

Memes : ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಇತ್ತೀಚೆಗೆ ನಟಿ ಅವನೀತ್ ಕೌರ್ ಫೋಟೋ ಲೈಕ್ ಮಾಡಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ, ಈ ಕುರಿತು ವಿರಾಟ್ ಸ್ಪಷ್ಟನೆ ಕೊಟ್ಟಿದ್ದರು ಸಹ ಸಾಮಾಜಿಕ ಜಾಲತಾಣದಲ್ಲಿ ಮೀಮ್ಸ್ ಹಾಗೂ ಟ್ರೋಲ್ಗಳು ಇಂಟರ್ನೆಟ್ ಅನ್ನು ಶೇಕ್ ಮಾಡಿದೆ.
ಐಪಿಎಲ್ 2025ರ ಆವೃತ್ತಿಯಲ್ಲಿ ಬ್ಯುಸಿಯಾಗಿರುವ ವಿರಾಟ್ ಕೊಹ್ಲಿ ಇತ್ತೀಚೆಗೆ ಇನ್ಸ್ಟಾಗ್ರಾಮ್ ನಲ್ಲಿ ಮಾಡೆಲ್ ಮತ್ತು ನಟಿ ಅವನಿತ್ ಕೌರ್ ಅವರ ಫೋಟೋವನ್ನು ಲೈಕ್ ಮಾಡಿದ್ದಾರೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಕಾಡ್ಗಿಚ್ಚಿನಂತೆ ಹರಡಿದೆ.
ಹೌದು, ಅವನೀತ್ ಕೌರ್ ಕೆಲ ದಿನಗಳಿಂದೆ ತನ್ನ ಇನ್ಸ್ಟಾಗ್ರಾಮ್ನಲ್ಲಿ ಹಾಕಿದ್ದ ಹಾಟ್ ಫೋಟೋಗೆ ವಿರಾಟ್ ಲೈಕ್ ಮಾಡಿದ್ದಾರೆ ಎಂದು ಅಭಿಮಾನಿಗಳು ಸ್ಕೀನ್ ಶಾಟ್ ಶೇರ್ ಮಾಡಿದ್ದಾರೆ. ಇದೀಗ ಅದೇ ಸ್ಕ್ರೀನ್ಶಾಟ್ ಭಾರಿ ವೈರಲ್ ಆಗಿದೆ.
ಇನ್ಸ್ಟಾಗ್ರಾಮ್ ಅಲ್ಗಾರಿದಮ್‌ನಲ್ಲಿನ ದೋಷದಿಂದಾಗಿ ಇದು ಸಂಭವಿಸಿದೆ, ಅವರ ಫೀಡ್ ಅನ್ನು ಅಳಿಸುವಾಗ ಅಲ್ಗಾರಿದಮ್ ತಪ್ಪಾಗಿದೆ ಮತ್ತು ಇದರ ಹಿಂದೆ ಬೇರೆ ಯಾವುದೇ ಉದ್ದೇಶವಿಲ್ಲ. ಈ ವಿಷಯದ ಬಗ್ಗೆ ಯಾವುದೇ ಊಹಾಪೋಹಗಳನ್ನು ಹರಡಬೇಡಿ. ಇದನ್ನು ಎಲ್ಲರೂ ಅರ್ಥಮಾಡಿಕೊಳ್ಳುತ್ತಾರೆಂದು ಭಾವಿಸುತ್ತೇನೆ ಎಂದು ಕೊಹ್ಲಿ ಹೇಳಿದರು. ಸ್ಪಷ್ಟನೆ ಕೊಟ್ಟರು ಸಹ ವಿರಾಟ್-ಕೌರ್ ಮಿಮ್ಸ್ ಭಾರೀ ಸದ್ದು ಮಾಡುತ್ತಿದೆ.
ಲೈಕ್ ಮಾಡಿದ ಪೋಸ್ಟ್‌ನ ಸ್ಕ್ರೀನ್‌ಶಾಟ್‌ಗಳು ಎಕ್ಸ್ ಮತ್ತು ಇನ್‌ಸ್ಟಾಗ್ರಾಮ್‌ನಂತಹ ಪ್ಲಾಟ್‌ಫಾರ್ಮ್‌ಗಳಲ್ಲಿ ಹರಡಲು ಪ್ರಾರಂಭಿಸಿದ್ದು, ಅಭಿಮಾನಿಗಳು ಮತ್ತು ಮೀಮ್ ರಚನೆಕಾರರಿಂದ ಹಾಸ್ಯಮಯ ಪ್ರತಿಕ್ರಿಯೆಗಳ ಅಲೆಯನ್ನು ಹುಟ್ಟುಹಾಕಿದವು.(ಏಜೆನ್ಸೀಸ್)