21 C
Bengaluru
Thursday, January 23, 2020

ಪತಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದ ಪತ್ನಿಯ ಸೆರೆ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಕೆಜಿಎಫ್: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯನ್ನೇ ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಗೈದ ಪತ್ನಿ ಮತ್ತು ಪ್ರಿಯಕರನನ್ನು ಉರಿಗಾಂ ವೃತ್ತ ಅಪರಾಧ ಠಾಣೆ ಪೊಲೀಸರು ಶುಕ್ರವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇತ್ತೀಚೆಗೆ ಬೆಮೆಲ್‌ನಗರ ಠಾಣಾ ವ್ಯಾಪ್ತಿಯ ದೊಡ್ಡವಲಗಮಾದಿ ಸಮೀಪದ ಐಮರಸಪುರ ಅರಣ್ಯ ಪ್ರದೇಶದಲ್ಲಿ ಕೊಲೆಯಾಗಿ ಸುಟ್ಟು ಕರಕಲಾಗಿದ್ದ ಅಪರಿಚಿತ ಶವದ ಗುರುತು ಪತ್ತೆಯಾಗಿದ್ದು, ಬಂಗಾರಪೇಟೆ ಸಮೀಪದ ಅನಂತಪುರ ಗ್ರಾಮದ ನಿವಾಸಿ ವೆಂಕಟೇಶ್ (30) ಎಂದು ಗುರುತಿಸಲಾಗಿದೆ. ಮೃತನ ಪತ್ನಿ ಗಾಯತ್ರಿ (21) ಮತ್ತು ದಾಸರಹೊಸಹಳ್ಳಿಯ ಗಾರೆಮೇಸ್ತ್ರಿ ಯಲ್ಲಪ್ಪ (32) ತಪ್ಪಿತಸ್ಥರಾಗಿದ್ದಾರೆ.

ಡಿವೈಎಸ್ಪಿ ಬಿ.ಎಲ್.ಶ್ರೀನಿವಾಸಮೂರ್ತಿ ಮಾರ್ಗದರ್ಶನದಲ್ಲಿ ಸಿಪಿಐ ಮುಸ್ತಾಕ್‌ಪಾಷಾ ನೇತೃತ್ವದಲ್ಲಿ ಪಿಎಸ್‌ಐ ರಾಜೇಶ್ವರಿ, ಎಎಸ್‌ಐ ಎನ್.ಆನಂದ್, ನಾರಾಯಣಸ್ವಾಮಿ, ಗಾಯತ್ರಿ, ಸಿಬ್ಬಂದಿ ಶಂಕರ್, ಜಬೀರ್, ಅನೀಸ್‌ಪಾಷಾ, ಮಹೇಂದ್ರ, ಶಿವಕುಮಾರ್, ನವೀನ್, ಸುನೀಲ್, ಸಂಪತ್ ಕಾರ‌್ಯಾಚರಣೆಯಲ್ಲಿ ಭಾಗವಹಿಸಿದ್ದರು ಎಂದು ತಿಳಿಸಿರುವ ಎಸ್ಪಿ ಎಂ.ಎಸ್.ಮೊಹಮ್ಮದ್ ಸುಜೀತಾ ಪತ್ತೆ ತಂಡದ ಕಾರ್ಯ ಶ್ಲಾಘಿಸಿ, ಬಹುಮಾನ ಘೋಷಿಸಿದ್ದಾರೆ.

ಘಟನೆ ವಿವರ: ಯಲ್ಲಪ್ಪ ಹಾಗೂ ಗಾಯತ್ರಿ ನಡುವೆ ಸಂಬಂಧವಿದ್ದುದನ್ನು ಗಮನಿಸಿದ ವೆಂಕಟೇಶ್ ಆಕ್ಷೇಪ ವ್ಯಕ್ತಪಡಿಸಿ ಕುಡಿದು ಬಂದು ಪತ್ನಿಗೆ ಹಿಂಸಿಸುತ್ತಿದ್ದ ಎನ್ನಲಾಗಿದೆ. ಇದರಿಂದ ರೋಸಿದ ಗಾಯತ್ರಿ ಕೊಲೆಗೆ ಸಂಚು ಹೂಡಿದ್ದಳು. ಅದರಂತೆ ಪ್ರಿಯಕರ ಯಲ್ಲಪ್ಪ ನ.24ರಂದು ಸಂಜೆ ಬೆಮೆಲ್‌ನಗರದ ಆಲದಮರ ಬಳಿ ವೆಂಕಟೇಶ್‌ನನ್ನು ಬರಮಾಡಿಕೊಂಡು ಕಂಠಪೂರ್ತಿ ಕುಡಿಸಿ, ಬೈಕಿನಲ್ಲಿ ಐಮರಸರಪುರ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ದೊಣ್ಣೆಯಿಂದ ಹೊಡೆದು ಸಾಯಿಸಿದ್ದ. ಬೈಕಿನಲ್ಲಿ ಪೆಟ್ರೋಲ್ ತೆಗೆದು ಶವದ ಮೇಲೆ ಹಾಕಿ ಶವ ಗುರುತು ಸಿಗದ ಹಾಗೆ ಸುಟ್ಟುಹಾಕಿರುವುದು ತನಿಖೆಯಿಂದ ದೃಢಪಟ್ಟಿದೆ.

ಗಾಯತ್ರಿ ತನ್ನ ಹಾಗೂ ಮೃತ ವೆಂಕಟೇಶ್‌ನ ಮೊಬೈಲ್ ಸಿಮ್ ನಾಶಪಡಿಸಿ, ಹೊಸ ಸಿಮ್ ಬಳಸುತ್ತಿದ್ದಳು. ಎಫ್‌ಎಸ್‌ಎಲ್ ತಜ್ಞರ ಸಹಕಾರದಿಂದ ಗಾಯತ್ರಿ ಬಳಸುತ್ತಿದ್ದ ಮೊಬೈಲ್‌ನ ಐಎಂಇಐ ಸಂಖ್ಯೆ ಪರೀಕ್ಷೆಗೆ ಒಳಪಡಿಸಿದಾಗ ಯಲ್ಲಪ್ಪನೊಂದಿಗೆ ನಿರಂತರ ಸಂಪರ್ಕದಲ್ಲಿರುವುದು ತಿಳಿದುಬಂತು. ಪೊಲೀಸರು ಯಲ್ಲಪ್ಪನನ್ನು ಶುಕ್ರವಾರ ಬೆಳಗ್ಗೆ ಬಂಧಿಸಿ ವಿಚಾರಿಸಿದಾಗ ಕೊಲೆ ಹಾಗೂ ಅಕ್ರಮ ಸಂಬಂಧ ಸತ್ಯಾಂಶಗಳು ಹೊರಬಿದ್ದಿವೆ.

 

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...