More

    ನೂತನ ರ್‍ಯಾಂಕಿಂಗ್‌ ಪಟ್ಟಿ ಬಿಡುಗಡೆ ಮಾಡಿದ ಐಸಿಸಿ; ಕೊಹ್ಲಿ ಕಂಬ್ಯಾಕ್​ಗೆ ನೆರವಾದ ಸೆಂಚುರಿ

    ನವದೆಹಲಿ: ತವರಿನಲ್ಲಿ ಮುಕ್ತಾಯವಾದ ಬಾರ್ಡರ್ – ಗವಾಸ್ಕರ್ ಟ್ರೋಫಿಯ ಅಂತಿಮ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಭರ್ಜರಿ ಪ್ರದರ್ಶನ ನೀಡಿದ್ದರು. ಇದೀಗ 186ರನ್​ಗಳ ಅಧ್ಬುತ ಪ್ರದರ್ಶನದ ನೆರವಿನಿಂದ ಐಸಿಸಿ ರ್ಯಾಂಕಿಂಗ್​ನಲ್ಲಿ 54 ರೇಟಿಂಗ್ ಪಾಯಿಂಟ್ ಪಡೆದುಕೊಂಡು 8 ಸ್ಥಾನಗಳ ಏರಿಕೆ ಕಂಡಿದ್ದಾರೆ. ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ವಿರಾಟ್ ಕೊಹ್ಲಿ ತಮ್ಮ 28ನೇ ಟೆಸ್ಟ್ ಶತಕ ಸಿಡಿಸಿದ್ದರು.

    ಐಸಿಸಿ ನೂತನ ರ್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಿದ್ದು, ವಿರಾಟ್ ಕೊಹ್ಲಿ 705 ಪಾಯಿಂಟಗ ನೆರವಿನಿಂದ 13ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಅಂತೆಯೇ ಆಸ್ಟ್ರೇಲಿಯಾದ ಮಾರ್ನಸ್ ಲಬುಶೆನ್ 915 ರೇಟಿಂಗ್ ಅಂಕಗಳೊಂದಿಗೆ ನಂಬರ್-1 ಸ್ಥಾನದಲ್ಲಿ ಮುಂದುವರಿದಿದ್ದಾರೆ. ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ 872 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಐಸಿಸಿಯ ನೂತನ ರ್ಯಾಂಕಿಂಗ್ ಪಟ್ಟಿಯ ಟಾಪ್​-10ನಲ್ಲಿ ರಿಷಬ್ ಪಂತ್ 9 ಹಾಗೂ ನಾಯಕ ರೋಹಿತ್ ಶರ್ಮಾ 10ನೇ ಸ್ಥಾನದಲ್ಲಿದ್ದಾರೆ.

    ಐಸಿಸಿ ಟೆಸ್ಟ್ ಬೌಲರ್‌ಗಳ ಶ್ರೇಯಾಂಕವನ್ನು ಬಿಡುಗಡೆ ಮಾಡಿದ್ದು, ನೂತನ ಶ್ರೇಯಾಂಕದಲ್ಲಿ ಆರ್​. ಅಶ್ವಿನ್ ವಿಶ್ವದ ನಂಬರ್.1 ಟೆಸ್ಟ್ ಬೌಲರ್ ಸ್ಥಾನವನ್ನು ಅಲಂಕರಿಸಿದ್ದಾರೆ. ತವರಿನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಯಶಸ್ವಿ ಬೌಲರ್ ಎನಿಸಿಕೊಂಡಿದ್ದ ಅಶ್ವಿನ್, ಇದೀಗ ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್ಸನ್ ಹಿಂದಿಕ್ಕಿ ದಾಖಲೆ ಬರೆದಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts