More

    ಕೊಳ್ಳೇಗಾಲದಲ್ಲಿ ಮುಷ್ಕರ ವಿಫಲ

    ಕೊಳ್ಳೇಗಾಲ: ಪಟ್ಟಣದಲ್ಲಿ ಸಾರ್ವತ್ರಿಕ ಮುಷ್ಕರಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.

    ಪಟ್ಟಣದಲ್ಲಿ ಮುಂಜಾನೆಯಿಂದಲೇ ಸಾರಿಗೆ ಸೇವೆ, ಹಾಲು, ಔಷಧ ಹಾಗೂ ಅಗತ್ಯ ವಸ್ತುಗಳು ಎಂದಿನಂತೆ ಲಭ್ಯವಿದ್ದವು. ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು ಮತ್ತು ಖಾಸಗಿ ವಿದ್ಯಾಸಂಸ್ಥೆಗಳು ಕಾರ್ಯ ನಿರ್ವಹಿದವು.

    ಕೆನರಾ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್ ಹೊರತುಪಡಿಸಿ ಉಳಿದೆಲ್ಲ ರಾಷ್ಟ್ರೀಯ ಬ್ಯಾಂಕ್‌ಗಳು, ಎಪಿಎಂಸಿ ಮಾರುಕಟ್ಟೆ ಹಾಗೂ ಬಾರ್ ಆ್ಯಂಡ್ ವೈನ್ಸ್ ಸ್ಟೋರ್ಸ್‌, ಪೆಟ್ರೋಲ್ ಬಂಕ್, ಹೋಟೆಲ್, ಚಿತ್ರಮಂದಿರ, ಆಟೋ ಸಂಚಾರ ಎಂದಿನಂತೆ ಇದ್ದವು. ಮುಂಜಾಗ್ರತಾ ಕ್ರಮವಾಗಿ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

    ಪಟ್ಟಣದ ಬಸ್ ನಿಲ್ದಾಣ, ದೇವಾಂಗಪೇಟೆ, ಚಿಲ್ಟ್ರನ್ ಪಾರ್ಕ್, ಚಿಕ್ಕ ಮಸೀದಿ ವೃತ್ತ, ಡಾ.ಅಂಬೇಡ್ಕರ್ ಮತ್ತು ಡಾ.ರಾಜ್‌ಕುಮಾರ್ ರಸ್ತೆಗಳಲ್ಲಿ ಜನಸಂದಣಿ ಎಂದಿನಂತೆ ಕಂಡು ಬಂದಿತು. ರಸ್ತೆ ಬದಿ ವ್ಯಾಪಾರಿಗಳು ಹಾಗೂ ತಳ್ಳುವ ಗಾಡಿಗಳ ವ್ಯಾಪಾರ ವಹಿವಾಟು ಸ್ವಲ್ಪ ತಗ್ಗಿತ್ತು.

    ಗ್ರಾಪಂ ನೌಕರರ ಪ್ರತಿಭಟನೆ: ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ಸಮಿತಿ(ಜೆಸಿಟಿಯು) ಹಾಗೂ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್(ಸಿಐಟಿಯು) ತಾಲೂಕು ಸಮಿತಿ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿ ನೌಕರರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಪಟ್ಟಣದ ಎಂಜಿಎಸ್‌ವಿ ಕಾಲೇಜಿನಿಂದ ತಾಲೂಕು ಕಚೇರಿಗೆ ತೆರಳಿ ತಹಸೀಲ್ದಾರ್ ಕೆ.ಕುನಾಲ್ ಅವರಿಗೆ ಲಿಖಿತ ಮನವಿ ಸಲ್ಲಿಸಿದರು.

    ದೇಶದ ಎಲ್ಲ ನೌಕರ ವರ್ಗಕ್ಕೂ ರಾಷ್ಟ್ರೀಯ ಸಮಾನ ಕನಿಷ್ಠ ವೇತನ ನಿಗದಿಗೊಳಿಸಬೇಕು ಎಂದು ಆಗ್ರಹಿಸಿದರು. ಗ್ರಾಪಂ ನೌಕರರ ಸಂಘದ ತಾಲೂಕು ಅಧ್ಯಕ್ಷ ಪ್ರಸನ್ನ, ಗೌರವಾಧ್ಯಕ್ಷ ಸಿದ್ದೆಗೌಡ, ಉಪಾಧ್ಯಕ್ಷ ಮಲ್ಲಯ್ಯ, ಕಾರ್ಯದರ್ಶಿ ನಟರಾಜು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts