18.5 C
Bangalore
Monday, December 16, 2019

ಬೆಳಗಾವಿ: ಕೊಚ್ಚಿ ಹೋದ ಮರಗಳಿಗಿಲ್ಲ ಪರಿಹಾರ!

Latest News

‘ದಿಶಾ ರೈಡ್ ಆಂಡ್ ವಾಕ್’ ಜಾಗೃತಿ ಜಾಥಾ

ಹುಬ್ಬಳ್ಳಿ: ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಆಶ್ರಯದಲ್ಲಿ ಇಲ್ಲಿನ ತೋಳನಕೆರೆಯಿಂದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್​ವರೆಗೆ ಭಾನುವಾರ ಬೆಳಗ್ಗೆ ‘ದಿಶಾ ರೈಡ್ ಆಂಡ್ ವಾಕ್’ ಘೋಷಣೆಯೊಂದಿಗೆ...

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

|ಮಂಜುನಾಥ ಕೋಳಿಗುಡ್ಡ ಬೆಳಗಾವಿ

ಜಿಲ್ಲೆಯಲ್ಲಿ ನದಿಗಳ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿರುವ ತೆಂಗು,ಪೇರು, ಮಾವು, ಪಪ್ಪಾಯಿ,ಗಿಡಗಳಿಗೆ ಪರಿಹಾರ ಇಲ್ಲ. ಮತ್ತೊಂದೆಡೆ ಕುಟುಂಬಕ್ಕೆ ಆದಾಯ ಮೂಲವಾಗಿದ್ದ ಮರಗಳನ್ನು ಕಳೆದುಕೊಂಡು ರೈತರು ಕಂಗಾಲಾಗಿದ್ದಾರೆ.

ಗೋಕಾಕ, ಮೂಡಲಗಿ, ಅಥಣಿ, ಹುಕ್ಕೇರಿ, ಚಿಕ್ಕೋಡಿ, ರಾಯಬಾಗ, ರಾಮದುರ್ಗ ತಾಲೂಕಿನ 377 ಗ್ರಾಮಗಳ ವ್ಯಾಪ್ತಿಯ ಕೃಷ್ಣಾ, ಘಟಪ್ರಭಾ, ಮಲಪ್ರಭಾ, ಮಾರ್ಕಂಡೇಯ, ಹಿರಣ್ಯಕೇಶಿ ನದಿಗಳ ಪ್ರವಾಹದಲ್ಲಿ ತೆಂಗು, ಪೇರು, ಪಪ್ಪಾಯಿ ಮತ್ತು ಮಾವಿನ ಮರಗಳು ಅಕ ಪ್ರಮಾಣದಲ್ಲಿ ಕೊಚ್ಚಿಕೊಂಡು ಹೋಗಿವೆ. ಮತ್ತೊಂದೆಡೆ ಜಲಾವೃತಗೊಂಡಿರುವ ಪೇರು,ಪಪ್ಪಾಯಿ ಗಿಡಗಳು ಸಂಪೂರ್ಣ ಹಾಳಾಗಿವೆ.

ಕಂದಾಯ, ತೋಟಗಾರಿಕೆ ಮತ್ತು ಕೃಷಿ ಇಲಾಖೆಯ ಅಕಾರಿಗಳು ಮತ್ತು ರೈತರ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ ಮಾವು, ತೆಂಗು, ಪಪ್ಪಾಯಿ, ಪೇರು, ಹಣ್ಣು ಹಂಪಲಗಳ ಸೇರಿ 1ಲಕ್ಷಕ್ಕೂ ಅಕ ಗಿಡಗಳು ನದಿಗಳ ಪ್ರವಾಹಕ್ಕೆ ಕೊಚ್ಚಿಕೊಂಡು ಹೋಗಿವೆ.

ಇದರಲ್ಲಿ ಅಥಣಿ, ಚಿಕ್ಕೋಡಿ,ರಾಯಬಾಗ ಭಾಗದಲ್ಲಿ ಪೇರು, ತೆಂಗಿನ ಮರಗಳು, ಮೂಡಲಗಿ,ಗೋಕಾಕ, ರಾಮದುರ್ಗ ತಾಲೂಕಿನ ವ್ಯಾಪ್ತಿಯಲ್ಲಿ ಪಪ್ಪಾಯಿ,ಮಾವು, ಹುಣಸೆ ಮರಗಳು ಹೆಚ್ಚು ಹಾನಿಯಾಗಿವೆ.
ನದಿಗಳ ಪ್ರವಾಹ ಮತ್ತು ಮಳೆಯಿಂದಾಗಿ 2.77 ಲಕ್ಷ ಹೆಕ್ಟೇರ್‌ಗಿಂತ ಹೆಚ್ಚು ಪ್ರದೇಶದಲ್ಲಿ ಸಂಭವಿಸಿರುವ ಬೆಳೆಹಾನಿಗೆ ಪ್ರಕೃತಿ ವಿಕೋಪ ಪರಿಹಾರ ನಿಯ ಪ್ರಕಾರ ಮಳೆಯಾಶ್ರಿತ ಪ್ರದೇಶಗಳಲ್ಲಿ ಪ್ರತಿ ಹೆಕ್ಟೇರ್‌ಗೆ 6,000 ರೂ. ಮತ್ತು ನೀರಾವರಿ ಪ್ರದೇಶಗಳಿಗೆ ಪ್ರತಿ ಹೆಕ್ಟೇರ್‌ಗೆ 13,200 ರೂ. ಪರಿಹಾರ ಸಿಗಲಿದೆ ಎಂದು ಅಕಾರಿಗಳು ಹೇಳುತ್ತಿದ್ದಾರೆ. ಆದರೆ, ನದಿಗಳ ದಡದಲ್ಲಿ, ಕೃಷಿ ಜಮೀನಿನ ಬದುಗಳಲ್ಲಿದ್ದ ತೆಂಗು,ಮಾವು ಇನ್ನಿತರರ ಹಣ್ಣು ಪಂಪಲಗಳ ಮರಗಳಿಗೆ ಪರಿಹಾರ ನೀಡುವುದರ ಬಗ್ಗೆ ಹೇಳುತ್ತಿಲ್ಲ.

ಪ್ರತಿವರ್ಷ ತೆಂಗು, ಪೇರು,ಮಾವು ಮತ್ತು ಪಪ್ಪಾಯಿಯಿಂದ 40 ರಿಂದ 50 ಸಾವಿರ ರೂ. ವರೆಗೆ ಆದಾಯ ಬರುತಿತ್ತು. ಆದರೆ, ಇದೀಗ ಮರಗಳು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದರಿಂದ ವಾರ್ಷಿಕ ಆದಾಯ ಇಲ್ಲದಂತಾಗಿದೆ.

ಜಮೀನುಗಳಲ್ಲಿ ಗಿಡಗಳಿರುವ ಬಗ್ಗೆ ಅಕಾರಿಗಳಿಗೆ ದಾಖಲೆಗಳ ಸಮೇತ ಮಾಹಿತಿ ನೀಡಿದರೂ ಪರಿಹಾರ ನೀಡುವ ಬಗ್ಗೆ ಚಕಾರ ಎತ್ತುತ್ತಿಲ್ಲ ಎಂದು ಮೂಡಲಗಿ, ಅಥಣಿ, ಚಿಕ್ಕೋಡಿ, ರಾಯಬಾಗ ತಾಲೂಕಿನ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರವಾಹದಿಂದ ಹಾನಿಯಾಗಿರುವ ತೆಂಗು,ಮಾವು, ಪಪ್ಪಾಯಿ, ಪೇರು ಸೇರಿದಂತೆ ಇನ್ನಿತರರ ಹಣ್ಣು ಹಂಪಲ ಗಿಡಗಳಿಗೆ ಪರಿಹಾರ ನೀಡುವ ಸಲುವಾಗಿಯೇ ಜಿಪಂ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತಿದೆ. ಈ ಗಿಡಗಳು ರೈತ ಕುಟುಂಬಗಳಿಗೆ ಆಸರೆಯಾಗಿದ್ದು, ವಾಣಿಜ್ಯ ಬೆಳೆಗಳಾಗಿದ್ದರಿಂದ ಪರಿಹಾರ ನೀಡುವುದು ಅವಶ್ಯಕವಾಗಿದೆ.
|ಡಾ.ಕೆ.ವಿ.ರಾಜೇಂದ್ರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಕಾರಿ, ಬೆಳಗಾವಿ

ನದಿಗಳ ಪ್ರವಾಹದಿಂದ ತೆಂಗು,ಪೇರು ಮತ್ತು ಮಾವಿನ ಗಿಡಗಳು ಸಂಪೂರ್ಣ ನಾಶವಾಗಿವೆ. ಕೆಲವು ಕಡೆ ಕೊಚ್ಚಿಕೊಂಡು ಹೋಗಿವೆ. ಇದರಿಂದ ರೈತರಿಗೆ ಸಾಕಷ್ಟು ಉಂಟಾಗಿದೆ. ಹಾಗಾಗಿ ದೊಡ್ಡ ಬೆಳೆಗಳ ಜತೆಗೆ ಸಣ್ಣ ಬೆಳೆಗಳಿಗೆ ಪರಿಹಾರ ನೀಡುವಂತೆ ಕೃಷಿ ಅಕಾರಿಗಳಿಗೆ ಸೂಚಿಸಲಾಗಿದೆ. ಜಿಪಂ ಸಿಇಒ ರಾಜೇಂದ್ರ ಅವರು ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
| ಸಿದ್ದಪ್ಪ ಮುದಕಣ್ಣವರ ಜಿಪಂ ಸದಸ್ಯ

ಗಿಡಗಳ ಪತ್ತೆ ದೊಡ್ಡ ಕೆಲಸ

ಪ್ರವಾಹದಿಂದ ನಾಶವಾಗಿರುವ ಮತ್ತು ಕೊಚ್ಚಿಕೊಂಡು ಹೋಗಿರುವ ಗಿಡಗಳನ್ನು ಪತ್ತೆ ಹಚ್ಚಿ ಪರಿಹಾರ ನಿಗದಿ ಮಾಡುವುದು ಕಷ್ಟವಾಗಲಿದೆ. ಆ ಜಮೀನಿನಲ್ಲಿ ರೈತರು ಎಷ್ಟು ವರ್ಷಗಳಿಂದ ಗಿಡಗಳನ್ನು ನಾಟಿ ಮಾಡಿದ್ದರು, ಅವುಗಳಿಂದ ವಾರ್ಷಿಕ ಎಷ್ಟು ಆದಾಯ ಬರುತಿತ್ತು ಎಂಬುದರ ಮಾಹಿತಿ ಸಂಗ್ರಹಿಸುವುದು ಸಾಧ್ಯವಿಲ್ಲ. ಇಲಾಖೆಗಳ ಬಳಿ ಸೂಕ್ತ ದಾಖಲೆಗಳು ಇರುವುದಿಲ್ಲ. ಸರ್ಕಾರದ ನಿರ್ಧಾರದ ಮೇಲೆ ಮುಂದಿನ ಕ್ರಮ ವಹಿಸಲಾಗುವುದು ಎಂದು ಕಂದಾಯ ಇಲಾಖೆ ಅಕಾರಿಗಳು ತಿಳಿಸಿದ್ದಾರೆ.

ಪರಿಹಾರಕ್ಕೆ ಹೊಸ ನಿಯಮ ?

ಪ್ರಕೃತಿ ವಿಕೋಪದಿಂದ ನಾಶವಾಗಿರುವ ಬೆಳೆಗಳಿಗೆ ಮಾತ್ರ ಇಲ್ಲಿಯವರೆಗೆ ಪರಿಹಾರ ನೀಡಿಕೊಂಡು ಬರಲಾಗುತ್ತಿದೆ. ಆದರೆ, ಪ್ರತ್ಯೇಕವಾಗಿ ತೆಂಗು, ಮಾವು, ಪೇರು ಸೇರಿದಂತೆ ಇನ್ನಿತರರ ಹಣ್ಣು ಹಂಪಲಗಳಿಗೆ ಪರಿಹಾರ ನೀಡಿಲ್ಲ. ಇದೀಗ ಗಿಡಗಳಿಗೆ ಪರಿಹಾರ ನೀಡಬೇಕಾದರೆ ಹೊಸ ನಿಯಮ ರೂಪಿಸಬೇಕು. ಇಲ್ಲದಿದ್ದರೆ ಪರಿಹಾರ ನೀಡುವುದು ಕಷ್ಟವಾಗಲಿದೆ. ಸರ್ಕಾರ ಕೈಗೊಳ್ಳುವ ನಿರ್ಧಾರದ ಮೇಲೆ ಪರಿಹಾರ ನಿರ್ಧಾರವಾಗಲಿದೆ ಎಂದು ಅಕಾರಿಗಳು ತಿಳಿಸಿದ್ದಾರೆ.

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...