More

    ಕೊಡಗು ಜಿಲ್ಲಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಮಳೆ: ಶಾಲಾ ಕಾಲೇಜುಗಳಿಗೆ ರಜೆ

     

    ಕೊಡಗು: ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರವಾಗಿ ಕೊಡಗು ಜಿಲ್ಲಾದ್ಯಂತ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ನಾಳೆ (ಜು.7) ಜಿಲ್ಲಾಧಿಕಾರಿ ವೆಂಕಟ್ ರಜೆ ಘೋಷಿಸಿದ್ದಾರೆ.

    ಕರಿಕೆ, ಚೆಂಬು, ಸಂಪಾಜೆ, ನಾಪೋಕ್ಲು ಮತ್ತು ಭಾಗಮಂಡಲ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ ಪರಿಣಾಮ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು ಭಾಗಮಂಡಲ ಹಾಗೂ ನಾಪೋಕ್ಲು ರಸ್ತೆ ಸಂಪರ್ಕ ಕಡಿತಗೊಂಡಿದೆ. ಕಾವೇರಿ ನದಿಯ ನೀರಿನ ಮಟ್ಟ ಕೂಡ ಏರಿಕೆಯಾಗುತ್ತಿದ್ದು, ಈ ಭಾಗದ ರಸ್ತೆಯ ಮೇಲೆ 3 ಅಡಿಗಳಷ್ಟು ನೀರು ಹರಿಯುತ್ತಿದೆ. ಪರಿಣಾಮ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

    ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕೆಆರ್‍ಎಸ್‍ಗೆ ಅಪಾರ ಪ್ರಮಾಣದ ನೀರು ಹರಿದು ಬರುವ ನಿರೀಕ್ಷೆಯಿದೆ. ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೂ ನೀರು ನುಗ್ಗಿದ್ದು, ದೇವಸ್ಥಾನದ ಬಳಿಯ ಶಾಂಭವಿ ನದಿಯ ನೀರು ಗರ್ಭಗುಡಿಯ ಮೆಟ್ಟಿಲಿನವರೆಗೂ ಬಂದಿದೆ.

    ರೆಡ್ ಅಲರ್ಟ್ ಘೋಷಣೆ
    ರಾಜ್ಯದಲ್ಲಿ ಜುಲೈ10 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ತೀವ್ರತೆಯ ಮಳೆಯಾಗುವ ಸಾಧ್ಯತೆಯಿರುವುದರಿಂದ ಇಂದು ಮಧ್ಯಾಹ್ನದಿಂದ ಜು.7 ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

    ಭಾರಿ ಮಳೆ ಮುನ್ಸೂಚನೆ : ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts