ಮತ್ತೊಬ್ಬ ಜನಪ್ರತಿನಿಧಿ ಆಸ್ಪತ್ರೆ ದಾಖಲು; ಕೊಳ್ಳೇಗಾಲ ಶಾಸಕ ಎನ್.ಮಹೇಶ್​ಗೆ ಎದೆನೋವು

N Mahesh
Published on

ಚಾಮರಾಜನಗರ: ಹೃದಯಾಘಾತದಿಂದ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಅವರ ಸಾವನ್ನು ಅರಗಿಸಿಕೊಳ್ಳುವ ಮುನ್ನವೇ ಜಿಲ್ಲೆಯ ಮತ್ತೊಬ್ಬ ಜನಪ್ರತಿನಿಧಿ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೊಳ್ಳೇಗಾಲ ಶಾಸಕ ಎನ್.ಮಹೇಶ್​ಗೆ ಶನಿವಾರ ರಾತ್ರಿ ಎದೆ ನೋವು ಕಾಣಿಸಿಕೊಂಡಿದೆ. ಭಾನುವಾರ ಬೆಳಗ್ಗೆ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆ್ಯಂಜಿಯೋಗ್ರಾಂ ಮಾಡಲಾಗಿದೆ. ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿರುವುದಾಗಿ ಶಾಸಕರ ಆಪ್ತರು ವಿಜಯವಾಣಿ ತಿಳಿಸಿದ್ದಾರೆ.

ಬೆಳಗ್ಗೆ ಎದೆನೋವು ಕಾಣಿಸಿಕೊಂಡ ಕೂಡಲೇ ಆಸ್ಪತ್ರೆಗೆ ಕರೆತಂದಿದ್ದೇವೆ. ಸದ್ಯ ವೈದ್ಯರು‌ ಆ್ಯಂಜಿಯೋಗ್ರಾಮ್ ಮಾಡಿದ್ದು, ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಎರಡು ದಿನ ವಿಶ್ರಾಂತಿಗೆ ಸೂಚಿಸಿದ್ದು, ಯಾವುದೇ ಭಯಪಡುವ ಅಗತ್ಯವಿಲ್ಲ ಎಂದು ಶಾಸಕ ಎನ್.ಮಹೇಶ್ ಪುತ್ರ ಅರ್ಜುನ್ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net