More

    ಕೋವಿಡ್ ಕೇರ್ ಸೆಂಟರ್ ಆರಂಭಿಸಿ

    ಕೊಲ್ಹಾರ: ಬಸವನಬಾಗೇವಾಡಿ ಮತಕ್ಷೇತ್ರ ವ್ಯಾಪ್ತಿಯ ಹೊಸ ತಾಲೂಕು ಕೇಂದ್ರಗಳಾದ ಕೊಲ್ಹಾರ ಮತ್ತು ನಿಡಗುಂದಿ ಸಮುದಾಯ ಆರೋಗ್ಯ ಕೇಂದ್ರದ ಆಸ್ಪತ್ರೆಗಳಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸುವಂತೆ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರಿಗೆ ಪತ್ರ ಬರೆದಿದ್ದಾರೆ.

    ಕರೊನಾ ಎರಡನೇ ಅಲೆ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮತಕ್ಷೇತ್ರದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಇದರಿಂದ ಸಾರ್ವಜನಿಕರು ಆತಂಕಕ್ಕೆ ಒಳಗಾಗುತ್ತಿದ್ದಾರೆ. ನಿಡಗುಂದಿ ಹಾಗೂ ಕೊಲ್ಹಾರ ತಾಲೂಕಿನಲ್ಲಿ ಕೋವಿಡ್ ಕೇರ್ ಸೆಂಟರ್ ಇಲ್ಲದೆ ಇರುವುದರಿಂದ ಸೋಂಕಿತರು ಚಿಕಿತ್ಸೆಗಾಗಿ ಬಸವನಬಾಗೇವಾಡಿ ಅಥವಾ ವಿಜಯಪುರಕ್ಕೆ ಹೋಗಬೇಕಾದ ಅನಿವಾರ್ಯತೆ ಉಂಟಾಗಿದೆ ಎಂದು ತಿಳಿಸಿದ್ದಾರೆ.

    ಮುಂಜಾಗ್ರತೆ ಕ್ರಮವಾಗಿ ನಿಡಗುಂದಿ ಹಾಗೂ ಕೊಲ್ಹಾರ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆದು ಅಲ್ಲಿ ಅಗತ್ಯವಾದ ಬೆಡ್, ಆಕ್ಸಿಜನ್, ಔಷಧೋಪಚಾರ ಹಾಗೂ ಅಗತ್ಯ ಸಿಬ್ಬಂದಿ ನಿಯೋಜಿಸುವಂತೆ ಅವರು ಒತ್ತಾಯಿಸಿದ್ದಾರೆ.

    ಬಸವನಬಾಗೇವಾಡಿ ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ ಇನ್ನಷ್ಟು ಕೋವಿಡ್ ಬೆಡ್‌ಗಳನ್ನು ಅಳವಡಿಸಿ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ.

    ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕೊಲ್ಹಾರ ತಾಲೂಕಿನಲ್ಲಿರುವ ಕೂಡಗಿ ಉಷ್ಣ ವಿದ್ಯುತ್ ಸ್ಥಾವರ ತನ್ನ ಸಾಮಾಜಿಕ ಹೊಣೆಗಾರಿಕೆ ಸಿಎಸ್‌ಆರ್ ಅಡಿಯಲ್ಲಿ ಜಿಲ್ಲಾಡಳಿತಕ್ಕೆ ಹಾಗೂ ಆರೋಗ್ಯ ಇಲಾಖೆಗೆ ಬೇಕಾದ ಎಲ್ಲ ರೀತಿಯ ಸಹಕಾರ ನೀಡಬೇಕು. ಕರೊನಾ ನಿಯಂತ್ರಣಕ್ಕೆ ನಾನು ಸಹ ಸಮುದಾಯದೊಂದಿಗೆ ಸೇರಿ ಸರ್ಕಾರಕ್ಕೆ ಬೇಕಾದ ಸಹಕಾರ ನೀಡಲು ಸಿದ್ಧನಿದ್ದೇನೆ ಎಂದು ಬೆಳ್ಳುಬ್ಬಿ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts