More

    ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮುಖ್ಯಮಂತ್ರಿ ಮಾಲಾರ್ಪಣೆ

    ಕೊಳ್ಳೇಗಾಲ: ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಪ್ರತಿಷ್ಠಾಪನೆಗೊಂಡ ಬಳಿಕ ಕೊಳ್ಳೇಗಾಲದಲ್ಲಿ ಇನ್ಮುಂದೆ ಅಭಿವೃದ್ಧಿ ಪರ್ವ ಪ್ರಾರಂಭವಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಹೇಳಿದರು.

    ಪಟ್ಟಣದ ಎಸ್.ವಿ.ಕೆ  ಕಾಲೇಜು ಸಮೀಪದ ಹೆದ್ದಾರಿಯ ರಸ್ತೆಯ ವೃತ್ತದಲ್ಲಿ ಇತ್ತೀಚೆಗೆ ಪ್ರತಿಷ್ಟಾಪನೆ ಮಾಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಕೊಳ್ಳೇಗಾಲದ ಜನರ ಉದ್ದೇಶಿಸಿ ಮಾತನಾಡಿದರು.ಗುತ್ತಿಗೆದಾರ ಓಲೆ ಮಹದೇವ ಸ್ವಂತ ಖರ್ಚಿನಲ್ಲಿ ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣ ಮಾಡಿರುವುದು ಇತಿಹಾಸ ಸೇರಿದೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣ ಮಾಡುವುದಕ್ಕೆ ಓಲೆ ಮಹದೇವು ಪುಣ್ಯ ಮಾಡಿದ್ದರು ಎಂದು ತಿಳಿಸಿದರು.

    ಇಂದು ಅಂಬೇಡ್ಕರ್ ನೀಡಿದ ಸಂವಿಧಾನ ಮಾರ್ಗ ದರ್ಶನದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಜನ ಸೇವೆ ಮಾಡುತ್ತಿದೆ. ಅವರಿಂದಾಗಿ ಮಾತ್ರ ಇಂದು ನಾವೆಲ್ಲ ಜನಪ್ರತಿನಿಧಿಗಳಾಗಿ ನಿಮ್ಮ ಸೇವೆ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಎಲ್ಲರೂ ಅಂಬೇಡ್ಕರ್ ಅವರ ಆಶಯ ಹಾಗೂ ಆದರ್ಶ ಗಳನ್ನು ಅಳವಡಿಸಿಕೊಂಡು ಜೀವನ ನಡೆಸೋಣ. ಬಿಜೆಪಿ ಸರ್ಕಾರ ಹಲವಾರು ಯೋಜನೆಗಳ ಮೂಲಕ ಅಂಬೇಡ್ಕರ್ ಅವರ ಚಿಂತನೆಗಳಲ್ಲಿ ದೇಶ ನಡೆಸುತ್ತಿದ ಎಂದರು.ಈ ವೇಳೆ ಮುಖ್ಯ ಮಂತ್ರಿ ಬಸವರಾಜು ಬೊಮ್ಮಾಯಿ ಅವರನ್ನು ಸನ್ಮಾನಿಸಿ ಅಂಬೇಡ್ಕರ್ ಅವರ ಭಾವಚಿತ್ರ ನೀಡಿ ಗೌರವಿಸಲಾಯಿತು.

    ಉಸ್ತುವಾರಿ ಸಚಿವ ವಿ.ಸೋಮಣ್ಣ, ಶಾಸಕ ಎನ್.ಮಹೇಶ್, ನಿರಂಜನ್ ಕುಮಾರ್, ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಡಾ.ದತ್ತೇಶ್ ಕುಮಾರ್, ಪ್ರತಿಮೆ ನಿರ್ಮಾತೃ ಓಲೆ ಮಹಾದೇವ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts