More

  ಕೋಲಾರ ಜಿಲ್ಲೆಯಾದ್ಯಂತ ಪೋಲಿಯೋ ಲಸಿಕೆ ಅಭಿಯಾನ

  ಕೋಲಾರ: ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಕಾರ್ಯಕ್ರಮದಡಿ ಭಾನುವಾರ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಲಾಯಿತು.
  ಬೂತ್‌ಗಳಲ್ಲಿ 0ರಿಂದ 5 ವರ್ಷದೊಳಗಿನ 1,56,155 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿಯೊಂದಿಗೆ ಬೆಳಗ್ಗೆಯಿಂದ ಸಂಜೆಯವರೆಗೆ ಕಾರ್ಯನಿರ್ವಹಿಸಲಾಯಿತು.

  ನಗರದ ಎಂ.ಜಿ.ರಸ್ತ್ತೆೆಯಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ಪಲ್ಸ್ ಪೊಲಿಯೋ ಅಭಿಯಾನ ಕಾರ್ಯಕ್ರಮಕ್ಕೆ ಜಿಪಂ ಅಧ್ಯಕ್ಷ ಸಿ.ಎಸ್. ವೆಂಕಟೇಶ್ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಿದರು.

  ನಂತರ ಮಾತನಾಡಿ, ಜಿಲ್ಲೆಯಲ್ಲಿ 748 ಬೂತ್‌ಗಳು, 43 ಟ್ರಾನ್ಸಿಟ್ ಕೇಂದ್ರಗಳಲ್ಲಿ, ಒಂದು ಮೊಬೈಲ್ ತಂಡದೊಂದಿಗೆ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಲಾಗುತ್ತಿದೆ. ಉಳಿದೆರಡು ದಿನಗಳಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರು ಜಿಲ್ಲೆಯ ವ್ಯಾಪ್ತಿಯಲ್ಲಿ 354251 ಮನೆ ಮನೆಗೆ ತೆರಳಿ ಪೋಲಿಯೋ ಲಸಿಕೆ ಹಾಕಲಿದ್ದಾರೆ. ಎಲ್ಲ ಮಕ್ಕಳಿಗೂ ಪಾಲಕರು ಪೋಲಿಯೋ ಹಾಕಿಸಬೇಕು ಎಂದು ಮನವಿ ಮಾಡಿದರು.

  ಆರ್‌ಸಿಎಚ್ ಅಧಿಕಾರಿ ಡಾ.ಚಂದನ್ ಕುಮಾರ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಮೇಶ್, ಸಿಬ್ಬಂದಿ ಸುಷ್ಮಾ, ಆನಂದ್, ರಾಮಣ್ಣ ಭಾಗವಹಿಸಿದ್ದರು.

  ಎಸ್ಸೆನ್ನಾರ್ ಜಿಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾ ಸರ್ಜನ್ ಡಾ. ಎಸ್.ಜಿ. ನಾರಾಯಣಸ್ವಾಮಿ ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ರೋಟರಿಯಿಂದ ಪಲ್ಸ್ ಪೋಲಿಯೋ ಅಭಿಯಾನ ಸಂಚಾಲಕ ಸೋಮಶೇಖರ್, ರೋಟರಿ ಪದಾಧಿಕಾರಿ ಬಾಲಾಜಿ ಇತರರಿದ್ದರು. ತಹಸೀಲ್ದಾರ್ ಶೋಭಿತಾ ನಗರದ ಗಾಂಧಿನಗರದ ಆರೋಗ್ಯ ಕೇಂದ್ರದಲ್ಲಿ ಮಕ್ಕಳಿಗೆ ಪೋಲಿಯೋ ಹನಿ ಹಾಕಿದರು. ಡಿಡಿಪಿಐ ಕೆ. ರತ್ನಯ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಚಾರಿಣಿ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts