

ನವದೆಹಲಿ: ವಿರಾಟ್ ಕೊಹ್ಲಿ ಟಿ-20 ವಿಶ್ವಕಪ್ನ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅಜೇತ 82 ರನ್ ಗಳಿಸಿ, ಭಾರತ ತಂಡವನ್ನು ಜಯದ ಹೊಸ್ತಿಲು ದಾಟಿಸಿದ್ದರು. ಈ ಪಂದ್ಯದ ಅದ್ಭುತ ಪ್ರದರ್ಶನದಿಂದ ಇದೀಗ ಕೊಹ್ಲಿ ಟಿ-20 ಕ್ರಿಕೆಟ್ನ ಟಾಪ್ 10 ಬ್ಯಾಟಿಂಗ್ ಶ್ರೇಯಾಂಕ ಗಳಿಸಿಕೊಂಡಿದ್ದಾರೆ.
ಮೆಲ್ಬೋರ್ನ್ನಲ್ಲಿ ನಡೆದ ಪಂದ್ಯದಲ್ಲಿ ಕೊಹ್ಲಿ ಜವಾಬ್ದಾರಿಯುತ ಇನ್ನಿಂಗ್ಸ್ ಕಟ್ಟಿ, 53 ಎಸೆತಳಲ್ಲಿ 6 ಬೌಂಡರಿ ಮತ್ತು 4 ಸಿಕ್ಸ್ ಸಿಡಿಸಿ ಮಿಂಚಿದ್ದರು. ಇದೀಗ ಐಸಿಸಿ ಬಿಡುಗಡೆ ಮಾಡಿರುವ ನೂತನ ರ್ಯಾಂಕಿಂಗ್ ಪಟ್ಟಿಯಲ್ಲಿ ಕೊಹ್ಲಿ 9ನೇ ಸ್ಥಾನ ಪಡೆದುಕೊಂಡಿದ್ದಾರೆ.
ಪಾಕಿಸ್ತಾನ ತಂಡದ ಆರಂಭಿಕ ಆಟಗಾರ ಮೊಹಮ್ಮದ್ ರಿಝ್ವಾನ್ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಟಿ-20 ವಿಶ್ವಕಪ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಅಜೇಯ 92 ರನ್ ಗಳಿಸಿದ ನಂತರ ನ್ಯೂಜಿಲೆಂಡ್ನ ಆರಂಭಿಕ ಆಟಗಾರ ಡೆವೊನ್ ಕಾನ್ವೆ ಎರಡನೇ ಸ್ಥಾನದಲ್ಲಿದ್ದಾರೆ.
ಐಸಿಸಿಯ ನೂತನ ರ್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರ ಹತ್ತರೊಳಗೆ ಇಬ್ಬರು ಬ್ಯಾಟ್ಸ್ಮನ್ಗಳು ಸ್ಥಾನ ಪಡೆದಿದ್ದಾರೆ. ವಿರಾಟ್ ಕೊಹ್ಲಿ 635 ಪಾಯಿಂಟ್ನೊಂದಿಗೆ 9ನೇ ಸ್ಥಾನ ಪಡೆದುಕೊಂಡರೆ, ಸೂರ್ಯ ಕುಮಾರ್ ಯಾದವ್ 828 ಅಂಕಗಳೊಂದಿಗೆ 3ನೇ ಸ್ಥಾನಕ್ಕೆ ಸಂಪಾದಿಸಿದ್ದಾರೆ.