ಭೂಮಿಯ ಆಳವ ಅರಿತವರಾರು?

Latest News

ಸಹಕಾರಿ ಬ್ಯಾಂಕ್‌ಗಳು ವಿಶ್ವಾಸದ ಪ್ರತೀಕ

ಬೀಳಗಿ: ಸಹಕಾರಿ ಪತ್ತಿನ ಸಂಘಗಳು, ಸೌಹಾರ್ದ ಸಂಘಗಳು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು ಗ್ರಾಮದ ಹೆಬ್ಬಾಗಿಲು ಇದ್ದಂತೆ ಎಂದು ವಿಧಾನ ಪರಿಷತ್...

1 ಕೋಟಿ ರೂ. ಅನುದಾನ ಬಿಡುಗಡೆ

ಜಮಖಂಡಿ: ಕಟ್ಟೆ ಕೆರೆ ಆವರಣದಲ್ಲಿ ಒಳಾಂಗಣ ಜಿಮ್, ಪ್ರಾಣಿ ಸಂಗ್ರಹಾಲಯ, ಚಿಕ್ಕ ಮಕ್ಕಳಿಗಾಗಿ ರೈಲು, ಮನರಂಜನೆಗಾಗಿ ಭೂತ ಬಂಗ್ಲಾ ನಿರ್ಮಾಣ, 2 ಎಕರೆ...

ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಪ್ರತಿಭಟನೆ

ಬಾಗಲಕೋಟೆ: ರಾಜ್ಯದಲ್ಲಿ 1995ರ ನಂತರ ಆರಂಭವಾದ ಶಾಲೆ-ಕಾಲೇಜುಗಳಿಗೆ ಅನುದಾನ ವಿಸ್ತರಿಸಬೇಕು ಎಂದು ಆಗ್ರಹಿಸಿ ರಾಜ್ಯ ಖಾಸಗಿ ಶಿಕ್ಷೃಣ ಸಂಸ್ಥೆಗಳ ಆಡಳಿತ ಮತ್ತು ನೌಕರರ...

ಜೋಪಡಿಯಲ್ಲಿ ಅವಳಿ ಹೆಣ್ಣು ಮಕ್ಕಳ ಜನನ

ಬಾಗಲಕೋಟೆ: ಬಾಗಲಕೋಟೆ ತಾಲೂಕಿನ ಚವಡಾಪುರ ಬಳಿಯಲ್ಲಿ ತೀವ್ರ ಹೆರಿಗೆ ನೋವು ಅನುಭವಿಸುತ್ತಿದ್ದ ಮಹಿಳೆಗೆ ಜೋಪಡಿಯಲ್ಲಿ 108 ಸಿಬ್ಬಂದಿ ಹೆರಿಗೆ ಮಾಡಿಸಿದ್ದು, ತಾಯಿ ಅವಳಿ...

ಉ.ಕ. ಭಾಗದ ನಾಯಕರಿಗೆ ಸಚಿವ ಸ್ಥಾನ ನೀಡಲಿ

ಬಾಗಲಕೋಟೆ: ಮುಂದಿನ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದ ಶಾಸಕರಾದ ಮುರುಗೇಶ ನಿರಾಣಿ, ಬಸನಗೌಡ ಪಾಟೀಲ ಯತ್ನಾಳ, ಉದಾಸಿ ಹಾಗೂ...

ಮಾನವ ಬಾನಂಗಳದಲ್ಲಿ ಊಹೆಗೂ ನಿಲುಕದಷ್ಟು ದೂರ ಸಾಗಿ ಸಾಹಸ ಮೆರೆದಿದ್ದಾನೆ. ಸಮುದ್ರದಲ್ಲೂ ಅಳತೆಗೆ ಸಿಗದಷ್ಟು ಆಳಕ್ಕೆ ಹೋಗಿ ಬಂದಿದ್ದಾನೆ. ಆದರೆ ಭೂಮಿಯ ಆಳದಲ್ಲಿ ಮಾತ್ರ ಹೆಚ್ಚು ದೂರದವರೆಗೆ ಇಳಿಯಲು ಮನುಷ್ಯನಿಗೆ ಇಂದಿಗೂ ಸಾಧ್ಯವಾಗಿಲ್ಲ. 6,378 ಕಿ.ಮೀ. ಆಳವಿರುವ ಭೂಮಿಯಲ್ಲಿ ಅತ್ಯಾಧುನಿಕ ಸಲಕರಣೆಗಳನ್ನು ಬಳಸಿಯೂ ತಲುಪಲು ಸಾಧ್ಯವಾದದ್ದು 12.26 ಕಿ.ಮೀ.ವರೆಗೆ ಮಾತ್ರ. ಅಂದರೆ ಶೇಕಡಾ 0.2ರಷ್ಟು ಆಳದವರೆಗೆ ಅಷ್ಟೆ!

|ಪ್ರಶಾಂತ ಸೊರಟೂರ

ವೋಯೇಜರ್-1 ಎಂಬ ಬಾನಬಂಡಿ (ಸ್ಪೇಸ್​ಕ್ರಾಫ್ಟ್) ನಮ್ಮ ನೆಲದಿಂದ ಸರಿಸುಮಾರು 142 ಬಾನಳತೆಯ (ಆಸ್ಟ್ರನಾಮಿಕಲ್ ಯೂನಿಟ್) ದೂರದಲ್ಲಿ ಅಂದರೆ ಸುಮಾರು 2 ಸಾವಿರ ಕೋಟಿ ಕಿ.ಮೀ. ದೂರದಲ್ಲಿ ಸಾಗುತ್ತಿದೆ. ಇಷ್ಟು ದೂರದವರೆಗೆ ವಸ್ತುವೊಂದನ್ನು ಸಾಗಿಸಿ ಅದನ್ನು ತನ್ನ ಹಿಡಿತದಲ್ಲಿಟ್ಟುಕೊಳ್ಳುವಲ್ಲಿ ಮನುಷ್ಯರ ಅರಿವಿನ ಎಲ್ಲೆ ಚಾಚಿಕೊಂಡಿದೆ. ಆದರೆ ಈ ಬರಹದಲ್ಲಿ ಹೇಳಹೊರಟಿರುವುದು ವೋಯೇಜರ್ ಬಗ್ಗೆ ಅಲ್ಲ. ಬಾನಾಳದಲ್ಲಿ ಇಷ್ಟು ದೂರ ಸಾಗಬಲ್ಲೆವಾದರೂ ನಾವು ನೆಲೆ ನಿಂತಿರುವ ನೆಲದಲ್ಲಿ ಎಷ್ಟು ಆಳವನ್ನು ತಲುಪಲು ಇಲ್ಲಿಯವರೆಗೆ ಆಗಿದೆ ಅನ್ನುವುದರ ಕುರಿತು.

ನಿಮಗೆ ಬೆರಗಾಗಬಹುದು, ಮೇಲ್ಮೆ ೖಯಿಂದ ಅದರ ನಡುವಿನವರೆಗೆ ಸುಮಾರು 6378 ಕಿ.ಮೀ. ಆಳವಿರುವ ನೆಲದಲ್ಲಿ ಇಲ್ಲಿಯವರೆಗೆ ಮನುಷ್ಯರಿಗೆ ತಮ್ಮ ಸಲಕರಣೆಗಳನ್ನು ತೂರಲು ಆಗಿರುವುದು 12.26 ಕಿ.ಮೀ.ವರೆಗೆ ಅಷ್ಟೇ! ಅಂದರೆ ನೆಲದಾಳದ ಬರೀ 0.2%! ನೆಲದಾಳದಲ್ಲಿರುವ ಕಾವಳತೆ (ಟೆಂಪರೇಚರ್-ಉಷ್ಣತೆ) ಹಾಗೂ ಒತ್ತಡವು ಮನುಷ್ಯರು ಮಾಡಿದ ಸಲಕರಣೆಗಳು ತೂರಲಾಗದ ಮಟ್ಟದಲ್ಲಿದ್ದು, ಬಾನಾಳವನ್ನು ಗೆಲ್ಲುವಷ್ಟು ಸುಲಭವಲ್ಲ. ಆದರೆ ಎಂದಿನಂತೆ ಮನುಷ್ಯರು ಈ ನಿಟ್ಟಿನಲ್ಲಿ ಸಾಹಸವನ್ನಂತೂ ಮಾಡುತ್ತಲೇ ಬಂದಿದ್ದಾರೆ.

ನೆಲದ ಆಳಕ್ಕೆ ತೂರುವ ಕೋಲಾ ಕಡು ಆಳದ ಕೊರೆತ (ಕೋಲಾ ಸೂಪರ್ ಆಂಡ್ ಡೀಪ್ ಬೋರ್​ಹೋಲ್) ಎನ್ನುವ ಯೋಜನೆಯನ್ನು ರಷ್ಯಾ 24.05.1970ರಲ್ಲಿ ಆರಂಭಿಸಿತು. ಈ ಯೋಜನೆಯನ್ನು ಶುರು ಮಾಡುವಾಗ ಸುಮಾರು 15 ಕಿ.ಮೀ. ಆಳಕ್ಕೆ ತೂತು ಕೊರೆಯುವ ಗುರಿಯನ್ನು ಇಟ್ಟುಕೊಂಡಿದ್ದ ರಷ್ಯಾ, 19 ವರುಷಗಳ ಬಳಿಕ 1989ರಲ್ಲಿ 12.26 ಕಿ.ಮೀ. ಆಳ ತಲುಪಿ ಅಲ್ಲಿಂದ ಇನ್ನೂ ಆಳಕ್ಕೆ ಇಳಿಯಲು ತನ್ನ ಸಲಕರಣೆಗಳಿಂದ ಆಗದು ಎನ್ನುವ ತೀರ್ವನವನ್ನು ಕೈಗೊಂಡು ಯೋಜನೆಯನ್ನು ಕೊನೆಗೊಳಿಸಿತು. ಅದಕ್ಕೂ ಮುಂಚೆ ಅಮೆರಿಕ ಇಂತಹ ಆಳದ ತೂತು ಕೊರೆಯುವ ಕೆಲಸಕ್ಕೆ ಕೈಹಾಕಿ 9.583 ಕಿ.ಮೀ. ಆಳದವರೆಗೆ ಮಾತ್ರ ಇಳಿದಿತ್ತು. ರಷ್ಯಾ ಕೊರೆದ ರಂಧ್ರ ಮನುಷ್ಯರು ಮಾಡಿದ ಎಲ್ಲಕ್ಕಿಂತ ಆಳದ ನೇರವಾದ ರಂಧ್ರ ಎಂಬ ತನ್ನ ಹಿರಿಮೆಯನ್ನು ಇಂದು ಕೂಡ ಕಾಯ್ದುಕೊಂಡಿದೆ.

ರಷ್ಯಾ ಕೈಗೊಂಡಿದ್ದ ಯೋಜನೆಯಲ್ಲಿ ಅಂದುಕೊಂಡಿದ್ದಕ್ಕಿಂತ ಹೆಚ್ಚಿನ ತೊಡಕುಗಳು ಅದಕ್ಕೆ ಎದುರಾದವು. 1984ರಲ್ಲಿ ಸುಮಾರು 12000 ಮೀ. (12 ಕಿ.ಮೀ.) ಆಳ ತಲುಪಿದಾಗ ಕೊರೆತದ ಸಲಕರಣೆಯ ಸುಮಾರು 5000 ಮೀ. ಉದ್ದದ ಎಳೆ ನೆಲದೊಳಗೆ ಮುರಿದುಹೋಯಿತು. ಆಗ ಆ ಆಳವನ್ನು ಬಿಟ್ಟು ಸುಮಾರು 7000 ಮೀ. ಆಳದಿಂದ ಬೇರೆ ದಾರಿಯಲ್ಲಿ ರಂಧ್ರ ಕೊರೆಯುವ ಕೆಲಸವನ್ನು ಮುಂದುವರೆಸಬೇಕಾಯಿತು. ಮುಂದೆ 1989ರಲ್ಲಿ 12,262 ಮೀ. ತಲುಪಿದ ಕೊರೆತ ಅದೇ ವರುಷ 13,500 ಮೀ. ಮತ್ತು 1990ರಲ್ಲಿ 15,000 ಮೀ. ತಲುಪಲಿದೆಯೆಂದು ರಷ್ಯಾ ಅಂದುಕೊಂಡಿತ್ತು.

ಆದರೆ 12,262 ಮೀ. ಆಳ ತಲುಪುತ್ತಿದ್ದಂತೆ ನೆಲದಾಳದ ಕಾವು ಸುಮಾರು 180 ಡಿಗ್ರಿ ಸೆಲ್ಸಿಯಸ್ ಇರುವುದು ಗೊತ್ತಾಯಿತು. ಈ ಮಟ್ಟದ ಕಾವು ಮುಂದುವರೆದರೆ 15,000 ಮೀ. ಆಳದಲ್ಲಿ ಕಾವು ಸುಮಾರು 300 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಅಷ್ಟು ಕಾವಳತೆಯನ್ನು ತಡೆದುಕೊಳ್ಳಲು ಕೊರೆತದ ಸಲಕರಣೆಗೆ ಆಗದೆನ್ನುವ ತೀರ್ವನಕ್ಕೆ ರಷ್ಯಾ ಬಂದಿತು. ಹಾಗಾಗಿ 12,262 ಮೀ. ಆಳವೇ ಆ ಯೋಜನೆಯ ಕೊನೆಯಾಯಿತು. ನೆಲೆನಿಂತ ನೆಲದೊಳಗೆನೇ ತೂತು ಕೊರೆಯುವ ಮನುಷ್ಯನ ಕೆಲಸ ಇನ್ನೇನೋ ಆಪತ್ತು ತರಲಿದೆ ಎಂದು ಗಾಬರಿಗೊಳಗಾಗಿದ್ದ ಮಂದಿ ನಿಟ್ಟುಸಿರು ಬಿಡುವಂತಾಯಿತು.

ಸೂರ್ಯನ ಕುಟುಂಬದಲ್ಲೇ ವಿಶೇಷವಾದ ಸುತ್ತಣವನ್ನು ಹೊಂದಿರುವ ನಮ್ಮ ನೆಲದ ಒಳರಚನೆಯನ್ನು ತಿಳಿದುಕೊಳ್ಳುವ, ಅದರ ರಚನೆಯ ಏರ್ಪಾಟನ್ನು ಅರಿತುಕೊಳ್ಳುವ ಇಂತಹ ಕುತೂಹಲ ಮನುಷ್ಯರಿಗೆ ಹಿಂದಿನಿಂದಲೂ ಇರುವಂಥದು. ನೆಲದ ಮೇಲ್ಮೈಯಲ್ಲಿ ಕಡಲುಗಳು ಹೇಗೆ ಉಂಟಾದವು? ಅದರ ಆಳದಲ್ಲೂ ನೀರಿದೆಯೆ? ಅದರ ಆಳದಲ್ಲಿ ಅದಿರುಗಳು, ಜಲ್ಲಿಗಳು ಯಾವ ರೂಪದಲ್ಲಿವೆ? ನೆಲದ ಒಳಪದರುಗಳ ಹಂಚಿಕೆ ಹೇಗಿದೆ? ಹೀಗೆ ಹತ್ತಾರು ಪ್ರಶ್ನೆಗಳು ಜನರ ತಲೆಯನ್ನು ಕೊರೆಯುತ್ತ ಬಂದಿವೆ. ಆದರೆ ನೆಲದಾಳಕ್ಕೆ ತೂರಿ ಇವುಗಳನ್ನು ತಿಳಿದುಕೊಳ್ಳುವಂತಹ ಅಳವು ದಕ್ಕಿಸಿಕೊಳ್ಳಲು ಮಾತ್ರ ಇಲ್ಲಿಯವರೆಗೆ ಮನುಷ್ಯರಿಗೆ ಆಗಿಲ್ಲ.

ನೇರವಾಗಿ ಆಳಕ್ಕೆ ತೂರಿ ತಿಳಿದುಕೊಳ್ಳಲು ಆಗದಿದ್ದರೂ, ಎಂದಿನಂತೆ ವಿಜ್ಞಾನದ ಚಳಕವನ್ನು ಬಳಸಿ ನೇರವಲ್ಲದ ದಾರಿಯಲ್ಲೇ ನೆಲದ ರಚನೆಯನ್ನು ತಕ್ಕಮಟ್ಟಿಗೆ ಕಂಡುಕೊಳ್ಳುವಲ್ಲಿ ಮುಂದಡಿಯಿಡಬೇಕಾಯಿತು. ಅದರಂತೆ ಭೂಕಂಪದ ಅಲೆಗಳು (ಸೀಸ್ಮಿಕ್ ವೇವ್ಸ್) ಸಾಗುವ ಬಗೆಯನ್ನು ಅರಿತುಕೊಂಡು ನೆಲದ ರಚನೆಯನ್ನು ಕೆಳಗಿನಂತೆ ಗುರುತಿಸಲಾಗಿದೆ.

ಹೀಗೆ ಗುರುತಿಸಿದ ರಚನೆಯು ತಕ್ಕಮಟ್ಟಿಗೆ ಸರಿಯಿದೆಯೆಂದು ವಿಜ್ಞಾನಿಗಳು ಒಪ್ಪಿದ್ದರೂ ಆಗಾಗ ಇದರಲ್ಲಿ ಹೊಸ ಶೋಧಗಳು ಹೊರಹೊಮ್ಮುತ್ತಲಿವೆ. ಮೇಲ್ಮೈಯಲ್ಲಿರುವ ಕಡಲ ನೀರಿಗಿಂತ ಹಲವು ಪಟ್ಟು ಹೆಚ್ಚಿನ ನೀರು ನೆಲದಾಳದಲ್ಲಿದೆ ಎಂಬಂತಹ ಸುದ್ದಿ ಇತ್ತೀಚೆಗೆ ವಿಜ್ಞಾನ ಜಗತ್ತಿನಲ್ಲಿ ಅಚ್ಚರಿ ಮೂಡಿಸಿತ್ತು. ಏನೇ ಆಗಲಿ, ಮನುಷ್ಯರ ಮೈ ಶಕ್ತಿಗಿಂತ ಅವರ ಅರಿವಿನ ಹಿರಿಮೆ ಹೆಚ್ಚಿನದು. ನಮ್ಮ ನೆಲದಾಳಕ್ಕೆ ಇನ್ನೂ ಆಳದ ಅರಿವಿನ ರಂಧ್ರ ಕೊರೆದು, ಒಡಲಾಳದ ತಿಳಿವಳಿಕೆಯನ್ನು ತನ್ನದಾಗಿಸಿಕೊಳ್ಳುವಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಗೆಲುವು ಸಿಗಬಹುದು.

(ಲೇಖಕರು ತಿಳಿಗನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಬರಹಗಳನ್ನು ಪ್ರಸ್ತುತಪಡಿಸುತ್ತಿರುವ arime.org ವೆಬ್​ಸೈಟ್ ಸಂಪಾದಕರು)

- Advertisement -

Stay connected

278,507FansLike
569FollowersFollow
608,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....