ನಾಲ್ಕು ಮನೆಗಳಿಗೆ ಬೆಂಕಿ

ಕೊಳ್ಳೇಗಾಲ: ತಾಲೂಕಿನ ಪಾಳ್ಯ ಗ್ರಾಮದ ನಾಯಕರ ಬೀದಿಯ ಮನೆಯೊಂದರಲ್ಲಿ ಬುಧವಾರ ರಾತ್ರಿ ಅಡುಗೆ ಅನಿಲ ಸೋರಿಕೆಯಿಂದ ಆಕಸ್ಮಿಕ ಬೆಂಕಿ ಹೊತ್ತಿಕೊಂಡು 4 ನಾಡಂಚಿನ ಮನೆಗಳು ಸುಟ್ಟು ಕರಕಲಾಗಿವೆ.

ಮೂರ್ತಿ ವೆಂಕಟನಾಯಕ ಅವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇವರ ಮನೆಗೆ ಹೊಂದಿಕೊಂಡಿರುವ ರಂಗಮ್ಮ, ಜಗದೀಶ್ ಹಾಗೂ ನಾಗಮಣಿ ಎಂಬುವರ ಮನೆ ಬೆಂಕಿಗಾಹುತಿಯಾಗಿವೆ.

ಮನೆಯಲ್ಲಿದ್ದ ದವಸ, ಧಾನ್ಯ, ಬಟ್ಟೆ, ಬರೆ ಸೇರಿ ಗೃಹೋಪಯೋಗಿ ಸಾಮಗ್ರಿಗಳು ಸುಟ್ಟು ಕರಕಲಾಗಿದ್ದು, ಕುಟುಂಬಗಳು ಬೀದಿ ಪಾಲಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ವಾಹನ ಸಮೇತ ಆಗಮಿಸಿ ಸ್ಥಳೀಯ ನಿವಾಸಿಗಳ ಸಹಕಾರದೊಂದಿಗೆ ಬೆಂಕಿ ನಂದಿಸಿದ ಹಿನ್ನೆಲೆ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.

ಉಪ ವಿಭಾಗಾಧಿಕಾರಿ ನಿಖಿತಾ ಎಂ.ಚಿನ್ನಸ್ವಾಮಿ ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ದೊರಕಿಸುವ ಭರವಸೆ ನೀಡಿದ್ದಾರೆ. ಇದೇ ಗ್ರಾಮದ ನಿವಾಸಿ ಜಿ.ಪಂ.ಅಧ್ಯಕ್ಷೆ ಶಿವಮ್ಮ ಕೃಷ್ಣ ಹಾಗೂ ನಾಡ ಕಚೇರಿ ಉಪ ತಹಸೀಲ್ದಾರ್ ನಂಜಯ್ಯ ಸ್ಥಳ ಪರಿಶೀಲಿಸಿದ್ದು, ಸರ್ಕಾರದಿಂದ ದೊರೆಯುವ ಎಲ್ಲ ರೀತಿಯ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ನಿರಾಶ್ರಿತ ಕುಟುಂಬಕ್ಕೆ ತಾತ್ಕಾಲಿಕವಾಗಿ ಪಡಿತರ ದೊರಕಿಸಿದ್ದಾರೆ.