More

    ಚಾಕು ಇರಿತ ಪ್ರಕರಣ, ಆರು ಮಂದಿ ಮೇಲೆ ಕೇಸ್

    ಗದಗ: ತಾಲೂಕಿನ ಮಲ್ಲಸಮುದ್ರದಲ್ಲಿ ಮೊಹರಂ ಮೆರವಣಿಗೆ ಸಂದರ್ಭದಲ್ಲಿ ಮಂಗಳವಾರ ನಡೆದಿದ್ದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಮೂವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಹೇಳಿದರು.
    ಬುಧವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟನೆಗೆ ಸಂಬಂಧಿಸಿದಂತೆ ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸೋಮು ಗುಡಿ, ಸಲ್ಮಾನ್, ಯಲ್ಲಪ್ಪ, ರಾಮಕೃಷ್ಣ, ಶಿವು, ದಯಾನಂದ ಈ ಆರು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪೈಕಿ ಸೋಮು, ಸಲ್ಮಾನ್ ಮತ್ತು ಯಲ್ಲಪ್ಪನನ್ನು ಬಂಧಿಸಲಾಗಿದೆ ಎಂದರು.
    ಬಂಧಿತರ ಪೈಕಿ ಸೋಮು ಗುಡಿ ಶ್ರೀರಾಮಸೇನೆ ಕಾರ್ಯಕರ್ತ ಎಂದು ತಿಳಿದು ಬಂದಿದೆ. ಆದರೆ, ಈ ಘಟನೆ ಕೋಮುದ್ವೇಷದಿಂದ ನಡೆದಂತೆ ಕಂಡು ಬಂದಿಲ್ಲ. ಮೊಹರಂ ಮೆರವಣಿಗೆ ಸಂದರ್ಭದಲ್ಲಿ ಸ್ನೇಹಿತರಾದ ಯಲ್ಲಪ್ಪ ಮತ್ತು ಸಲ್ಮಾನ್ ತಮಾಷೆಯಿಂದ ತಳ್ಳಾಡುತ್ತಿದ್ದಾಗ ಸಲ್ಮಾನ್ ಮೆರವಣಿಗೆಯಲ್ಲಿ ಸಾಗುತ್ತಿದ್ದವರ ಕಾಲು ತುಳಿದಿದ್ದಾನೆ. ಆಗ ಜಗಳ ಆರಂಭವಾಗಿದ್ದು, ಯಲ್ಲಪ್ಪನ ನೆರವಿಗೆ ಬಂದ ಸೋಮು ಗುಡಿ ಎಂಬುವವನು ತೌಸಿಫ್ ಹೊಸಮನಿಗೆ ಚಾಕುವಿನಿಂದ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ತೌಸಿಫ್​ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಮಂಗಳವಾರ ರಾತ್ರಿಯೇ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಅವರು ವಿವರಿಸಿದರು. ಘಟನೆಯಲ್ಲಿ ಭಾಗಿಯಾಗಿರುವ ಎಲ್ಲರನ್ನೂ ಬಂಧಿಸಲಾಗುವುದು ಎಂದು ಅವರು ಹೇಳಿದರು.


    ಮಲ್ಲಸಮುದ್ರ ಗ್ರಾಮದಲ್ಲಿ ಮಂಗಳವಾರ ನಡೆದ ಘಟನೆಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ಹಬ್ಬಿಸಬಾರದು. ಸಾರ್ವಜನಿಕರು ವದಂತಿಗಳನ್ನು ನಂಬಬಾರದು. ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡಬೇಕು.
    ಶಿವಪ್ರಕಾಶ ದೇವರಾಜು, ಎಸ್​ಪಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts