ಅನಾಹುತಗಳು ಸಂಭವಿಸಿದಾಗ ಧೈರ್ಯ ಅವಶ್ಯ : ಡಾ.ಜಿ.ಎಸ್.ಚಂದ್ರಶೇಖರ್ ಕಿವಿಮಾತು

New Project (6)
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಯಾವುದೇ ಅನಾಹುತಗಳು ಸಂಭವಿಸಿದ್ದಲ್ಲಿ ಧೈರ್ಯ ಕಳೆದುಕೊಳ್ಳಬಾರದು. ಪ್ರಾಥಮಿಕ ಚಿಕಿತ್ಸೆ ನೀಡಿ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆದರೆ ಜೀವರಕ್ಷಣೆ ಸಾಧ್ಯ ಎಂದು ಆದರ್ಶ ಆಸ್ಪತ್ರೆ ಆಡಳಿತ ನಿರ್ದೇಶಕ ಡಾ.ಜಿ.ಎಸ್.ಚಂದ್ರಶೇಖರ್ ಹೇಳಿದರು.

ಪರೀಕ ಸೌಖ್ಯವನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಮಣಿಪಾಲ ಕೆಎಂಸಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಯಿಂದ ಆರೋಗ್ಯ ರಕ್ಷಣೆಯಲ್ಲಿ ಪ್ರಾಥಮಿಕ ಚಿಕಿತ್ಸೆಯ ಮಹತ್ವದ ಬಗ್ಗೆ ಮಾಹಿತಿ ಕಾರ್ಯಾಗಾರದ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ನೀಡಿದರು.

ಅಮೆರಿಕದಂತಹ ದೇಶಗಳಿಂದ ಬಂದ ವೈದ್ಯಕೀಯ ಸಲಹೆಗಳನ್ನು ಭಾರತದ ಜನತೆ ನಂಬುವುದು ಸರಿಯಲ್ಲ. ನಮ್ಮ ದೇಶದಲ್ಲಿಯೇ ವೈದ್ಯಕೀಯ ಕ್ಷೇತ್ರದಲ್ಲಿ ಅನೇಕ ಸಂಶೋಧನೆಗಳು ನಡೆಯುತ್ತಿವೆ. ಹೊಸ ಹೊಸ ಕಾಯಿಲೆಗಳು ಹುಟ್ಟಿಕೊಳ್ಳುತ್ತಿರುವ ಸಮಯದಲ್ಲಿ ವೈದ್ಯಕೀಯ ಕ್ಷೇತ್ರಕ್ಕೆ ಸವಾಲು ಎದುರಾಗುತ್ತಲೇ ಇರುತ್ತಾವೆ. ಅವುಗಳಿಗೆ ಔಷಧ ಕಂಡುಕೊಳ್ಳುವಲ್ಲಿ ಭಾರತದ ಪ್ರಯತ್ನವೂ ಗಮನಾರ್ಹ ಎಂದು ಶ್ಲಾಸಿದರು.

ಮಾಹೆ ಸಂಸ್ಥೆ ವೈದ್ಯ ಡಾ.ಅರುಣ್ ಮಯ್ಯ, ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಬಿ.ಸೀತಾರಾಮ ತೋಳ್ಪಾಡಿತ್ತಾಯ ಶುಭಹಾರೈಸಿದರು. ಸೌಖ್ಯವನದ ಮುಖ್ಯ ವೈದ್ಯಾಧಿಕಾರಿ ಡಾ.ಗೋಪಾಲ್ ಪೂಜಾರಿ ಸ್ವಾಗತಿಸಿದರು. ವ್ಯವಸ್ಥಾಪಕ ಪ್ರವೀಣ್ ಕುಮಾರ್ ನಿರೂಪಿಸಿದರು. ಡಾ.ಶೋಭಿತ್ ಶೆಟ್ಟಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net