More

    ಸರ್ವಜ್ಞರ ಜ್ಞಾನ ಅಕ್ಷಯ ಪಾತ್ರೆ

    ಚಿತ್ರದುರ್ಗ: ಮಹಾಕವಿ ಸರ್ವಜ್ಞನ ಜೀವನ ಕಷ್ಟಕರವಾಗಿದ್ದರೂ ಬರವಣಿಗೆ ಅಕ್ಷಯವಾಗಿತ್ತು. ಅವರ ತ್ರಿಪದಿಗಳು ಎಂದೆಂದಿಗೂ ಅಗ್ರಮಾನ್ಯವಾಗಿವೆ ಎಂದು ಕಬೀರಾನಂದಾಶ್ರಮದ ಶ್ರೀ ಶಿವಲಿಂಗಾನಂದ ಸ್ವಾಮೀಜಿ ಬಣ್ಣಿಸಿದರು.

    ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆಯಿಂದ ತರಾಸು ರಂಗಮಂದಿರದಲ್ಲಿ ಸೋಮವಾರ ಆಯೋಜಿಸಿದ್ದ ಸಂತಕವಿ ಸರ್ವಜ್ಞ ಜಯಂತ್ಯುತ್ಸವದ ನೇತೃತ್ವವಹಿಸಿ ಮಾತನಾಡಿ, ಸರ್ವಜ್ಞನ ಜ್ಞಾನ ಅಕ್ಷಯ ಪಾತ್ರೆ ಇದ್ದಂತೆ ಎಂದರು.

    ಅತ್ಯುನ್ನತ ಜ್ಞಾನ ಹೊಂದಿದ್ದ ಅವರು ಸರ್ವಕಾಲಕ್ಕೂ ನಿಜವಾದ ಜ್ಯೋತಿಷಿಯಾಗಿದ್ದಾರೆ. ಜಾತಿ, ಭೇದ ಮರೆತು ಸಮ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸಿದರು. ಇಂತಹ ಮಹನೀಯರ ತತ್ವಾದರ್ಶ ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ಸಾಗಬೇಕು ಎಂದು ಸಲಹೆ ನೀಡಿದರು.

    ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಜವರೇಗೌಡ, ನಿವೃತ್ತ ಉಪನ್ಯಾಸಕ ಸಿದ್ದಪ್ಪ ಮಾತನಾಡಿದರು. ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತಿಹೆಚ್ಚು ಅಂಕಗಳಿಸಿದ ಸಮಾಜದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

    ಜಯಂತಿ ಅಂಗವಾಗಿ ಹೊಳಲ್ಕೆರೆ ರಸ್ತೆಯ ಗೌರಸಂದ್ರ ಮಾರಮ್ಮ ದೇವಿ ಗುಡಿಯಿಂದ ತರಾಸು ರಂಗಮಂದಿರದವರೆಗೂ ಭವ್ಯ ಮೆರವಣಿಗೆ ನಡೆಯಿತು. ವಿವಿಧ ಜನಪದ ಕಲಾತಂಡಗಳು ಮೆರುಗು ನೀಡಿದವು.

    ಶ್ರೀ ಬಸವ ಕುಂಬಾರ ಗುಂಡಯ್ಯ ಸ್ವಾಮೀಜಿ, ಜಿಪಂ ಯೋಜನಾ ನಿರ್ದೇಶಕ ಮಹಾಂತೇಶ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ. ಮಲ್ಲಿ ಕಾರ್ಜುನ, ಕುಂಬಾರ ಗುಂಡಯ್ಯ ಗುರುಪೀಠದ ಅಧ್ಯಕ್ಷ ಕೆ.ಚಂದ್ರಪ್ಪ, ಕಾರ್ಯದರ್ಶಿ ಕೆ.ಟಿ.ರಮೇಶ್, ಕುಂಬಾರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಎಸ್. ಯರ‌್ರಿಸ್ವಾಮಿ, ಕಾರ್ಯದರ್ಶಿ ವೈ.ಮೃತ್ಯುಂಜಯ, ಕುಂಬಾರ ಮಹಿಳಾ ಮಹಾಸಭಾ ಅಧ್ಯಕ್ಷೆ ಎಸ್.ಬೈಲಮ್ಮ, ಕಾರ್ಯದರ್ಶಿ ಹೇಮಾವತಿ, ವಿದ್ಯುತ್ ಪರಿವೀಕ್ಷಕಿ ರಾಧಾ ಇತರರಿದ್ದರು.

    ಕೋಟ್
    ಜನರಿಗೆ ಅರ್ಥವಾಗುವ ರೀತಿಯಲ್ಲಿ ಸರಳವಾಗಿ ವಚನಗಳನ್ನು ನೀಡಿದ ಹಿರಿಮೆ ಸರ್ವಜ್ಞರದ್ದಾಗಿದೆ. ಸಮಾಜದಲ್ಲಿ ಗೌರವಯುತವಾಗಿ ಬಾಳಲು ಮೊದಲು ಶಿಕ್ಷಣ ಪಡೆಯಬೇಕು. ಕುಂಬಾರ ಸಮುದಾಯ ಕುಲಕಸುಬು ಮರೆಯದೆ, ವೃತ್ತಿ ಜತೆ ಕೌಶಲ ಹೊಂದಬೇಕು. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಪ್ರಗತಿ ಸಾಧಿಸಬೇಕು.
    ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts