More

    ಮೈದಾನದಲ್ಲೇ ಜಗಳಕ್ಕಿಳಿದ ಗಂಭೀರ್​-ಕೊಹ್ಲಿ; ವಾಗ್ವಾದಕ್ಕೆ ಮೂಲ ಕಾರಣವೇನು?

    ಲಖನೌ: ಸೋಮವಾರ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಹಾಗೂ ಲಖನೌ ಸೂಪರ್​ ಜೈಂಟ್ಸ್​ ನಡುವೆ ನಡೆದ ಹಣಾಹಣಿ ಮತ್ತೊಂದು ಘಟನೆಗೆ ಸಾಕ್ಷಿಯಾಗಿದೆ.

    ಭಾರತ ತಂಡದ ಸ್ಟಾರ್​ ಬ್ಯಾಟ್ಸ್​ಮ್ಯಾನ್​ ವಿರಾಟ್​ ಕೊಹ್ಲಿ ಹಾಗೂ ಲಖನೌ ತಂಡದ ಮೆಂಟರ್​ ಗೌತಮ್​ ಗಂಭೀರ್​ ನಡುವೆ ಮಾತಿನ ಚಕಮಕಿ ನಡೆದಿದೆ.

    ವಾಗ್ವಾದ

    ಇನ್ನು ಪಂದ್ಯ ಮುಗಿದ ಬಳಿಕ ಉಭಯ ತಂಡದ ಆಟಗಾರರು ಪರಸ್ಪರ ಹಸ್ತಲಾಘನ ಮಾಡುವ ವೇಳೆ ಕೊಹ್ಲಿ ಹಾಗೂ ಲಖನೌ ತಂಡದ ಆರಂಭಿಕ ಕೈಲ್​ ಮೇಯರ್ಸ್​ ನಡುವೆ ಮೊದಲು ಮಾತಿನ ಚಕಮಕಿ ನಡೆದಿದೆ.

    ಆ ನಂತರ ಪಂದ್ಯ ವೇಳೆ ಎಲ್​ಎಸ್​ಜಿ ಬೌಲರ್​ ನವೀನ್​ ಉಲ್​ ಹಕ್​​ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಉಭಯ ಆಟಗಾರರನ್ನು ಮ್ಯಾಕ್ಸ್​​ವೆಲ್​ ಬೇರ್ಪಡಿಸಿದ್ದಾರೆ.

    ಪಂದ್ಯ ಮುಗಿದ ಬಳಿಕ ಇದೇ ವಿಚಾರವಾಗಿ ಗೌತಮ್​ ಗಂಭೀರ್​ ಹಾಗೂ ವಿರಾಟ್​ ಕೊಹ್ಲಿ ನಡುವಿನ ವಾಗ್ವಾದಕ್ಕೆ ಕಾರಣವಾಗಿರಬಹುದು ಎಂದು ಹೇಳಲಾಗಿದ್ದು ಈ ವೇಳೆ ಆಟಗಾರರು ಮಧ್ಯಪ್ರವೇಶಿಸಿ ಇಬ್ಬರನ್ನು ಸಮಾಧಾನಪಡಿಸಿದ್ದಾರೆ.

    kohli naveen

    ಇದನ್ನೂ ಓದಿ: VIDEO| RCB vs LSG; ರೋಚಕ ಪಂದ್ಯ ಮುಗಿದ ಬಳಿಕ ಗಂಭೀರ್​​ ಮಾಡಿದ್ದಾದರೂ ಏನು?

    ದಂಡ

    ಆರ್‌ಸಿಬಿ vs ಎಲ್‌ಎಸ್‌ಜಿ ಪಂದ್ಯದ ನಂತರ ಮಾತಿನ ಚಕಮಕಿಗಿಳಿದ ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ಅವರಿಗೆ ಪಂದ್ಯದ ಸಂಭಾವನೆಯಲ್ಲಿ ಶೇ 100ರಷ್ಟು ದಂಡ ವಿಧಿಸಲಾಗಿದೆ. ಇದರೊಂದಿಗೆ ಲಖನೌ ವೇಗಿ ನವೀನ್ ಉಲ್ ಹಕ್ ಅವರಿಗೂ ಪಂದ್ಯದ ಸಂಭಾವನೆಯ ಶೇ 50 ರಷ್ಟು ದಂಡ ವಿಧಿಸಲಾಗಿದೆ.

    ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಟಾಟಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ರ ಟಾಟಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ಪಂದ್ಯದ ವೇಳೆ ಐಪಿಎಲ್ ಕೋಡ್ ಆಫ್ ಕಂಡಕ್ಟ್ ಅನ್ನು ಉಲ್ಲಂಘಿಸಿದ್ದಕ್ಕಾಗಿ ಲಖನೌ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಅವರಿಗೆ ದುಬಾರಿ ದಂಡ ವಿಧಿಸಲಾಗಿದೆ. 

    ದುಬಾರಿ ಮೊತ್ತ

    ಐಪಿಎಲ್ ನೀತಿ ಸಂಹಿತೆಯ ಕಲಂ 2.21ರ ಅಡಿಯಲ್ಲಿ ಎರಡನೇ ಹಂತದ ಅಪರಾಧವನ್ನು ಗಂಭೀರ್ ಒಪ್ಪಿಕೊಂಡಿದ್ದಾರೆ. ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿಗೆ ಪಂದ್ಯ ಶುಲ್ಕದ ಶೇ 100ರಷ್ಟು ದಂಡ ವಿಧಿಸಲಾಗಿದೆ. ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.21ರ ಅಡಿಯಲ್ಲಿ 2ನೇ ಹಂತದ ಅಪರಾಧವನ್ನು ಕೊಹ್ಲಿ ಒಪ್ಪಿಕೊಂಡಿದ್ದಾರೆ ಎಂದು ಎಂದು ಐಪಿಎಲ್ ಹೇಳಿಕೆಯಲ್ಲಿ ತಿಳಿಸಿದೆ.

    ಲಖನೌ ಸೂಪರ್ ಜೈಂಟ್ಸ್ ಬೌಲರ್ ನವೀನ್-ಉಲ್-ಹಕ್ ಅವರ ಪಂದ್ಯ ಶುಲ್ಕದ ಶೇ 50ರಷ್ಟು ದಂಡ ವಿಧಿಸಲಾಗಿದೆ. ನವೀನ್-ಉಲ್-ಹಕ್ ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.21 ರ ಅಡಿಯಲ್ಲಿ ಮೊದಲನೇ ಹಂತದ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಈ ಮೂಲಕ ಕೊಹ್ಲಿಗೆ 1.07 ಕೋಟಿ ರೂ. ದಂಡವನ್ನು ಪಾವತಿಸಬೇಕಿದ್ದರೆ, ಗೌತಮ್ ಗಂಭೀರ್ ಅವರು 25 ಲಕ್ಷ ರೂ. ಪಾವಿತಿಸಬೇಕಿದೆ. ಲಖನೌ ಸೂಪರ್ ಜೈಂಟ್ಸ್ ತಂಡದ ಆಟಗಾರ ನವೀನ್ ಉಲ್ ಹಕ್ 1.79 ಕೋಟಿ ರೂ. ಪಾವತಿಸಬೇಕಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts