More

    ಆತ ಅದ್ಭುತ ಆಟಗಾರ ಆದರೆ…; ಕೆ.ಎಲ್. ರಾಹುಲ್​ರನ್ನು ಆಯ್ಕೆ ಮಾಡದಿರುವ ಕುರಿತು ಅಜಿತ್​ ಅಗರ್ಕರ್​ ನೀಡಿದ ಸ್ಪಷ್ಟನೆ ಹೀಗಿದೆ

    ಮುಂಬೈ: ಜೂನ್​ 01ರಿಂದ ಯುಎಸ್​ಎ ಹಾಗೂ ವೆಸ್ಟ್​ ಇಂಡೀಸ್​ ಆತಿಥ್ಯದಲ್ಲಿ ಆರಂಭವಾಗಲಿರುವ ಟಿ-20 ವಿಶ್ವಕಪ್​ಗೆ ಈಗಾಗಲೇ 15 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ಪರ-ವಿರೋಧದ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದೆ. ಐಪಿಎಲ್​ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದರು ಪ್ರತಿಭಾವಂತ ಆಟಗಾರನನ್ನು ತಂಡದಿಂದ ಕೈಬಿಟ್ಟಿರುವುದು ಹಲವರ ಕಣ್ಣು ಕೆಂಪಗಾಗಿಸಿದೆ. ಇದಕ್ಕೆ ಸಂಬಂಧಿಸಿದಂತೆ ಕೇಳಿ ಬರುತ್ತಿರುವ ಮೊದಲ ಹೆಸರೆಂದರೆ ಅದು ಕನ್ನಡಿಗ ಕೆ.ಎಲ್. ರಾಹುಲ್​ ಅವರದ್ದು.

    ವಿಕೆಟ್​ ಕೀಪರ್​ ಬ್ಯಾಟ್ಸ್​ಮನ್​ ಆಗಿರುವ ಕೆ.ಎಲ್. ರಾಹುಲ್​ರನ್ನು ಮುಂಬರುವ ಚುಟುಕು ಸಮರಕ್ಕೆ ಆಯ್ಕೆ ಮಾಡದೇ ಇರುವುದು ಹಲವು ಅನುಮಾನಗಳಿಗೆ ಆಸ್ಪದ ಮಾಡಿಕೊಟ್ಟಿದೆ. ಇದಕ್ಕೆ ಸಂಬಂಧಿಸಿದಂತೆ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್​ ಅಗರ್ಕರ್​ ಪ್ರತಿಕ್ರಿಯಿಸಿದ್ದು, ರಾಹುಲ್​ರನ್ನು ಆಯ್ಕೆ ಮಾಡದಿರುವ ಕುರಿತು ಕಾರಣಗಳನ್ನು ತಿಳಿಸಿದ್ದಾರೆ.

    ಇದನ್ನೂ ಓದಿ: ಪ್ರಜ್ವಲ್​ ಎಲ್ಲೇ ಇದ್ದರೂ ಹಿಡಿದು ತರುವುದು ನಮ್ಮ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ

    ಮುಖ್ಯವಾಗಿ ನಮಗೆ ಮಧ್ಯಮ ಕ್ರಮಾಂಕದಲ್ಲಿ ಆಟಗಾರನ ಅಗತ್ಯವಿತ್ತು. ಆದರೆ, ರಾಹುಲ್​ ಅಗ್ರಸ್ಥಾನದಲ್ಲಿ ಆಡುತ್ತಿದ್ದರು. ಈ ಕಾರಣಕ್ಕೆ ಅವರನ್ನು ಆಯ್ಕೆ ಮಾಡಿಲ್ಲ. ಮಧ್ಯಮ ಕ್ರಮಾಂಕದಲ್ಲಿ ಸಂಜು ಸ್ಯಾಮ್ಸನ್ ಉತ್ತಮ ಪ್ರದರ್ಶನ ನೀಡಿದ್ದರು. ರಿಷಬ್ ಪಂತ್ ಕೂಡ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದರು. ಇದು ಯಾರು ಉತ್ತಮ ಮತ್ತು ಯಾರು ಅಲ್ಲ ಎಂಬುದರ ಬಗ್ಗೆ ಅಲ್ಲ. ಪಂತ್ ಮತ್ತು ಸಂಜು ಮಧ್ಯಮ ಕ್ರಮಾಂಕದಲ್ಲಿ ಹೆಚ್ಚು ಸಮಯ ಬ್ಯಾಟಿಂಗ್ ಮಾಡಿದ್ದಾರೆ. ಹೀಗಾಗಿ ಇವರನ್ನು ಪರಿಗಣಿಸಬೇಕಾಯಿತು ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್​ ಅಗರ್ಕರ್​ ಸ್ಪಷ್ಟನೆ ನೀಡಿದ್ದಾರೆ.

    ಟಿ-20 ವಿಶ್ವಕಪ್​ಗೆ ಭಾರತ ತಂಡ:

    ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್​​ದೀಪ್ ಯಾದವ್, ಯಜುವೇಂದ್ರ ಚಹಾಲ್, ಅರ್ಷ್​ದೀಪ್​ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ. ಅದರಂತೆ ಶುಭ್​ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಹಾಗೂ ಆವೇಶ್ ಖಾನ್​ ಅವರನ್ನು ಮೀಸಲು ಆಟಗಾರರನ್ನಾಗಿ ಆಯ್ಕೆ ಮಾಡಲಾಗಿದೆ. 

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts