ಅಂತಿಮ ಹಂತ ತಲುಪಿದ “ಕೊಡವಾಮೆ ಬಾಳೋ”; ಐತಿಹಾಸಿಕ ಶಾಂತಿ ಪ್ರತಿಭಟನಾ ಮೆರವಣಿಗೆಯಲ್ಲಿ 25,000 ಕೊಡವರು ಭಾಗಿ

Kodava Samavesha

ಕೊಡಗು: ಸಂಸ್ಕೃತಿ ರಕ್ಷಣೆಯ ಸಲುವಾಗಿ ಕೊಡವರು ನಡೆಸುತ್ತಿರುವ ಬೃಹತ್ ಪಾದಯಾತ್ರೆ ಶುರುವಾಗಿ ಇಂದು (ಫೆಬ್ರವರಿ  06) ಐದನೇ ದಿನಕ್ಕೆ ಕಾಲಿರಿಸಿದ್ದು, ಜನರು ಪಾದಯಾತ್ರೆಯಲ್ಲಿ ಅಪಾರ ಸಂಖ್ಯೆಯಲ್ಲಿ ಭಾಗಿಯಾಗಿದ್ದಾರೆ. ಫೆಬ್ರವರಿ 07ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ನಾಳೆ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ ಮಧ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಯಲ್ಲಿ ಸಹಸ್ರಾರು ಸಂಖ್ಯೆಯ ಸಮುದಾಯ ಬಾಂಧವರು ಸಾಂಪ್ರದಾಯಿಕ ಉಡುಪಿನೊಂದಿಗೆ ಅತ್ಯಂತ ಶಿಸ್ತುಬದ್ಧವಾಗಿ ಜಾಥದಲ್ಲಿ ಪಾಲ್ಗೊಳ್ಳುವ ಮೂಲಕ ಗಮನ ಸೆಳೆದರು. ಪಾದಯಾತ್ರೆಯ ಮೂಲಕ ಕೊಡವ ಸಮುದಾಯ ಬಾಂಧವರು ತಮ್ಮ ಜನಾಂಗದ ಅಸ್ತಿತ್ವ ಮತ್ತು ಭದ್ರತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲು ಮುಂದಾಗಿದ್ದಾರೆ.

ಫೆಬ್ರವರಿ 7 ರಂದು ಬೆಳಿಗ್ಗೆ 8:30 ಕ್ಕೆ ಮಡಿಕೇರಿ ಪಟ್ಟಣಕ್ಕೆ ಅಂತಿಮ ಹಂತವನ್ನು ಪ್ರವೇಶಿಸಲಿರುವ “ಕೊಡವಾಮೆ ಬಾಲೋ” ಎಂಬ ಐತಿಹಾಸಿಕ ಶಾಂತಿ ಪ್ರತಿಭಟನಾ ಮೆರವಣಿಗೆಗೆ ನಾವು ನಿಮ್ಮನ್ನು ಹೃತ್ಪೂರ್ವಕವಾಗಿ ಆಹ್ವಾನಿಸುತ್ತೇವೆ. ಇದು ಸಾಂಪ್ರದಾಯಿಕ ಉಡುಗೆ ತೊಡುಗೆಗಳು, ಸಾಂಸ್ಕೃತಿಕ ಪ್ರದರ್ಶನಗಳು, ಸಾಂಪ್ರದಾಯಿಕ ನೃತ್ಯಗಳು ಇತ್ಯಾದಿಗಳೊಂದಿಗೆ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಸಮಾನ ಸಾಂವಿಧಾನಿಕ ಹಕ್ಕುಗಳು ಮತ್ತು ಪ್ರಾತಿನಿಧ್ಯವನ್ನು ಮತ್ತು ಕೊಡವರು ಮತ್ತು ಕೊಡವ ಮಾತನಾಡುವ ಸಮುದಾಯಗಳ ದೀರ್ಘಕಾಲದಿಂದ ಬಾಕಿ ಇರುವ ವಿವಿಧ ಬೇಡಿಕೆಗಳನ್ನು ಎತ್ತಿ ತೋರಿಸುತ್ತದೆ. ಈ ಉದಾತ್ತ ಉದ್ದೇಶಕ್ಕಾಗಿ ಯಾವಾಗಲೂ ನಿಮ್ಮ ನಿರಂತರ ಬೆಂಬಲವನ್ನು ನಾವು ನಿರೀಕ್ಷಿಸುತ್ತೇವೆಎಂದು ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ದಂಪತಿಗಳು ಕೊಡವ ಭಾಂದವರನ್ನು ಸಮಾವೇಶಕ್ಕೆ ಆಹ್ವಾನಿಸಿದ್ದಾರೆ.

Team India ಆಲ್ರೌಂಡ್ ಪ್ರದರ್ಶನಕ್ಕೆ ನಲುಗಿದ ಆಂಗ್ಲರು; ಮೊದಲ ಏಕದಿನದಲ್ಲಿ ಭಾರತಕ್ಕೆ ಸುಲಬ ತುತ್ತಾದ ಇಂಗ್ಲೆಂಡ್

ದೇಶದಲ್ಲಿ ಹಿಂದೂ ಎಂಬ ಪದವೇ ಇರಲಿಲ್ಲ ಅದನ್ನು ತಂದಿದ್ದೆ ಕಾಂಗ್ರೆಸ್​: Santosh Lad

ಚಲಿಸುತ್ತಿದ್ದ Bus ಟೈರ್ ಸ್ಫೋಟಗೊಂಡು ಕಾರಿಗೆ ಡಿಕ್ಕಿ; 8 ಮಂದಿ ಸಾವು

 

 

Share This Article

ಆರ್ಥಿಕ ಸಮಸ್ಯೆಗಳಿಂದ ಬಳಲುತ್ತಿದ್ದೀರಾ? ಹಾಗಿದ್ರೆ ಭಾನುವಾರ ಹೀಗೆ ಮಾಡಿ ನೋಡಿ…devotional

devotional:ಭಾನುವಾರ ಸೂರ್ಯ ದೇವನನ್ನು ಪೂಜೆ ಮಾಡುವುದರಿಂದ ಮತ್ತು ಸೂರ್ಯ ಮಂತ್ರಗಳನ್ನು ಪಠಿಸುವುದರಿಂದ ಜೀವನದಲ್ಲಿ ಸಂತೋಷ, ಸಮೃದ್ಧಿ…

ಸುಡು ಬೇಸಿಗೆಯಲ್ಲಿ ಆರೋಗ್ಯ ನಿಮ್ಮ ಕೈಯಲ್ಲಿ! ಈ ಟಿಪ್ಸ್​ ತಪ್ಪದೇ ಫಾಲೋ ಮಾಡಿ, ಇಲ್ಲದಿದ್ರೆ ಆರೋಗ್ಯಕ್ಕೆ ಡೇಂಜರ್​ | Summer Tips

Summer Tips : ಎಲ್ಲೆಡೆ ಬೇಸಿಗೆ ಆರಂಭವಾಗಿದೆ. ಸೂರ್ಯನ ಪ್ರಖರವಾದ ಕಿರಣಗಳು ನಮ್ಮ ನೆತ್ತಿಯನ್ನು ಸುಡುತ್ತಿದೆ.…

ಈ 3 ರಾಶಿಯವರು ಹಣಕ್ಕಿಂತಲೂ ಪ್ರೀತಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಾರಂತೆ! ನಿಮ್ಮ ರಾಶಿ ಯಾವುದು? Zodiac Signs

Zodiac Signs : ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ ನಂಬದವರು…