ಶಿವಮೊಗ್ಗ: ಪ್ರತಿಯೊಬ್ಬರೂ ನಿತ್ಯದ ಜೀವನಕ್ಕೆ ಅಗತ್ಯವಾದ ಕಾನೂನಿನ ಜ್ಞಾನ ಹೊಂದಬೇಕು. ವಿದ್ಯಾರ್ಥಿಗಳು ಈ ಹಂತದಲ್ಲೇ ಕಾನೂನುಗಳ ಬಗ್ಗೆ ಅರಿತುಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಮಂಜುನಾಥ್ ನಾಯಕ್ ಹೇಳಿದರು.
ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಕಾನೂನು ಸೇವಾ ದಿನಾಚರಣೆ ಮೂಲಕ ಜನರಿಗೆ ಕಾನೂನಿನ ಅರಿವು ಮೂಡಿಸುವ ಗುರಿ ಹೊಂದಲಾಗಿದೆ. ಕಾನೂನಿನ ಸೇವೆ ಅಗತ್ಯವಿರುವವರಿಗೆ, ಅಸಮರ್ಥರಿಗೆ ಕಾನೂನಿನ ನೆರವು ನೀಡಲು ಹಾಗೂ ಬಾಕಿ ಇರುವ ಪ್ರಕರಣಗಳನ್ನು ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ಪರಿಹರಿಸಲಾಗುತ್ತಿದೆ ಎಂದರು.
ಜನನ ದಿನಾಂಕವನ್ನು ಸರಿಯಾಗಿ ನೋಂದಣಿ ಮಾಡದೇ ಇದ್ದರೆ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ತೊಂದರೆ ಉಂಟಾಗುತ್ತದೆ. ಶಾಲಾ ಕಾಲೇಜುಗಳ ದಾಖಲಾತಿಗಳಲ್ಲಿ ಹಲವಾರು ತಪ್ಪುಗಳಿರುತ್ತವೆ. ಜಾತಿ, ಹೆಸರು, ವಿಳಾಸ ಆಧಾರದ ಮೇಲೆ ಮೀಸಲಾತಿ ಹಾಗೂ ಉದ್ಯೋಗ ದೊರೆಯುತ್ತದೆ. ಹೀಗಾಗಿ ದಾಖಲೆಗಳು ಸಮಪರ್ಕವಾಗಿರಲಿ ಎಂದು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಸ್.ಸಂತೋಷ್, ಪ್ರಾಚಾರ್ಯೆ ಭಾರತಿ, ಉಪನ್ಯಾಸಕ ಬಿ.ಎಲ್.ಶಿವಲಿಂಗಪ್ಪ ಮುಂತಾದವರಿದ್ದರು.
ವಿದ್ಯಾರ್ಥಿ ಹಂತದಲ್ಲೇ ಕಾನೂನಿನ ಜ್ಞಾನ ಅವಶ್ಯ
You Might Also Like
ಈ 3 ನಕ್ಷತ್ರದವರು ಕೋಟೇಶ್ವರ ಯೋಗದೊಂದಿಗೆ ಹುಟ್ತಾರೆ! ಇವರನ್ನು ಅರಸಿ ಬರುತ್ತೆ ಅಪಾರ ಸಂಪತ್ತು | Birth of Stars
Birth of Stars : ಹುಟ್ಟಿದ ತಕ್ಷಣ ಜನ್ಮ ದಿನಾಂಕ ಹಾಗೂ ಹುಟ್ಟಿದ ಗಳಿಗೆಯನ್ನು ಬರೆದಿಡಲಾಗುತ್ತದೆ.…
ನಿಮ್ಮ ಕನಸಿನಲ್ಲಿ ಹಾವು ಕಾಣಿಸಿಕೊಂಡರೆ ಅದರರ್ಥ ಏನು ಗೊತ್ತಾ? ಇಲ್ಲಿದೆ ನೋಡಿ ಅಚ್ಚರಿ ಸಂಗತಿ | Snakes in a Dream
Snakes in a Dream : ಯಾವುದೇ ವ್ಯಕ್ತಿ ನಿದ್ರೆಗೆ ಜಾರಿದಾಗ ಸಹಜವಾಗಿ ಎದುರಾಗುವ ಸಂಗತಿಯೆಂದರೆ,…
ಈ ವಸ್ತುಗಳು ನಿಮ್ಮ ಮನೆಯಲ್ಲಿದ್ದರೆ ಈ ಕೂಡಲೇ ಹೊರಗೆ ಎಸೆಯಿರಿ… ಇಲ್ಲದಿದ್ರೆ ಅಪಾಯ ತಪ್ಪಿದ್ದಲ್ಲ! Household items
Household items : ಎಂದಾದರೂ ಮನೆಯನ್ನು ವಿಷಪೂರಿತಗೊಳಿಸುವ ವಸ್ತುಗಳು ಬಗ್ಗೆ ನೀವು ಯೋಚನೆ ಮಾಡಿದ್ದೀರಾ? ಮಾರುಕಟ್ಟೆಯಲ್ಲಿ…