ಎರಡು ಭವಿಷ್ಯವಾಣಿ ನಿಜವಾಗಿವೆ, ದೇಶಕ್ಕೆ ಮತ್ತೊಂದು ಗಂಡಾಂತರ ಕಾದಿದೆ: ಕೋಡಿಶ್ರೀ ಭವಿಷ್ಯ

Kodi Mutt Swamiji
Published on

ಕೋಲಾರ: ತಮ್ಮ ಭವಿಷ್ಯವಾಣಿಯಿಂದಲೇ ಹೆಚ್ಚು ಸುದ್ದಿಯಲ್ಲಿರುವ ಹಾಸನದ ಕೋಡಿ ಮಠದ ಡಾ.ಶಿವಾನಂದ ಶಿವಯೋಗಿ ಮಹಾ ಸ್ವಾಮೀಜಿಗಳು ಮತ್ತೊಂದು ಭಯಾನಕ ಭವಿಷ್ಯವನ್ನು ನುಡಿದಿದ್ದಾರೆ. ಈಗಾಗಲೇ ನಾನು ಹೇಳಿದ ಎರಡು ಭವಿಷ್ಯಗಳು ನಿಜವಾಗಿವೆ ಮತ್ತು ಜಗತ್ತಿಗೆ ಮತ್ತೊಂದು ಗಂಡಾಂತರ ಎದುರಾಗಲಿದೆ ಎಂದಿದ್ದಾರೆ.

ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಹಿಂದೆ ನಾನು ಹೇಳಿದಂತೆ ರಾಜ್ಯದಲ್ಲಿ ಬಹುಮತದ ಸರ್ಕಾರ ಬಂದಿದೆ. ಈ ವರ್ಷದಲ್ಲಿ ದೊಡ್ಡ ಅವಘಡ ನಡೆಯುತ್ತದೆ ಎಂದು ಹೇಳಿದ್ದೆ, ಅದರಂತೆ ಒಡಿಶಾದಲ್ಲಿ ರೈಲು ದುರಂತವು ಸಂಭವಿಸಿದೆ ಎಂದರು.

ಸಾಕಷ್ಟು ಅನಾಹುತ ಸಂಭವಿಸಲಿದೆ

ಈ ವರ್ಷ ಇನ್ನೂ ಒಂದು ಗಂಡಾಂತರ ದೇಶಕ್ಕೆ ಕಾದಿದೆ. ಈ ವರ್ಷ ಅಚಾನಕ್ಕಾಗಿ ಗುಡುಗು-ಮಿಂಚು ಬರಲಿದೆ. ಎರಡರಿಂದ ಮೂರು ರಾಷ್ಟ್ರಗಳು ನೀರಿನಲ್ಲಿ ಮುಳುಗಡೆಯಾಗಲಿದೆ. ಎಲ್ಲೋ ನಡೆಯುವ ಬಾಂಬ್ ದಾಳಿಯಿಂದ ನಮಗೆ ಸಾಕಷ್ಟು ಅನಾಹುತ ಸಂಭವಿಸಲಿದೆ. ಗಿಡ, ಮರ ದೈವದ ಆರಾಧ್ಯದ ಸಂಕೇತ, ಮತ್ತೆ ಕೈವಾರ ತಾತಯ್ಯನವರು ಹುಟ್ಟಿ ಬರುವ ಸಂಕೇತ ಇದೆ. ಅಂತಹ ಸೂಚನೆ ಈಗಾಗಲೆ ಸಿಕ್ಕಿದೆ ಎಂದು ಹೇಳಿದರು.

ದೈವವೇ ಉತ್ತರ ನೀಡಲಿದೆ

ರಾಜ್ಯದಲ್ಲಿ ಆದ್ಯಾತ್ಮಿಕವಾಗಿ ಅವರು ನಡೆಯುತ್ತಿದ್ದಾರೆ. ಹಾಗಾಗಿ ಅವರಿಗೆ ಒಳ್ಳೆಯದಾಗಲಿ.‌ ಆಧ್ಯಾತ್ಮ ಬಿಟ್ಟು ಹೋದರೆ ಅವರಿಗೆ ದೈವವೇ ಉತ್ತರ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ಶುಭ ಸೂಚನೆಯನ್ನು ಕೋಡಿ ಮಠದ ಸ್ವಾಮೀಜಿ ನೀಡಿದರು. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net