗ ಮಾಜಿ ಶಾಸಕ ಶ್ರೀಶೈಲಪ್ಪ ಬಿರಾದಾರ, ಶಹಾಪುರ ಮಾಜಿ ಶಾಸಕ ಗುರು ಪಾಟೀಲ್ ಶಿರವಾಳ, ಯಾದಗಿರಿ ಹೆಚ್ಚುವರಿ ಎಸ್ಪಿ ಹಣಮಂತರಾಯ ಹೊಸಪೇಟೆ, ಸ್ಪರ್ಶ ಆಸ್ಪತ್ರೆ ಖ್ಯಾತ ವೈದ್ಯರಾದ ಡಾ.ಶರಣಗೌಡ ಪಾಟೀಲ್, ಉದ್ಯಮಿಗಳಾದ ಲಿಂಗರಾಜಪ್ಪ ಅಪ್ಪ, ಶ್ರೀಕಾಂತ ಲಾಹೋಟಿ, ಸಂತೋಷ ಬಿಲಗುಂದಿ, ರಾಘವೇಂದ್ರ ಮೈಲಾಪುರ ಮೊದಲಾದ ಸಾಧಕರು ಈ ಸಂಸ್ಥೆಯಲ್ಲೇ ಕಲಿತವರು.

ಸುವರ್ಣ ಮಹೋತ್ಸವ ಉದ್ಘಾಟನೆ ಇಂದು
ಕಲಬುರಗಿ ಶರಣಬಸವ ವಿಶ್ವವಿದ್ಯಾಲಯ ಹಾಗೂ ಎಸ್ಬಿಆರ್ ಕ್ಯಾಂಪಸ್ನಲ್ಲಿ ಸುವರ್ಣ ಸಂಭ್ರಮಕ್ಕಾಗಿ ಬೃಹತ್ ವೇದಿಕೆ ಹಾಕಲಾಗಿದ್ದು, ಸಕಲ ಸಿದ್ಧತೆ ಪೂರ್ಣಗೊಂಡಿವೆ. ಶುಕ್ರವಾರ ಬೆಳಗ್ಗೆ 10ಕ್ಕೆ ಸುವರ್ಣ ಮಹೋತ್ಸವ ಹಾಗೂ ಎಸ್ಬಿಆರ್ ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಉದ್ಘಾಟನಾ ಸಮಾರಂಭ ಡಾ.ಶರಣಬಸವಪ್ಪ ಅಪ್ಪ ಸಾನ್ನಿಧ್ಯದಲ್ಲಿ ನಡೆಯಲಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಂಸದ ಮಲ್ಲಿಕಾರ್ಜುನ ಖರ್ಗೆ, ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ ಪಾಟೀಲ್, ಶರಣಬಸವ ವಿವಿ ಕುಲಪತಿ ಡಾ.ನಿರಂಜನ ನಿಷ್ಠಿ, ಲಿಂಗರಾಜಪ್ಪ ಅಪ್ಪ ಮುಖ್ಯ ಅತಿಥಿಗಳಾಗಿರುವರು. ಶಾಲೆ ಹಳೆಯ ವಿದ್ಯಾರ್ಥಿಯೂ ಆಗಿರುವ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಸೇರಿ ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆ ಶಾಸಕರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಸಂಜೆ ಕಾರ್ಯಕ್ರಮದಲ್ಲಿ ಸುಪ್ರೀಂಕೋರ್ಟ್​ ವಿಶ್ರಾಂತ ನ್ಯಾಯಾಧೀಶ ಶಿವರಾಜ ಪಾಟೀಲ್ ಸೇರಿ ಶಾಸಕರು, ಖ್ಯಾತ ವೈದ್ಯರು, ಹಳೆಯ ವಿದ್ಯಾರ್ಥಿಗಳಾದ ಡಾ.ಶೇಖರ ಪಾಟೀಲ್, ಡಾ.ರಾಜಶೇಖರ ಹಲಕೂಡ, ಡಾ.ಶಿವಾನಂದ ದೇವರಮನಿ ಪಾಲ್ಗೊಳ್ಳಲಿದ್ದಾರೆ. ನಂತರ ಖ್ಯಾತ ಸಂಗೀತಗಾರ ರಾಜೇಶ್ ಕೃಷ್ಣನ್ ತಂಡದವರಿಂದ ಸಂಗೀತ ಸಂಜೆ ನಡೆಯಲಿದೆ.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...