ಬಿರುಕು ಬಿಟ್ಟ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟ: ಭೂಕುಸಿತ ತಡೆಯಲು ಲಾವಂಚ ಹುಲ್ಲಿನ ಮೊರೆಹೋದ ಕೊಡಗು ಜನತೆ!

Latest News

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ ಮಾತ್ರವಲ್ಲ, ಅವಳೊಂದು ಸಂದೇಶ ಸಾರುತ್ತಿದ್ದಾಳೆ…

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​...

ಮನವಿಗಾರರ ಜತೆ ಪ್ರಧಾನಿ ಮಾತುಕತೆ ಅವಧಿ 20 ನಿಮಿಷ: ಕೃಷಿಕರ ಸಮಸ್ಯೆ ಕೊಂಡೊಯ್ದ ಪವಾರ್ ಜತೆಗೆ 50 ನಿಮಿಷದ ಮಾತುಕತೆ ಯಾಕೆ?

ನವದೆಹಲಿ: ಮಹಾರಾಷ್ಟ್ರದಲ್ಲಿ ರಾಜಕೀಯ ಬೆಳವಣಿಗೆಗಳು ದಿನಕ್ಕೊಂದು ತಿರುವು ತೆಗೆದುಕೊಳ್ಳುತ್ತಿದೆ. ಹೀಗಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್​ಸಿಪಿ ನಾಯಕ ಶರದ್ ಪವಾರ್ ನಡುವಿನ...

ಗವಿಸಿದ್ಧೇಶ್ವರ ಶ್ರೀಗಳ ಸದ್ಭಾವನಾ ಯಾತ್ರೆಗೆ ಸ್ವಾಗತ, ಸಹಬಾಳ್ವೆ, ಸಾಮರಸ್ಯ ಸಂದೇಶ ಸಾರಿದ ಶ್ರೀಗಳು

ಸಿಂಧನೂರು: ತಾಲೂಕಿನ ಜಾಲಿಹಾಳ ಗ್ರಾಮದಲ್ಲಿ ಬುಧವಾರ ಕೊಪ್ಪಳದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ 6ನೇ ದಿನದ ಸದ್ಭಾವನಾ ಯಾತ್ರೆ ನಡೆಸಿ ಸಹಬಾಳ್ವೆ, ಸಾಮರಸ್ಯದ ಸಂದೇಶ...

ಬಾಗೂರು, ಕರ್ಕಿಹಳ್ಳಿಯಲ್ಲಿ ಪೊಲೀಸರ ದಾಳಿ, 9 ಲಕ್ಷ ರೂ. ಮೌಲ್ಯದ ಅಕ್ರಮ ಮರಳು ವಶ

ದೇವದುರ್ಗ ಗ್ರಾಮೀಣ: ತಾಲೂಕಿನ ನದಿದಂಡೆ ಗ್ರಾಮಗಳಲ್ಲಿ ನಡೆಯುತ್ತಿದ್ದ ಮರಳು ಅಕ್ರಮ ದಂಧೆ ವಿರುದ್ಧ ಪೊಲೀಸರು ದಾಳಿ ಮುಂದುವರಿಸಿದ್ದು, ಮಂಗಳವಾರ ಸಂಜೆ ದೇವದುರ್ಗ ಹಾಗೂ...

ಹೆಬ್ಬಾಳ ಶ್ರೀಬೋಳೋಡಿ ಬಸವೇಶ್ವರ ರಥೋತ್ಸವ ಡಿ.10 ರಂದು

ಹೆಬ್ಬಾಳ ಬೃಹನ್ಮಠದ ನಾಗಭೂಷಣ ಶಿವಯೋಗಿಗಳ ಮಾಹಿತಿ | ಶ್ರೀಶೈಲ ಜಗದ್ಗುರುಗಳ ಸಾನ್ನಿಧ್ಯ ಕಂಪ್ಲಿ: ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಭಗವತ್ಪಾದರ ಸಾನ್ನಿಧ್ಯದಲ್ಲಿ, ಡಿ.10ರಂದು ಸಂಜೆ...

ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಬೆಟ್ಟಗಳು ಕುಸಿಯಲಾರಂಭಿಸಿವೆ. ಇದರಿಂದ ಸಾಕಷ್ಟು ಕಷ್ಟನಷ್ಟಗಳು ಸಂಭವಿಸುತ್ತಿವೆ. ಗುಡ್ಡದಿಂದ ಮಣ್ಣು ಕುಸಿಯುವುದನ್ನು ಯಾರು ತಡೆಯಲಾಗುತ್ತಿಲ್ಲ. ಆದರೆ ಈ ಹುಲ್ಲು ಬೆಟ್ಟ ಕುಸಿಯುವುದನ್ನು ತಡೆಯುವ ಸಾಮರ್ಥ್ಯ ಹೊಂದಿದೆ ಅನ್ನುತ್ತಿದ್ದಾರೆ ತಿಳಿದವರು.

ಹೌದು, ವೆಟಿವೆರ್ ಎಂಬ ಹುಲ್ಲಿನಿಂದ ಮಣ್ಣು ಕುಸಿಯುವುದನ್ನು ತಡೆಯುವ ಪ್ರಯತ್ನಕ್ಕೆ ಕೊಡಗಿನ ಮಂದಿ ಕೈಹಾಕಿದ್ದಾರೆ. ವೆಟಿವೆರ್ ಅಂದರೆ ಕತ್ತರಿಸಲಾಗದ ಹುಲ್ಲು ಎಂದರ್ಥ. ಕನ್ನಡದಲ್ಲಿ ಲಾವಂಚ ಎಂದು ಕರೆಯಲಾಗುತ್ತದೆ. ಕಳೆದ ಕೆಲವು ದಿನಗಳ ಹಿಂದೆ ತಲಕಾವೇರಿಯಲ್ಲಿ ಬ್ರಹ್ಮಗಿರಿ ಬೆಟ್ಟ ಬಿರುಕು ಬಿಟ್ಟು ನಿಂತಿದೆ. ಆದ್ದರಿಂದ ಬೆಟ್ಟ ಜಾರದಂತೆ ತಡೆಗಟ್ಟಲು ಈ ಲಾವಂಚ ಹುಲ್ಲನ್ನು ನೆಡಲಾಗುತ್ತಿದೆ. ತಲಕಾವೇರಿ-ಭಾಗಮಂಡಲ ದೇವಾಲಯದ ಸಮಿತಿ ಹಾಗೂ ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ಇಂದು ಈ ಹುಲ್ಲು ನೆಡುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಶಾಲಾವಿದ್ಯಾರ್ಥಿಗಳು ಹುಲ್ಲು ನಾಟಿಯಲ್ಲಿ ಪಾಲ್ಗೊಂಡಿದ್ದರು.

ಈ ವೆಟಿವೇರ್ ಹುಲ್ಲು ತಮಿಳುನಾಡಿನಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಇದರ ಬೇರು ಸುಮಾರು 14 ಅಡಿ ಆಳಕ್ಕೆ ಹೋಗುತ್ತದೆ. ಹಾಗೆಯೇ ಮಣ್ಣು ಜಾರುವುದನ್ನು ತಡೆಯುತ್ತದೆ ಎನ್ನಲಾಗುತ್ತದೆ. ಒಂದು ಹುಲ್ಲು ಕಡ್ಡಿ ನಾಟಿ ಮಾಡಿದರೆ ಒಂದು ವರ್ಷಕ್ಕೆ ಅದರಲ್ಲಿ 60 ರಿಂದ 80 ಕಡ್ಡಿಗಳು ಬೆಳೆಯುತ್ತದೆ. ಅಸ್ಸಾಂ, ಜಮ್ಮು ಕಾಶ್ಮೀರದ ಬೆಟ್ಟ ಪ್ರದೇಶದಲ್ಲಿ ಈ ಹುಲ್ಲು ಬೆಳೆಯಲಾಗಿದ್ದು ಬೆಟ್ಟ ಕುಸಿಯುತ್ತಿಲ್ಲ ಎಂದು ಹೇಳಲಾಗುತ್ತಿದೆ. ಆದ್ದರಿಂದ ತಮಿಳುನಾಡಿನಿಂದ ಪ್ರಮೋದ್ ಸೋಮಯ್ಯ ಎಂಬವರು ಕಳೆದ ವರ್ಷ ತಂದು ಮನೆಯಲ್ಲಿ ನರ್ಸರಿ ಮಾಡಿದ್ದು ಸುಮಾರು ನಾಲ್ಕು ಸಾವಿರ ಹುಲ್ಲುಕಡ್ಡಿಯನ್ನು ಇಲ್ಲಿ ನಾಟಿ ಮಾಡಲು ಉಚಿತವಾಗಿ ನೀಡಿದ್ದಾರೆ.

ನೀರಿನಲ್ಲಿ ಮುಳುಗುವವರಿಗೆ ಒಂದು ಹುಲ್ಲುಕಡ್ಡಿ ಆಸರೆಯಾಗುತ್ತದೆಯಂತೆ. ಅದೇ ರೀತಿ ಬೆಟ್ಟ ಜಾರುವುದನ್ನು ತಡೆಯಲು ಈ ಲಾವಂಚ ಹುಲ್ಲು ಆಸರೆಯಾಗಬಹುದಾ ಎಂಬ ಪ್ರಶ್ನೆ ಮೂಡಿದ್ದು, ಬೆಟ್ಟದಲ್ಲಿ ಹುಲ್ಲು ಬೆಳೆದ ನಂತರ ಇದಕ್ಕೆ ಉತ್ತರ ದೊರೆಯಲಿದೆ. (ದಿಗ್ವಿಜಯ ನ್ಯೂಸ್​)

- Advertisement -

Stay connected

278,627FansLike
573FollowersFollow
610,000SubscribersSubscribe

ವಿಡಿಯೋ ನ್ಯೂಸ್

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಬಳಸಿದ ಪರಿಸರಸ್ನೇಹಿ ಕಾರು...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...