More

    ಮತ್ತೆ 6 ಜನರಿಗೆ ಕರೊನಾ ಸೋಂಕು

    ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 36ಕ್ಕೆ ಏರಿಕೆ

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಹೊಸದಾಗಿ 6 ಕರೊನಾ ಸೋಂಕು ಪ್ರಕರಣ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ.
    ಬೆಂಗಳೂರು ಪ್ರಯಾಣ ಹಿನ್ನೆಲೆ ಹೊಂದಿರುವ ಪತಿ-ಪತ್ನಿ ಮತ್ತು 2 ವರ್ಷದ ಮಗುವಿಗೆ ಸೋಂಕು ದೃಢಪಟ್ಟಿದೆ. ಇವರು ವಿರಾಜಪೇಟೆ ತಾಲೂಕಿನ ಹುಂಡಿ ಮತ್ತು ಸೋಮವಾರಪೇಟೆ ತಾಲೂಕಿನ ನೆಲ್ಲಿಹುದಿಕೇರಿ ಗ್ರಾಮದಲ್ಲಿ ವಾಸ ಮಾಡಿದ್ದರು. ಪೂನಾದಿಂದ ಜಿಲ್ಲೆಗೆ ಹಿಂತಿರುಗಿರುವ 24 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. ಈತ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ನಿವಾಸಿ.
    ವಿರಾಜಪೇಟೆ ತಾಲೂಕಿನ ಕೊಂಡಂಗೇರಿ ಗ್ರಾಮದ 23 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟಿರುತ್ತದೆ. ಇವರು ವಿದೇಶದಿಂದ (ಶಾರ್ಜಾ) ಮರಳಿರುತ್ತಾರೆ. ಸೋಮವಾರಪೇಟೆ ತಾಲೂಕಿನ ಹುಲುಸೆ ಗ್ರಾಮದ 46 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಇವರು ಬೆಂಗಳೂರಿನಿಂದ ಜಿಲ್ಲೆಗೆ ಪ್ರಯಾಣಿಸಿದವರಾಗಿದ್ದಾರೆ. ಸೋಂಕಿತ ವ್ಯಕ್ತಿಗಳನ್ನು ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಜಿಲ್ಲೆಯಲ್ಲಿ ಹೊಸದಾಗಿ ಹುಂಡಿ, ನೆಲ್ಲಿಹುದಿಕೇರಿ, ಹುಲುಸೆ ಗ್ರಾಮದಲ್ಲಿ ನಿಯಂತ್ರಿತ ಪ್ರದೇಶ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 36 ಪ್ರಕರಣ ವರದಿಯಾಗಿದ್ದು, 3 ಜನ ಗುಣಮುಖರಾಗಿದ್ದಾರೆ. 33 ಜನ ಕೋವಿಡ್ ಆಸ್ಪತ್ರೆಯಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ 18 ನಿಯಂತ್ರಿತ ಪ್ರದೇಶಗಳಿವೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts