Friday, 16th November 2018  

Vijayavani

ಜನಾರ್ದನರೆಡ್ಡಿ ಕೇಸ್ ಬೆನ್ನಲ್ಲೇ ಡಿಕೆಶಿಗೆ ಬಂಧನ ಭೀತಿ - ಇಡಿಯಿಂದ 3ನೇ ಬಾರಿ ಇಡಿ ನೋಟಿಸ್ ಜಾರಿ        ಆ್ಯಂಬಿಂಡೆಟ್ ಪ್ರಕರಣದಲ್ಲಿ ಇಡಿ ಹೆಸರಿಗೆ ಆಕ್ಷೇಪ - ಸಿಸಿಬಿ ವಿರುದ್ಧ ಇಡಿ ಜಂಟಿ ನಿರ್ದೇಶಕ ಗರಂ        ಸಚಿವ ಸಂಪುಟ ವಿಸ್ತರಣೆಗೆ ಧನುರ್ಮಾಸದ ಎಫೆಕ್ಟ್ - ಸದ್ಯಕ್ಕಿಲ್ಲ ಆಕಾಂಕ್ಷಿಗಳಿಗೆ ಸಚಿವ ಭಾಗ್ಯ - ಕಾಂಗ್ರೆಸ್ಸಿಗರಲ್ಲಿ ಮತ್ತೆ ಅಸಮಾಧಾನ        ರಾಜ್ಯಾದ್ಯಂತ ಭುಗಿಲೆದ್ದ ರೈತರ ಹೋರಾಟದ ಕಿಚ್ಚು - ರೈತರನ್ನು ಭೇಟಿಯಾಗುವುದಾಗಿ ಹೇಳಿದ ಕುಮಾರಸ್ವಾಮಿ        ಗಾಂಧಿ ಕುಟುಂಬ ಬಿಟ್ಟು ಬೇರೆಯವರು ಎಐಸಿಸಿ 5 ಅಧ್ಯಕ್ಷರಾಗಲಿ - ಕಾಂಗ್ರೆಸ್​ಗೆ ಪ್ರಧಾನಿ ಮೋದಿಯಿಂದ ನೇರ ಸವಾಲು        ತಮಿಳುನಾಡಿನಾದ್ಯಂತ ಗಜ ಚಂಡಮಾರುತದ ಅರ್ಭಟ - 20ಕ್ಕೂ ಹೆಚ್ಚು ಮಂದಿ ದುರ್ಮರಣ - ಅಪಾರ ಆಸ್ತಿ ಪಾಸ್ತಿ, ಬೆಳೆ ನಾಶ       
Breaking News

ಮುಂದುವರಿದ ಮಳೆ: ಭಾಗಮಂಡಲ ಮುಳುಗಡೆ, ಇನ್ನೂ ಎರಡು ದಿನ ವರ್ಷಧಾರೆ

Wednesday, 11.07.2018, 6:43 PM       No Comments

ಬೆಂಗಳೂರು: ರಾಜ್ಯದಾದ್ಯಂತ ಮಳೆ ಬುಧವಾರವೂ ಮುಂದುವರಿದಿದ್ದು, ಕೊಡಗು, ಶಿವಮೊಗ್ಗ, ಮಂಡ್ಯದಲ್ಲಿ ಭಾರಿ ಮಳೆಯಾಗುತ್ತಿದೆ. ಇಂದಿನಿಂದ ಎರಡು ದಿವಸ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೊಡಗು ಜಿಲ್ಲೆಯಾದ್ಯಂತ ವರುಣನ ಅಬ್ಬರ ಮುಂದುವರಿದಿದ್ದು, ಮರಗಳು ಧರೆಗುರುಳಿ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ. ಸೋಮವಾರಪೇಟೆ ತಾಲೂಕಿನ ಹಟ್ಟಿಹೊಳೆ ಬಳಿ ಮಡಿಕೇರಿ-ಸೋಮವಾರಪೇಟೆ ರಸ್ತೆ ಸಂಚಾರ ಸ್ಥಗಿತಗೊಂಡಿದ್ದು, ಮರ ತೆರವು ಕಾರ್ಯ ಚುರುಕುಗೊಂಡಿದೆ.

ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ಮಳೆಯಿಂದಾಗಿ ಪ್ರವಾಹ ಹೆಚ್ಚಾಗಿದ್ದು, ಭಾಗಮಂಡಲ ಮುಳುಗಡೆಯಾಗಿದೆ. ಭಾಗಮಂಡಲದಿಂದ ತಲಕಾವೇರಿ, ನಾಪೋಕ್ಲು ರಸ್ತೆ ಸಂಪರ್ಕ ಕಡಿತಗೊಂಡಿದೆ. ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದೆ.

ಶಿವಮೊಗ್ಗದಲ್ಲಿ ಬಾವಿ, ಮನೆ ಕುಸಿತ

ಶಿವಮೊಗ್ಗ ಜಿಲ್ಲೆಯಲ್ಲಿಯೂ ವರುಣನ ಅಬ್ಬರಕ್ಕೆ ಹೊಸನಗರದ ಯಡೂರಿನಲ್ಲಿ ಮನೆ ಹಿಂದಿನ ಬಾವಿ ಕುಸಿತಗೊಂಡಿದೆ. ಶ್ರೀನಿವಾಸ್‌ ಗೌಡ ಎಂಬವರ ಮನೆ ಹಿಂದಿನ ಬಾವಿಯು ಭೂಮಿಯೊಳಗೆ ನೀರಿನ ಒತ್ತಡ ಹೆಚ್ಚಾಗಿದ್ದರಿಂದ ಕುಸಿತಗೊಂಡು ಬಾವಿಯ ಪಕ್ಕದಲ್ಲಿದ್ದ 2 ಮೋಟರ್ ಪಂಪ್​​ಗಳು, ಒಂದು ಸಿಂಟೆಕ್ಸ್ ಬಾವಿಯೊಳಗೆ ಮುಚ್ಚಿ ಹೋಗಿವೆ.

ಮತ್ತೊಂದೆಡೆ ಯಡೂರು ಸಮೀಪದಲ್ಲಿದ್ದ ಲಕ್ಕಪ್ಪ ಎಂಬುವರ ಮನೆ ಕುಸಿತಗೊಂಡಿದ್ದು, ಲಕ್ಕಪ್ಪ ಕುಟುಂಬ ಬೀದಿಗೆ ಬಿದ್ದಿದೆ.

ಮಂಡ್ಯದಲ್ಲೂ ಮಳೆ

ಮಂಡ್ಯ ನಗರದಲ್ಲಿ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ವಾಹನ ಸವಾರರ ಪರದಾಡುವಂತಾಗಿದೆ. ಬೆಳಿಗ್ಗೆಯಿಂದಲೂ ಕೆಲಕಾಲ ಬಿಡುವು ನೀಡಿ ಸುರಿಯುತ್ತಿರುವ ಮಳೆ, ಮಧ್ಯಾಹ್ನದ ಬಳಿಕ ಬಿರುಸುಗೊಂಡಿದೆ.

Leave a Reply

Your email address will not be published. Required fields are marked *

Back To Top