ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ

blank

ಕೊಳ್ಳೇಗಾಲ : ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿಗಳನ್ನು ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.

ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಮುಖಂಡ ಪ್ರಭುಸ್ವಾಮಿ ನೇತೃತ್ವದಲ್ಲಿ ಸಮಾವೇಶಗೊಂಡ ಕಾರ್ಯಕರ್ತರು ಕಾಂಗ್ರೆಸ್ ಪರವಾಗಿ ಘೋಷಣೆಗಳನ್ನು ಕೂಗಿದರು. ಈ ವೇಳೆ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸೂಚಿಸಿದರು. ನಂತರ, ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರ ಗೆಲುವನ್ನು ಸಡಗರ ಸಂಭ್ರಮದಿಂದ ಆಚರಣೆ ಮಾಡಿದರು.

ಮುಖಂಡ ವರದರಾಜು ಮಾತನಾಡಿ, ಸಚಿವ ಎಚ್.ಸಿ.ಮಹದೇವಪ್ಪ ಹಾಗೂ ಸುನೀಲ್ ಬೋಸ್ ಅವರು ಮುಂದೆ ಚಾಮರಾಜನಗರ ಜಿಲ್ಲೆಯಲ್ಲಿ ಆಗಬೇಕಾದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದೇವೆ. ಆ ದೇವರು ಅವರಿಗೆ ಶಕ್ತಿ ನೀಡಿ ಜನಪರವಾದ ಅಭಿವೃದ್ಧಿ ಕಾರ್ಯಗಳು ನಡೆಯುವಂತೆ ಆಶೀರ್ವದಿಸಲಿ ಎಂದು ಹೇಳಿದರು. ಯುವ ಮುಖಂಡ ಡಾ.ಗುರುಮೂರ್ತಿ, ಗ್ರಾಮ ಪಂಚಾಯಿತಿ ಸದಸ್ಯ ಪುರುಷೋತ್ತಮ್, ಮುಖಂಡರಾದ ಹರೀಶ್ ಕಿಜರ್, ಮುರುಗೇಶ್, ಸುದೀಪ್, ಸುರೇಶ್, ಕಿಶೋರ್ ಮತ್ತಿತರರಿದ್ದರು.

Share This Article

ಉಡುಗೆಗೆ ಮ್ಯಾಚ್​ ಆಗುವ ಲಿಪ್​ಸ್ಟಿಕ್​​​ ಆಯ್ಕೆ ಮಾಡುವುದೇಗೆ?; ಇಲ್ಲಿದೆ ಸಿಂಪಲ್​ ಟಿಪ್ಸ್​​ | Beauty Tips

ನಾವು ಮದುವೆಗೆ ಚೆಂದದ ಬಟ್ಟೆಗಳನ್ನು ಆಯ್ಕೆ ಮಾಡುತ್ತೇವೆ. ಆದ್ದರಿಂದ ಯಾರೂ ನಮಗಿಂತ ಹೆಚ್ಚು ಸುಂದರವಾಗಿ ಕಾಣುವುದಿಲ್ಲ.…

ಚಳಿಗಾಲದಲ್ಲಿ ವಿಟಮಿನ್​​ ಡಿ ಕೊರತೆಯೇ?; ನಿಮ್ಮ ದೈನಂದಿನ ಆಹಾರ ಕ್ರಮದಲ್ಲಿ ಈ ಬದಲಾವಣೆ ಮಾಡಿ | Health Tips

ಚಳಿಗಾಲದಲ್ಲಿ ಸೂರ್ಯನ ಬೆಳಕಿನ ಕೊರತೆಯಿಂದ ವಿಟಮಿನ್ ಡಿ ಕೊರತೆ ಉಂಟಾಗುತ್ತದೆ. ಆದರೆ ಈ ಪೋಷಕಾಂಶವು ಅನೇಕ…

Mushrooms for Cancer: ಅಣಬೆ ತಿಂದರೆ ಯಾವುದೇ ಕ್ಯಾನ್ಸರ್ ಇದ್ರು ಕಂಟ್ರೋಲ್…!

Mushrooms for Cancer : ಕ್ಯಾನ್ಸರ್ ರೋಗ ಅಪಾಯಕಾರಿ. ಕ್ಯಾನ್ಸರ್ ಚಿಕಿತ್ಸೆಯು ತುಂಬಾ ದುಬಾರಿಯಾಗಿದೆ. ಕ್ಯಾನ್ಸರ್​​ನಲ್ಲಿ…