More

  ಲೈಕ್ಸ್​ಗಾಗಿ ಹುಚ್ಚು ಹುಚ್ಚಾಗಿ ವಾಹನ ಚಾಲನೆ ಮಾಡುವ ಮುನ್ನ ಎಚ್ಚರ! ಬೀಳುತ್ತೆ ಕೇಸ್​

  ಮಡಿಕೇರಿ: ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ ಪಡೆಯಲು ಹುಚ್ಚು ಹುಚ್ಚಾಗಿ ವಾಹನ ಚಾಲನೆ ಮಾಡುವವರೇ ಹುಷಾರ್! ಪೊಲೀಸರು ನಿಮ್ಮ ಜಾಲತಾಣಗಳ ಮೇಲೆ ಕಣ್ಣಿಟ್ಟಿದ್ದಾರೆ. ಅಷ್ಟೇ ಅಲ್ಲ ನಿಯಮ ಮೀರಿ ವಾಹನ ಚಾಲನೆ ಮಾಡಿದರೆ ಕೇಸ್ ಕೂಡ ಹಾಕುತ್ತಾರೆ. ಇಂತಹ ಒಂದು ಪ್ರಕರಣ ಮಡಿಕೇರಿಯಲ್ಲಿ ನಡೆದಿದೆ.

  ಬೆಟ್ಟಗೇರಿ ನಿವಾಸಿ ಚೋವಂಡ ಲೋಕೇಶ್ ಅಪ್ಪಣ್ಣ ಎಂಬವರು ಕಾರನ್ನು ಅತೀ ವೇಗ, ಅಜಾಗರೂಕತೆ ಹಾಗೂ ಅಸಂಬದ್ಧವಾಗಿ ಚಲಾಯಿಸುತ್ತಿರುವ ವಿಡಿಯೋ ತುಣುಕುಗಳನ್ನು ಫೇಸ್‌ಬುಕ್‌ನಲ್ಲಿ ಹಾಕಿಕೊಂಡಿದ್ದರು. ಈ ಕುರಿತು ಜಿಲ್ಲಾ ಪೊಲೀಸ್ ಸೋಷಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್‌ನ ಅಧಿಕಾರಿಗಳು, ಸಿಬ್ಬಂದಿ ನೀಡಿದ ಮಾಹಿತಿ ಹಿನ್ನೆಲೆಯಲ್ಲಿ ಚೋವಂಡ ಲೋಕೇಶ್ ಅಪ್ಪಣ್ಣ ಎಂಬುವರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಎಸ್‌ಪಿ ಕೆ. ರಾಮರಾಜನ್ ತಿಳಿಸಿದ್ದಾರೆ.

  ಕೃತ್ಯಕ್ಕೆ ಬಳಸಿದ ಕಾರನ್ನು ಜಪ್ತಿಗೊಳಿಸವಲ್ಲಿ ಕ್ರಮ ಕೈಗೊಳ್ಳಲಾಗುವುದು, ಚೋವಂಡ ಲೋಕೇಶ್ ಅಪ್ಪಣ್ಣ ಅವರ ವಾಹನ ಚಲನಾ ಪರವಾನಿಗೆಯನ್ನು ರದ್ದುಗೊಳಿಸುವಂತೆ ಸಂಬಂಧಪಟ್ಟ ಇಲಾಖೆಗೆ ಶಿಫಾರಸ್ಸು ಮಾಡಲಾಗುವುದು ಎಂದು ರಾಮರಾಜನ್ ಮಾಹಿತಿ ನೀಡಿದ್ದಾರೆ.

  ರಸ್ತೆಯಲ್ಲಿ ವಾಹನ ಚಲಾಯಿಸುವಾಗ ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಅತೀ ವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸುವುದು ಕಂಡುಬಂದಲ್ಲಿ ಮತ್ತು ರಸ್ತೆಯಲ್ಲಿ ಯಾವುದೇ ಅಪಘಾತಗಳು ಸಂಭವಿಸಿದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ 112 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಅಥವಾ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಎಸ್‌ಪಿ ಕೋರಿದ್ದಾರೆ. ಅಕ್ರಮ ಚಟುವಟಿಕೆÀಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದೂ ತಿಳಿಸಿದ್ದಾರೆ.

  ತೆಲಂಗಾಣದಲ್ಲಿ ಪತ್ರಿಕೆಗಳಲ್ಲಿ ಗ್ಯಾರಂಟಿ ಜಾಹೀರಾತು: ಕಾಂಗ್ರೆಸ್​ ಸರ್ಕಾರಕ್ಕೆ ಚುನಾವಣಾ ಆಯೋಗ ನೋಟಿಸ್​

  ಚಿತ್ರ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಧ್ವನಿ ಎನ್ನಲಾದ ಇನ್‌ಸ್ಪೆಕ್ಟರ್ ವರ್ಗಾವಣೆ ಕುರಿತ ಆಡಿಯೋ ವೈರಲ್

  ಡಿ.1 ರಿಂದ ಜಿಪಿಎಸ್, ಪ್ಯಾನಿಕ್ ಬಟನ್ ಕಡ್ಡಾಯ:

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts