More

    ಮೂವರು ಡಿಸಿಎಂಗಳನ್ನು ನೇಮಕ ಮಾಡಿ ಎಂದು ಕೇಳುವುದರಲ್ಲಿ ತಪ್ಪೇನಿದೆ: ಕೆ.ಎನ್​. ರಾಜಣ್ಣ

    ತುಮಕೂರು: ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡುವಂತೆ ಕಾಂಗ್ರೆಸ್​ ಹೈಕಮಾಂಡ್​ಗೆ ಪತ್ರ ಬರೆಯಲಾಗುವುದು. ನಾವು ಕೇಳುವುದರಲ್ಲಿ ತಪ್ಪೇನಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಪ್ರಶ್ನಿಸಿದ್ದಾರೆ.

    ತುಮಕೂರಿನಲ್ಲಿ ಈ ಕುರಿತು ಮಾತನಾಡಿದ ಸಚಿವ ರಾಜಣ್ಣ ಅಕ್ಟೋಬರ್​ ಮೊದಲ ವಾರದಲ್ಲಿ ಈ ಸಂಬಂಧ ಕಾಂಗ್ರೆಸ್​ ಹೈಕಮಾಂಡ್​ಅನ್ನು ಭೇಟಿ ಮಾಡಿ ಚರ್ಚಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

    ಇದನ್ನೂ ಓದಿ: ಸನಾತನ ಧರ್ಮ ಹೇಳಿಕೆ; ಉದಯನಿಧಿ ಸ್ಟಾಲಿನ್​ಗೆ ಚಾಟಿ ಬೀಸಿದ ಮದ್ರಾಸ್​ ಹೈಕೋರ್ಟ್​

    ಪರಿಶಿಷ್ಟ ಜಾತಿ-ಪಂಗಡ, ವೀರಸೈವ-ಲಿಂಗಾಯತ, ಅಲ್ಪಸಂಖ್ಯಾತ ಸಮುದಾಯದಕ್ಕೆ ತಲಾ ಒಂದು ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಹೈಕಮಾಂಡ್​ಗೆ ಮನವಿ ಸಲ್ಲಿಸಲಾಗುವುದು. ಈ ವಿಚಾರವಾಗಿ ಅಕ್ಟೋಬರ್​ ಮೊದಲ ವಾರದಲ್ಲಿ ಹೈಕಮಾಂಡ್​ ಭೇಟಿ ಮಾಡಿ ಮನವರಿಕೆ ಮಾಡಲಾಗುವುದು. ಈ ವಿಚಾರಕ್ಕೆ ಸಹಮತ ವ್ಯಕ್ತಪಡಿಸಿರುವ ಮುಖಂಡರ ನಿಯೋಗವನ್ನು ಹೈಕಮಾಂಡ್​ ಬಳಿಗೆ ಕರೆದುಕೊಂಡು ಹೋಗಲಾಗುವುದು.

    ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನಾವು ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕಿದೆ. ಈ ಸಂಬಂಧ ಎಲ್ಲಾ ಸಮುದಾಯದ ಬೆಂಬಲ ನಮಗೆ ಬೇಕಾಗುತ್ತದೆ. ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡಿದರೆ ನಮಗೆ ಹಚ್ಚಿನ ಅನುಕೂಲವಾಗಲಿದೆ. ಈ ಮಾತನ್ನು ನಾನು ಡಿ.ಕೆ. ಶಿವಕುಮಾರ್​ ಹಾಗೂ ಅವರ ಸಹೋದರ ಡಿ.ಕೆ. ಸುರೇಶ್​ ವಿರುದ್ಧ ನೀಡುತ್ತಿಲ್ಲ. ಇತರರಿಗೂ ಅವಕಾಶ ನೀಡಬೇಕೆಂದು ಕೇಳುತ್ತಿದ್ದೇವೆ. ಅದರಲ್ಲಿ ತಪ್ಪೇನಿದೆ ಎಂದು ಸಚಿವ ಕೆ.ಎನ್. ರಾಜಣ್ಣ ಪ್ರಶ್ನಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts