More

    ಕೆ.ಸಿ. ವ್ಯಾಲಿ, ಎತ್ತಿನಹೊಳೆ ಕಾಮಗಾರಿ ಚುರುಕುಗೊಳಿಸಲು ಮುಖ್ಯಮಂತ್ರಿ ಸೂಚನೆ

    ಬೆಂಗಳೂರು: ಕೋಲಾರ ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗವು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಕೆ.ಸಿ.ವ್ಯಾಲಿ ಮತ್ತು ಎತ್ತಿನಹೊಳೆ ಯೋಜನೆಗಳ ಅನುಷ್ಠಾನದ ಕುರಿತು ಚರ್ಚೆ ನಡೆಸಿತು.

    ಕೆ.ಸಿ. ವ್ಯಾಲಿ ಯೋಜನೆಯಡಿ ಬೆಂಗಳೂರು ನಗರದಿಂದ 400 ಎಂಎಲ್​ಡಿ ಸಂಸ್ಕರಿಸಿದ ನೀರನ್ನು ಕೋಲಾರ ಜಿಲ್ಲೆಗೆ ಒದಗಿಸಬೇಕಾಗಿದೆ. ಆದರೆ ಪ್ರಸ್ತುತ ಕೇವಲ 284 ಎಂ ಎಲ್ ಡಿ ನೀರು ಮಾತ್ರ ಲಭ್ಯವಿದೆ. ಮಳೆ ನೀರು ಸಾಕಷ್ಟು ಪ್ರಮಾಣದಲ್ಲಿ ಒಳಚರಂಡಿ ಸೇರದೆ, ಸಂಸ್ಕರಣೆಗೆ ಲಭ್ಯವಾಗುತ್ತಿಲ್ಲ. ಆದ್ದರಿಂದ ಹೆಚ್ಚಿನ ನೀರು ಲಭ್ಯವಾಗಿಸಲು ಬೆಂಗಳೂರು ಜಲ ಮಂಡಳಿಯು ಕ್ರಮ ವಹಿಸುವಂತೆ ಮುಖ್ಯಮಂತ್ರಿ ಸೂಚಿಸಿದರು. ಅಲ್ಲದೆ ಎಸ್​ಟಿಪಿಗಳ ಸಾಮರ್ಥ್ಯ ವರ್ಧನೆಗೆ ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು. ಇದನ್ನೂ ಓದಿರಿ ವಿಧಾನ ಪರಿಷತ್‌ಗೆ ಇಂಚರ ಅವಿರೋಧ ಆಯ್ಕೆ

    ಇದೇ ಸಂದರ್ಭದಲ್ಲಿ ಎತ್ತಿನಹೊಳೆ ಯೋಜನೆಯಡಿ ಭೂಸ್ವಾಧೀನ ಪ್ರಕ್ರಿಯೆಯಲ್ಲಿನ ತೊಡಕು ನಿವಾರಿಸಿ, ಕಾಮಗಾರಿ ಚುರುಕುಗೊಳಿಸುವುದಾಗಿ ನಿಯೋಗದ ಸದಸ್ಯರಿಗೆ ಮುಖ್ಯಮಂತ್ರಿ ಭರವಸೆ ನೀಡಿದರು. ಸಭೆಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಸಣ್ಣ ನೀರಾವರಿ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ಅಬಕಾರಿ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಕೆ. ನಾಗೇಶ್, ಲೋಕಸಭಾ ಸದಸ್ಯ ಎಸ್. ಮುನಿಸ್ವಾಮಿ, ವಿಧಾನನಸಭೆ ಮಾಜಿ ಅಧ್ಯಕ್ಷ ಹಾಗೂ ಶಾಸಕ ಕೆ.ಆರ್. ರಮೇಶ್ ಕುಮಾರ್ ಹಾಗೂ ಕೋಲಾರ ಜಿಲ್ಲೆಯ ಶಾಸಕರು, ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

    ಮತ್ತೆ 20 ದಿನ ದೇಶಾದ್ಯಂತ ಕಂಪ್ಲೀಟ್​ ಲಾಕ್​ಡೌನ್​?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts