

Kolkata Rape Case: ಪಶ್ಚಿಮ ಬಂಗಾಳದ ಕೋಲ್ಕತ್ತಾ ಕಾಲೇಜೊಂದರೊಳಗೆ ಅತ್ಯಾಚಾರಕ್ಕೊಳಗಾದ ಕಾನೂನು ವಿದ್ಯಾರ್ಥಿನಿ ಪೊಲೀಸರಿಗೆ ತಿಳಿಸಿದ್ದು, ಆರೋಪಿಗಳು ಹಲ್ಲೆಯನ್ನು ಮೊಬೈಲ್ ಫೋನ್ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ ಮತ್ತು ಘಟನೆಯ ಬಗ್ಗೆ ಯಾರೊಂದಿಗಾದರೂ ಹೇಳಿದರೆ ವೀಡಿಯೊಗಳನ್ನು ಆನ್ಲೈನ್ನಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸ್ ಮೂಲವನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
"ಮೂವರು ಆರೋಪಿಗಳು ಹಲ್ಲೆಯ ಮೊಬೈಲ್ ದೃಶ್ಯಾವಳಿಗಳನ್ನು ಇಟ್ಟುಕೊಂಡಿದ್ದರು ಮತ್ತು ಘಟನೆಯ ಬಗ್ಗೆ ಯಾರೊಂದಿಗಾದರೂ ಹೇಳಿದರೆ ಅದನ್ನು ಇಂಟರ್ನೆಟ್ನಲ್ಲಿ ಬಿಡುಗಡೆ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಸಿದ್ದಾರೆ" ಎಂದು ಪೊಲೀಸ್ ಮೂಲಗಳು ಪಿಟಿಐಗೆ ತಿಳಿಸಿವೆ.
ಇನ್ನು ಮೂವರು ಆರೋಪಿಗಳ ಮೊಬೈಲ್ ಪೋನ್ಗಳನ್ನು ವಶಪಡಿಸಿಕೊಂಡಿದ್ದು, ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ವಿಶ್ಲೇಷಣೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬುಧವಾರ(ಜೂ.25) ಸಂಜೆ 7.30 ರಿಂದ ರಾತ್ರಿ 10.50ರ ನಡುವೆ ದಕ್ಷಿಣ ಕೋಲ್ಕತ್ತಾದ ಕಾನೂನು ಕಾಲೇಜಿನ ಕ್ಯಾಂಪಸ್ನಲ್ಲಿ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಲಾಗಿತ್ತು. (ಏಜೆನ್ಸೀಸ್)