Tuesday, 20th November 2018  

Vijayavani

ರಾಜಧಾನಿಯಲ್ಲಿ ಹಸಿರು ಕ್ರಾಂತಿ-ಸಿಎಂ ಎಚ್​ಡಿಕೆ, ಡಿಸಿಎಂ ಪರಮೇಶ್ವರ್​ಗೆ ಡೆಡ್​​ಲೈನ್-ಕೂಡಲೇ ಸ್ಥಳಕ್ಕೆ ಬರುವಂತೆ ರೈತರ ಪಟ್ಟು        ಸೈಟ್ ಕೇಳ್ತಿಲ್ಲ, BMW ಕಾರೂ ಕೇಳ್ತಿಲ್ಲ-ನಾವು ಕೇಳ್ತಿರೋದು ಬೆಳೆದ ಬೆಲೆಗೆ ಬೆಲೆಯಷ್ಟೇ-ಸಚಿವ ಕಾಶಂಪೂರ್​​ಗೆ ಮನವಿ ಸಲ್ಲಿಕೆ        ರೈತರು, ಹೆಣ್ಮಕ್ಕಳ ವಿಚಾರದಲ್ಲಿ ಗೌರವ ಇದೆ-ನನ್ನ ಹೇಳಿಕೆಯಲ್ಲಿ ಯಾವುದೇ ದುರುದ್ದೇಶ ಇಲ್ಲ-ಸಿಎಂ ಹೇಳಿಕೆ ಬಿಡುಗಡೆ        ಸಿಎಂ ಕೂಡಲೇ ಕ್ಷಮೆ ಕೇಳಬೇಕು-ನಾಳಿನ ಕೋರ್​​​ ಕಮಿಟಿ ಸಭೆಯಲ್ಲಿ ಹೋರಾಟದ ನಿರ್ಧಾರ-ಸರ್ಕಾರದ ವಿರುದ್ಧ ಗುಡುಗಿದ ಬಿಜೆಪಿ        ₹3,300 ಕೋಟಿ, 132 ಕಿ.ಮೀ. ದೂರ-ಗುರಗಾಂವ್​​ನಲ್ಲಿ ಎಕ್ಸ್​​ಪ್ರೆಸ್​​ ಹೈವೇ ಲೋಕಾರ್ಪಣೆಗೊಳಿಸಿದ ಪ್ರಧಾನಿ        ರೈಲು ಬರುವ ವೇಳೆ ಹಳಿ ಮಧ್ಯೆ ಮಲಗಿದ ಭೂಪ-ಪ್ರಾಣದ ಹಂಗು ತೊರೆದು ಹುಚ್ಚು ಸಾಹಸ-ಹೈದ್ರಾಬಾದ್​ನಲ್ಲೊಂದು ಮಿರ‍್ಯಾಕಲ್       
Breaking News

ಡಿವೈಡರ್​ಗೆ ಡಿಕ್ಕಿಯಾಗಿ ಪಲ್ಟಿಯಾದ ಕಾರಿಗೆ KSRTC ಡಿಕ್ಕಿ: ಮೂವರ ಸಾವು

Friday, 04.08.2017, 8:36 AM       No Comments

ಕೋಲಾರ: ಚಾಲಕನ ನಿಯತ್ರಣ ತಪ್ಪಿ ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದ ಕಾರೊಂದು ಪಲ್ಟಿಯಾಗಿ ಎದುರುಗಡೆ ಬರುತ್ತಿದ್ದ ಬಸ್​ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಕೋಲಾರದ ಮಡೇರಹಳ್ಳಿ ಬಳಿ ನಡೆದಿದೆ.

ಕೋಲಾರದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಘಟನೆ ನಡೆದಿದೆ. ಈ ಭೀಕರ ರಸ್ತೆ ಅಪಘಾತದಲ್ಲಿ ಶ್ರೀಹರಿ, ಸುಭಾಷ್ ಮತ್ತು ರೋಹನ್ ಎಂಬುವವರು​ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಂದಹಾಗೆ ಅವಸರವೇ ಅಫಘಾತಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನಿಂದ ಕೋಲಾರಕ್ಕೆ ವೇಗವಾಗಿ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಪಲ್ಟಿಯಾದ ಕಾರು ಉರುಳಿಕೊಂಡು ಎದುರಿಗೆ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ಗೆ ಅಪ್ಪಳಿಸಿದೆ. ಈ ಸಂಬಂಧ ಕೋಲಾರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top