More

  ನಂದಿನಿ ಹಾಲು, ಮೊಸರಿನ ದರ ಲೀಟರ್​ಗೆ ಎರಡು ರೂಪಾಯಿ ಹೆಚ್ಚಳ: ಫೆಬ್ರವರಿ ಒಂದರಿಂದ ನೂತನ ದರ ಜಾರಿ

  ಬೆಂಗಳೂರು: ನಂದಿನಿ ಹಾಲು ಹಾಗೂ ಮೊಸರಿನ ದರ ಏರಿಕೆಯಾಗಿದ್ದು, ಪ್ರತಿ ಲೀಟರ್​ಗೆ ಎರಡು ರೂಪಾಯಿ ಹೆಚ್ಚಳ ಮಾಡಲಾಗಿದೆ.

  ನಂದಿನಿ ಹಾಲಿನ ದರ ಲೀಟರ್​ಗೆ ಮೂರು ರೂಪಾಯಿ ಹೆಚ್ಚಿಸಲು ಕೆಎಂಎಫ್ ಪ್ರಸ್ತಾವನೆ ಸಲ್ಲಿಸಿತ್ತು. ಸರ್ಕಾರ ಎರಡು ರೂಪಾಯಿ ದರ ಹೆಚ್ಚಳಕ್ಕೆ ಒಪ್ಪಿಗೆ ನೀಡಿದ್ದು, ಹೊಸ ದರ ಫೆಬ್ರವರಿ 1 ರಿಂದ ಜಾರಿಯಾಗಲಿದೆ.

  ಹಾಲಿನ ದರ ಹೆಚ್ಚಳ ಅನಿವಾರ್ಯವಾಗಿತ್ತು. ಪ್ರತಿ ಲೀಟರ್​ಗೆ ನಾಲ್ಕು ರೂಪಾಯಿ ಹೆಚ್ಚಳ ಮಾಡಬೇಕೆಂಬ ಬೇಡಿಕೆ ಇತ್ತು. ಆದರೆ, ಜನರ ಮೇಲೆ ಹೆಚ್ಚಿನ ಹೊರೆಯಾಗಬಾರದು ಹಾಗೂ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಎರಡು ರೂಪಾಯಿ ಮಾತ್ರ ಹೆಚ್ಚಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೋಳಿ ಪ್ರತಿಕ್ರಿಯಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts