More

  ನಂದಿನಿ-ಅಮುಲ್ ಸಂಘರ್ಷ: ಕೆಎಂಎಫ್​ನಿಂದ ಹೊರಬಿತ್ತು ಮಹತ್ವದ ಸ್ಪಷ್ಟನೆ

  ಬೆಂಗಳೂರು: ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳವು ದೇಶದ ಎರಡನೇ ಅತಿ ದೊಡ್ಡ ಸಹಕಾರ ಹಾಲು ಮಹಾಮಂಡಳ ಸಂಸ್ಥೆಯಾಗಿದ್ದು, 26 ಲಕ್ಷ ಗ್ರಾಮೀಣ ರೈತರಿಂದ ದಿನಂಪ್ರತಿ ಸರಾಸರಿ 85 ಲಕ್ಷ ಲೀಟರ್ ಹಾಲನ್ನು ಸಂಗ್ರಹಿಸಿ, ಸುಮಾರು 160ಕ್ಕೂ ಹೆಚ್ಚು ವಿವಿಧ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ರಾಜ್ಯದ ಜನತೆಗೆ ಕಳೆದ 4 ದಶಕಗಳಿಂದ ಒದಗಿಸುತ್ತಿದೆ.

  ಮುಂದಿನ ದಿನಗಳಲ್ಲಿ ಪ್ರತಿನಿತ್ಯ 1 ಕೋಟಿಗೂ ಅಧಿಕ ಲೀಟರ್ ಹಾಲು ಸಂಗ್ರಹಿಸುವ ಗುರಿ ಹೊಂದಲಾಗಿದೆ. ಕಳೆದ 5 ವರ್ಷಗಳ ಅವಧಿಯಲ್ಲಿ ಹಾಲಿನ ಸರಾಸರಿ ಶೇಖರಣಿ ಶೇ.6ರಿಂದ 7ರಷ್ಟು ಪ್ರಗತಿ ಇರುತ್ತದೆ. ಮಾರಾಟವು ಶೇ.25ರಷ್ಟು ಪ್ರಗತಿ ಸಾಧಿಸುತ್ತ, ದೇಶದ ವಿವಿಧ ರಾಜ್ಯಗಳಲ್ಲಿ ಹೊರ ರಾಜ್ಯಗಳಲ್ಲೂ ತನ್ನ ಮಾರಾಟ ಜಾಲ ವಿಸ್ತರಿಸುತ್ತ ಗ್ರಾಹಕರ ಆಯ್ಕೆಯ ನೆಚ್ಚಿನ ಬ್ರ್ಯಾಂಡ್ ಆಗಿದೆ.

  ಇದನ್ನೂ ಓದಿ: ಕನ್ನಡಿಗರು ನಂದಿನಿ ಉತ್ಪನ್ನಗಳನ್ನೇ ಖರೀದಿಸಿ, ಅಮುಲ್​ಗೆ ತಕ್ಕ ಉತ್ತರ ನೀಡಿ: ಕಸಾಪ ಅಧ್ಯಕ್ಷ ಮಹೇಶ ಜೋಶಿ

  ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್)ದ ಬಗ್ಗೆ ಕೆಲವು ವದಂತಿಗಳು ಹರಿದಾಡುತ್ತಿದ್ದು, ಕರ್ನಾಟಕ ಹಾಲು ಉತ್ಪಾದನಾ ಮಹಾಮಂಡಳ ಮತ್ತೊಂದು ದೊಡ್ಡ ಸಹಕಾರಿ ಸಂಸ್ಥೆಯೊಂದಿಗೆ ವಿಲೀನ ಮಾಡಲಾಗುತ್ತದೆ, ನಂದಿನಿ ಬ್ರ್ಯಾಂಡ್​ ಮತ್ತೊಂದು ಸಹಕಾರಿ ಸಂಸ್ಥೆಗೆ ಮಾರಾಟ ಮಾಡಲಾಗುತ್ತಿದೆ, ನಂದಿನಿ ಬ್ರ್ಯಾಂಡ್​ ಹಾಲು ಇನ್ನು ಮುಂದೆ ಮಾರುಕಟ್ಟೆಯಲ್ಲಿ ಲಭ್ಯವಾಗುವುದಿಲ್ಲ ಎನ್ನುವ ಬಗ್ಗೆ ಸಾಕಷ್ಟು ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದು, ಇದೆಲ್ಲವೂ ಸತ್ಯಕ್ಕೆ ದೂರವಾಗಿದ್ದು ಮತ್ತು ಅಂತಹ ಯಾವುದೇ ಬೆಳವಣಿಗೆಗಳು ಕೆಎಂಎಫ್‌ನಲ್ಲಿ ನಡೆದಿರುವುದಿಲ್ಲವೆಂದು ತಿಳಿಸಲು ಬಯಸುತ್ತೇವೆ.

  ಇದನ್ನೂ ಓದಿ: ನಂದಿನಿ-ಅಮುಲ್ ಸಂಘರ್ಷ: ಕೆಎಂಎಫ್ ಮಾಜಿ ಎಂಡಿ ಪ್ರೇಮನಾಥ್ ಏನಂತಾರೆ?

  ಕೆಎಂಎಫ್ ಹೆಚ್ಚುವರಿಯಾಗಿ ಹಾಲು ಉತ್ಪಾದನೆ ಮಾಡುವುದಕ್ಕಾಗಲಿ, ವ್ಯಾಪಾರ ವೃದ್ಧಿಗೋಸ್ಕರವಾಗಲಿ ದೇಶದ ಯಾವುದೇ ಸಹಕಾರ ಸಂಸ್ಥೆ ಅಥವಾ ಹಾಲು ಉತ್ಪಾದನಾ ಮಹಾಮಂಡಳಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿರುವುದಿಲ್ಲ. ಮುಂದುವರಿದು ಗುಣಮಟ್ಟ ಮತ್ತು ಸ್ಪರ್ಧಾತ್ಮಕ ಬೆಲೆಯ ಮೂಲಕವೇ ಮನೆ ಮಾತಾಗಿರೋ ನಂದಿನಿ ಹಾಲು ಇತರೆ ಹಾಲಿನ ಬ್ರ್ಯಾಂಡ್​ಗಳಿಗೆ ಪೈಪೋಟಿ ನೀಡುತ್ತ ಮಾರುಕಟ್ಟೆಯನ್ನು ವಿಸ್ತರಿಸುತ್ತಿದ್ದು, ಇತ್ತೀಚಿನ ವರ್ಷಗಳಲ್ಲಿ ದೇಶದ ಅನೇಕ ನಗರಗಳಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳು ಲಭ್ಯವಾಗುತ್ತಿವೆ. ಅವುಗಳಲ್ಲಿ ಮಹಾರಾಷ್ಟ್ರದ ಮುಂಬೈ, ಪುಣೆ, ಸೊಲ್ಲಾಪುರ್, ದೇಶದ ಮಧ್ಯಭಾಗವಾದ ವಿಧರ್ಭ ಪ್ರಾಂತ್ಯ (ನಾಗು‌) ಹೈದರಾಬಾದ್, ಚೆನ್ನೈ, ಕೇರಳ ಮತ್ತು ಗೋವಾದಲ್ಲಿ ಪ್ರತಿ ನಿತ್ಯ 7 ಲಕ್ಷಕ್ಕೂ ಅಧಿಕ ಲೀಟರ್ ಹಾಲು ಮತ್ತು ಮೊಸರನ್ನು ಸ್ಥಳೀಯವಾಗಿ ಅಲ್ಲಿನ ಗ್ರಾಹಕರಿಗೆ ಮಾರಾಟ ಮಾಡಲಾಗುತ್ತಿದೆ. ನಂದಿನಿ ಬ್ರ್ಯಾಂಡ್​ ದೇಶವ್ಯಾಪ್ತಿಯಲ್ಲಿ ಮತ್ತಷ್ಟು ವಿಸ್ತರಿಸುವ ಉದ್ದೇಶದಿಂದ ಕೆಎಂಎಫ್ ಮಾರುಕಟ್ಟೆ ವಿಸ್ತೀರ್ಣದ ಬಗ್ಗೆ ಹಲವಾರು ಯೋಜನೆಯನ್ನು ಹಮ್ಮಿಕೊಂಡಿದೆ. 26 ಲಕ್ಷ ಹೈನುಗಾರ ರೈತರ ಶ್ರಮ, 2 ಲಕ್ಷಕ್ಕೂ ಅಧಿಕ ಕಾರ್ಮಿಕರ ದುಡಿಮೆ, 6 ಕೋಟಿಗೂ ಅಧಿಕ ಗ್ರಾಹಕರ ಹಾರೈಕೆಯಿಂದ ಸಂಸ್ಥೆಯು ದೇಶದಲ್ಲಿ ಅತಿವೇಗವಾಗಿ ಬೆಳೆಯುತ್ತಿರೋ ಹಾಲು ಉತ್ಪಾದನಾ ಸಂಸ್ಥೆಯಾಗಿ ಬೆಳೆದು ನಿಂತಿದೆ. ಇಂತಹ ಸಂಸ್ಥೆಯ ಬಗ್ಗೆ ಸದ್ಯ ಹರಿದಾಡುತ್ತಿರೋ ಸುದ್ದಿಗಳು ಸುಳ್ಳಾಗಿದ್ದು ಗ್ರಾಹಕರು ಆತಂಕಪಡುವ ಅವಶ್ಯಕತೆ ಇಲ್ಲ.

  ಗ್ರಾಹಕರು ಎಂದಿನಂತೆ ‘ನಂದಿನಿ’ ಬ್ರ್ಯಾಂಡ್​ನ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಕೊಂಡು ಪ್ರೋತ್ಸಾಹಿಸಲು ಈ ಮೂಲಕ ವಿನಂತಿಸುತ್ತಿದ್ದೇವೆ ಎಂಬುದಾಗಿ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರು ಕೋರಿದ್ದಾರೆ.

  ಅಪರಿಚಿತರ ಬಳಿ ಲಿಫ್ಟ್ ಕೇಳಿಯೇ ಏಕಾಂಗಿಯಾಗಿ ಇಡೀ ರಾಜ್ಯ ಸುತ್ತಲಾರಂಭಿಸಿದ್ದಾಳೆ ಈ ಯುವತಿ: ಉದ್ದೇಶವಾದರೂ ಏನು?

  ಮನ ‘ಮುಟ್ಟು’ವ ಕಾರ್ಯ: ಮನೆಯೊಡತಿಗೆ ಮುಟ್ಟಾದಾಗ ರಾಣಿಯಂತೆ ನೋಡಿಕೊಳ್ಳುತ್ತಿರುವ ಗಂಡ-ಗಂಡುಮಕ್ಕಳು!

  ರಾಜ್ಯೋತ್ಸವ ರಸಪ್ರಶ್ನೆ - 22

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts