More

    ಪೋಕ್ಸೋ ಕಾಯ್ದೆಯ ತಿಳಿವಳಿಕೆ ಅಗತ್ಯ

    ಹುಬ್ಬಳ್ಳಿ: ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ, ಮಕ್ಕಳ ರಕ್ಷಣಾ ಘಟಕ ಹಾಗೂ ನವನಗರದ ರೋಟರಿ ಆಂಗ್ಲ ಮತ್ತು ಕನ್ನಡ ಮಾಧ್ಯಮ ಪ್ರೌಢಶಾಲೆಗಳ ಸಂಯುಕ್ತಾಶ್ರಯದಲ್ಲಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಕಾನೂನು ಅರಿವು ನೆರವು ಕಾರ್ಯಕ್ರಮ ಆಯೋಜಿಸಲಾಗಿತ್ತು.

    ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ದೊಡ್ಡಮನಿ ಅವರು ಕಾರ್ಯಕ್ರಮ ಉದ್ಘಾಟಿಸಿದರು.
    ಪ್ಯಾನಲ್ ವಕೀಲೆ ನೂರಜಹಾನ್ ಕಿಲ್ಲೇದಾರ ಅವರು ಪೋಕ್ಸೋ ಕಾಯ್ದೆ ಕುರಿತು ಉಪನ್ಯಾಸ ನೀಡಿದರು. ಈ ಕಾಯ್ದೆ ಬಗ್ಗೆ ಪ್ರೌಢರು ತಿಳಿದುಕೊಳ್ಳುವುದು ಇಂದಿನ ಅಗತ್ಯ ಎಂದರು.

    ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬೊಮ್ಮಕ್ಕನವರ ಮಾತನಾಡಿದರು. ನವನಗರ ರೋಟರಿ ಶಾಲೆ ಅಧ್ಯಕ್ಷ ಡಾ. ಬಿ.ಎಸ್. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಶಾಲೆ ಪ್ರಾಂಶುಪಾಲ ಡಾ. ವಿಜಯಶ್ರೀ ಕಲಬುರ್ಗಿ, ಉಪಾಧ್ಯಕ್ಷ ಎಸ್.ವಿ. ಶಿರಗುಪ್ಪಿ ಇತರರು ಇದ್ದರು.
    ಸುಧಾ ಬರಿಗಾಲ ಕಾರ್ಯಕ್ರಮ ನಿರೂಪಿಸಿದರು. ಗೀತಾ ವಾಲಿ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts