More

    ಗ್ರಾಹಕರಿಗೆ ಶಾಕ್ ನೀಡಿದ ಕೆಎಂಎಫ್​​: ಹಾಲಿನ ದರ ಹೆಚ್ಚಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ

    ಬೆಂಗಳೂರು: ಪ್ರತಿ ಲೀಟರ್ ಹಾಲಿನ ಮೇಲೆ 3 ರೂಪಾಯಿ ಹೆಚ್ಚಿಸುವಂತೆ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್​) ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

    ಕೆಎಂಎಫ್ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಅಧಿಕಾರಿಗಳು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಹಾಲಿನ ದರ ಏರಿಸುವಂತೆ ಮನವರಿಕೆ ಮಾಡಿದ್ದು, ಇದಕ್ಕೆ ಸಕಾರಾತ್ಮಕವಾಗಿ ಸಿಎಂ ಸ್ಪಂದಿಸಿದ್ದಾರೆ. ಕೆಎಂಎಫ್ ಶಿಫಾರಸ್ಸಿಗೆ ಒಪ್ಪಿಗೆ ಮೂಲಕ ಸರ್ಕಾರ ಕೊಡುವ 3 ರೂ.ಅನ್ನು ರೈತರಿಗೆ ನೀಡಲು ಕೆಎಂಎಫ್​ ನಿರ್ಧರಿಸಿದೆ.

    ಖಾಸಗಿ ಬ್ರಾಂಡ್‌ಗಳ (ಉತ್ಪನ್ನಗಳಿಗೆ) ಮಾರಾಟಕ್ಕೆ ಹೋಲಿಕೆ ಮಾಡಿದಾಗ ನಾವು ತೆಗೆದುಕೊಳ್ಳುವ ಬೆಲೆ 5-7 ರೂ. ಕಡಿಮೆ ಇದೆ. ಪ್ರತಿ ಲೀ. ಹಾಲನ್ನು 37 ರೂ.ಗೆ ಮಾರಾಟ ಮಾಡುತ್ತಿದ್ದೇವೆ. ಹಾಗಾಗಿ, ದರ ಹೆಚ್ಚಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಮುಂಬೈನಲ್ಲಿ ಪ್ರತಿ ನಿತ್ಯ 2 ಲಕ್ಷ ಲೀ. ಹಾಲು ಮಾರಾಟ ಮಾಡುತ್ತಿದ್ದೇವೆ. ಕಲ್ಕತ್ತಾ ಸೇರಿ ಉತ್ತರ ಭಾರತದ ರಾಜ್ಯಗಳಲ್ಲಿ ಹಾಲು ಮಾರಾಟ ಮಾಡುವ ಯೋಜನೆ ರೂಪಿಸಲಾಗಿದೆ.

    ಗೋವಾ, ತಮಿಳುನಾಡು ಮತ್ತು ಆಂಧ್ರಪ್ರದೇಶ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ ದಿನಗಳಲ್ಲಿ ಅಂದಾಜು 5 ಲಕ್ಷ ಲೀ. ಹಾಲು ಮಾರಾಟ ಮಾಡುವ ಗುರಿ ಹೊಂದಿದ್ದೇವೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ್ ಮಾಹಿತಿ ನೀಡಿದರು.

    ಮಳೆ ಹಾನಿ ಪರಿಶೀಲನೆಗೆ ಹೋಗಿ ಹೊಳೆ ನಡುವೆ ಸಿಲುಕಿದ ಅಧಿಕಾರಿಗಳು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts