ಕೆಎಲ್‌ಇ ಉಪಾಧ್ಯಕ್ಷ, ಶಿಕ್ಷಣ ಪ್ರೇಮಿ ಅಶೋಕ ಬಾಗೇವಾಡಿ ಇನ್ನಿಲ್ಲ

Latest News

ನಿವೇಶನ ನೀಡಲು ಮೀನಮೇಷ

ಶೃಂಗೇರಿ: ತಾಲೂಕು ಕಚೇರಿ ದನದ ದೊಡ್ಡಿಯಾಗಿದೆ. ಬಡವರಿಗೆ ನಿವೇಶನ ನೀಡಲು ಜಾಗವೇ ಇಲ್ಲ ಎನ್ನುವ ಅಧಿಕಾರಿಗಳು ಮಾನವೀಯತೆ ಮರೆಯುತ್ತಿದ್ದಾರೆ. ಹಾಗಿದ್ದರೆ ಕಚೇರಿಗೆ ಬೀಗ...

ಶಾಸಕರ ಅನುದಾನದಲ್ಲಿ ಶುದ್ಧ ಗಂಗಾ ಘಟಕ

ಅಜ್ಜಂಪುರ: ಚುನಾವಣೆ ವೇಳೆ ಸಾಕಷ್ಟು ನಿರೀಕ್ಷೆ ಇರಿಸಿಕೊಂಡು ಗ್ರಾಮೀಣ ಮತದಾರರು ನನ್ನ ಕೈಹಿಡಿದಿದ್ದಾರೆ. ಅವರ ಋಣ ತೀರಿಸುವ ಹೊಣೆ ನನ್ನ ಮೇಲಿರುವುದರಿಂದ ಗ್ರಾಮೀಣ...

ಸಚಿವ, ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿ

ಚಿಕ್ಕಮಗಳೂರು: ಡಾ. ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿಲ್ಲ ಎಂದು ಸುತ್ತೋಲೆ ಹೊರಡಿಸುವ ಮೂಲಕ ರಾಜ್ಯ ಶಿಕ್ಷಣ ಇಲಾಖೆ ಅಂಬೇಡ್ಕರ್ ಅವರನ್ನು ಅಪಮಾನಿಸಿದೆ ಎಂದು...

ಇನ್ನು ನಾಲ್ಕೈದು ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಶಿವಸೇನೆ-ಕಾಂಗ್ರೆಸ್​-ಎನ್​ಸಿಪಿ ಮೈತ್ರಿ ಸರ್ಕಾರ ರಚನೆ; ಇಂದು ಸಂಜೆ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ

ಮುಂಬೈ: ಇಂದು ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್​ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ 50 ನಿಮಿಷ ಮಾತುಕತೆ ನಡೆಸಿದ್ದಾರೆ. ಅದಾದ ಬಳಿಕ ಎನ್​ಸಿಪಿ ಹಾಗೂ...

ಕಲ್ಲು ಪಾಚಿ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿ ಬಂಧನ

ಪಿರಿಯಾಪಟ್ಟಣ : ಪಟ್ಟಣ ವ್ಯಾಪ್ತಿಯ ತಾತನಹಳ್ಳಿ ಗೇಟ್ ಸಮೀಪ ಗುರುವಾರ ಅರಣ್ಯ ಪ್ರದೇಶಗಳಲ್ಲಿ ದೊರಕುವ ಕಲ್ಲು ಪಾಚಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ...

ಬೆಳಗಾವಿ: ಕೆಎಲ್‌ಇ ಸಂಸ್ಥೆಯ ಉಪಾಧ್ಯಕ್ಷ , ಶಿಕ್ಷಣ ಪ್ರೇಮಿ ನಿಪ್ಪಾಣಿಯ ಅಶೋಕ ಬಾಗೇವಾಡಿ( 74) ಶುಕ್ರವಾರ ಮಧ್ಯಾಹ್ನ ಕೆಎಲ್‌ಇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮಧುಮೇಹದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಗೆ ದಾಖಲಾಗಿದ್ದರು.

ನಿಪ್ಪಾಣಿಯಲ್ಲಿ ತಂಬಾಕು ವರ್ತಕರಾಗಿ ಗುರುತಿಸಿಕೊಂಡಿದ್ದ ಅವರು, ಕಳೆದ 48 ವರ್ಷಗಳಿಂದ ಕೆಎಲ್‌ಇ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. ಅನೇಕ ವರ್ಷಗಳಿಂದ ಕೆಎಲ್‌ಇ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ಹಿನ್ನೆಲೆ: 1945 ಮಾರ್ಚ್ 22ರಂದು ನಿಪ್ಪಾಣಿಯಲ್ಲಿ ಜನಿಸಿದ ಅಶೋಕ ಬಾಗೇವಾಡಿ ಬಿ.ಕಾಂ.ಪದವೀಧರರು. ಕೆಎಲ್‌ಇ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾಗಿ 1975ರಲ್ಲಿ ಆಯ್ಕೆಯಾಗಿದ್ದರು. ಸುದೀರ್ಘ 45 ವರ್ಷ ಕೆಎಲ್‌ಇ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿರುವ ಅವರು 2001ರಲ್ಲಿ ಕೆಎಲ್‌ಇ ಸಂಸ್ಥೆಯ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷರಾಗಿ ಆಯ್ಕೆ ಹೊಂದಿ ಕಾರ್ಯನಿರ್ವಹಿಸುತ್ತಿದ್ದರು. ಮೃತರಿಗೆ ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಬಳಗವಿದೆ.

ಅಶೋಕ ಬಾಗೇವಾಡಿ ಅವರ ತಂದೆ ದಿ.ಗಣಪತಿ ಬಾಗೇವಾಡಿ ಅವರು, 1972 ರಲ್ಲಿ ಕೆಎಲ್‌ಇ ಸಂಸ್ಥೆಯ ನಿರ್ದೇಶಕರಾಗಿದ್ದರು. ಮರಾಠಿ ಪ್ರಭಾವದ ಪ್ರದೇಶದಲ್ಲಿ ನೆಲೆ ನಿಂತು ಕನ್ನಡ ಪ್ರೇಮಿ ಬಾಗೇವಾಡಿ ಅವರು, ಗಡಿಭಾಗ ನಿಪ್ಪಾಣಿಯಲ್ಲಿ ಕನ್ನಡ ಶಾಲೆ ಆರಂಭಗೊಳ್ಳಲು ಮಹತ್ವದ ಪಾತ್ರವಹಿಸಿದ್ದರು. ಶಿಕ್ಷಣ ಪ್ರಸಾರಕ್ಕಾಗಿಯೇ ಅವರು ನೀಡಿದ ದಾನದ ಫಲವಾಗಿ ಕೆಎಲ್‌ಇ ಪದವಿ ಕಾಲೇಜು ನಿಪ್ಪಾಣಿಯಲ್ಲಿ ತಲೆ ಎತ್ತಲು ಸಾಧ್ಯವಾಯಿತು.
ಕೆಎಲ್‌ಇ ಸಂಸ್ಥೆಯು ಅವರ ಸ್ಮರಣಾರ್ಥ ಜಿ.ಐ.ಬಾಗೇವಾಡಿ ಹೆಸರಿನಲ್ಲಿಯೇ ಪದವಿ ಕಾಲೇಜು ಕಾರ್ಯನಿರ್ವಹಿಸುತ್ತಿದೆ. ಅಶೋಕ ಬಾಗೇವಾಡಿ ಸಹ ತಮ್ಮ ತಂದೆಯವರ ಹೆಜ್ಜೆಯಲ್ಲಿಯೇ ಹೆಜ್ಜೆ ಇಟ್ಟು ಗಡಿಭಾಗದಲ್ಲಿ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಕನ್ನಡ ಭಾಷಿಕರನ್ನು ಸಂಘಟಿಸಿದ್ದರು. ಅವರ ಮುಂದಾಳತ್ವದಲ್ಲಿ ಕೆಎಲ್‌ಇ ಆಂಗ್ಲ ಮಾಧ್ಯಮ ಶಾಲೆ, ಡಿಪ್ಲೋಮಾ ಫಾರ್ಮಸಿ, ಬಿಬಿಎ, ಬಿಸಿಎ, ಪದವಿ ಹಾಗೂ ಪದವಿಪೂರ್ವ ಕಾಲೇಜು ಸ್ಥಾಪನೆಗೊಂಡಿರುವುದು ವಿಶೇಷವಾಗಿದೆ.

ಡಾ.ಪ್ರಭಾಕರ ಕೋರೆ ಸಂತಾಪ: ಕೆಎಲ್‌ಇ ಸಂಸ್ಥೆಯು ಒಬ್ಬ ಹಿರಿಯ ಮುತ್ಸದ್ಧಿ ಹಾಗೂ ಕುಟುಂಬದ ಸದಸ್ಯನನ್ನು ಕಳೆದುಕೊಂಡಂತಾಗಿದೆ. ದಿವಂಗತರ ಆತ್ಮಕ್ಕೆ ಆ ಭಗವಂತನು ಚಿರಶಾಂತಿ ನೀಡಲಿ ಎಂದು ಸಂಸ್ಥೆಯ ಕಾರ್ಯಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಕೆಎಲ್‌ಇ ಸಂಸ್ಥೆಯ ಬೆಳವಣಿಗೆಯಲ್ಲಿ ಅಹರ್ನಿಶಿ ಶ್ರಮಿಸಿದ ಅಶೋಕಣ್ಣ ಬಾಗೇವಾಡಿ ಅವರೊಂದಿಗೆ ಕಳೆದ 35 ವರ್ಷಗಳಿಂದ ನನ್ನ ಒಡನಾಟವಿತ್ತು. ನನ್ನ ಸಹೋದರ ಚಿದಾನಂದ ಕೋರೆ ಅವರ ಜತೆ ಕೈಜೋಡಿಸಿದ್ದ ಅವರು ನಂತರ ನನ್ನೊಂದಿಗೂ ಸಂಸ್ಥೆಯ ವಿಕಾಸದಲ್ಲಿ ಅಮೂಲ್ಯ ಸಲಹೆ ಸೂಚನೆ ನೀಡಿ ಮಾರ್ಗದರ್ಶನ ಮಾಡಿದ್ದರು ಎಂದು ಅವರು ಸ್ಮರಿಸಿದ್ದಾರೆ.

ಅಶೋಕಣ್ಣ ಅವರ ಅಗಲಿಕೆಯ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಕುಟುಂಬ ವರ್ಗಕ್ಕೆ ನೀಡಲಿ ಎಂದು ಕೆಎಲ್‌ಇ ಸಂಸ್ಥೆಯ ಸಮಸ್ತ ಪರಿವಾರದ ವತಿಯಿಂದ ಪ್ರಾರ್ಥಿಸುತ್ತೇನೆ ಎಂದು ಸಂಸ್ಥೆಯ ಕಾರ್ಯಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ ತಿಳಿಸಿದ್ದಾರೆ. 

- Advertisement -

Stay connected

278,636FansLike
573FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...