More

    ಕೊಹ್ಲಿ ಜನ್ಮದಿನದಂದು ವಿಶ್ವಕಪ್ ಪಂದ್ಯ ಆಡಲಿದೆ ಭಾರತ

    ಬೆಂಗಳೂರು: ಮುಂಬರುವ 13ನೇ ಆವೃತ್ತಿಯ ಏಕದಿನ ವಿಶ್ವಕಪ್ ಟೂರ್ನಿಯ ಬಹುನಿರೀಕ್ಷಿತ ವೇಳಾಪಟ್ಟಿ ಬಿಡುಗಡೆಯಾಗಿದ್ದು. ಅಕ್ಟೋಬರ್ 5 ರಂದು ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳುಮುಖಾಮುಖಿಯಾಗುವ ಮೂಲಕ ಪ್ರತಿಷ್ಠಿತ ಜಾಗತಿಕ ಟೂರ್ನಿಗೆ ಚಾಲನೆ ದೊರೆಯಲಿದೆ.

    ಅಕ್ಟೋಬರ್ 8ರಂದು ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಎದುರಿಸುವ ಮೂಲಕ ಟೀಮ್ ಇಂಡಿಯಾ ಟೂರ್ನಿಯಲ್ಲಿ ತನ್ನ ಅಭಿಯಾನ ಆರಂಭಿಸಲಿದೆ. ಭಾರತ-ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯ ಅಕ್ಟೋಬರ್ 15ರಂದು ಅಹಮದಾಬಾದ್‌ನಲ್ಲಿ ನಡೆಯಲಿದ್ದು, ವಿಶ್ವದ ಅತಿ ದೊಡ್ಡ ಕ್ರೀಡಾಂಗಣ ಎನಿಸಿರುವ ನರೇಂದ್ರ ಮೋದಿ ಕ್ರೀಡಾಂಗಣ ಹೈ-ವೋಲ್ಟೆಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ.

    ನವೆಂಬರ್ 5ಕ್ಕೆ ಕೋಲ್ಕತದ ಈಡನ್ ಗಾರ್ಡನ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತನ್ನ 8ನೇ ಲೀಗ್ ಪಂದ್ಯವನ್ನಾಡಲಿದ್ದು, ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಪಾಲಿಗೆ ವಿಶೇಷ ದಿನವಾಗಲಿದೆ. ಅಂದು ವಿರಾಟ್ ಕೊಹ್ಲಿ 34 ವಸಂತ ಪೂರೈಸಿ, 35ನೇ ವರ್ಷಕ್ಕೆ ಕಾಲಿಡಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts