ಕೊಳ್ಳೇಗಾಲ:ವಿಶ್ವಚೇತನ ಸಮೂಹ ವಿದ್ಯಾ ಸಂಸ್ಥೆ ಹಾಗೂ ಎಚ್.ಕೆ ಟ್ರಸ್ಟ್, ರೋಟರಿ ಮಿಡ್‌ಟೌನ್ ಕೊಳ್ಳೇಗಾಲದ ಸಹಯೋಗದಲ್ಲಿ ಪಟ್ಟಣದ ರೋಟರಿ ಸಭಾಂಗಣದಲ್ಲಿ ಶನಿವಾರ ಬಕ್ರೀದ್ ಹಬ್ಬದ ಪ್ರಯುಕ್ತ ಮುಸ್ಲಿಂ ಸಮುದಾಯದ ಬಡವರಿಗೆ ಬಕ್ರೀದ್ ಕಿಟ್ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ದಿ.ಎಚ್.ಕೃಷ್ಣಸ್ವಾಮಿ ಅವರ ಹೆಸರಲ್ಲಿ ಸ್ಥಾಪಿಸಲ್ಪಟ್ಟ ಎಚ್.ಕೆ.ಟ್ರಸ್ಟ್ ಜನಾನುರಾಗಿ ಕೆಲಸ ಮಾಡುತ್ತಿದೆ. ಈ ಟ್ರಸ್ಟ್ ಹೆಸರಿನಲ್ಲಿ ಆರೋಗ್ಯ, ಶಿಕ್ಷಣ ಸೇವೆ ನೀಡಲಾಗುತ್ತಿದೆ. ಗ್ರಾಮೀಣ ಭಾಗದ ಸಾವಿರಾರು ಜನರು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಈ ಟ್ರಸ್ಟ್‌ನನ್ನು ಸೇವಾ ಮನೋಭಾವನೆಯಲ್ಲಿ ನಡೆಸಿಕೊಂಡು ಹೋಗುತ್ತಿರುವ ದಿ.ಎಚ್.ಕೃಷ್ಣಸ್ವಾಮಿ ಪತ್ನಿ ಪ್ರೇಮಲತಾ ಕೃಷ್ಣಸ್ವಾಮಿ ಹಾಗೂ ಅವರ ಪುತ್ರ ಮಹಾನಂದ್ ಕೃಷ್ಣಸ್ವಾಮಿ ಅವರ ಕಾರ್ಯ ಶ್ಲಾಘನೀಯ ಎಂದರು.
ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯ 250 ಬಡವರಿಗೆ ಬಕ್ರಿದ್ ಪ್ರಯುಕ್ತ ಆಹಾರ ಕಿಟ್ ವಿತರಣೆ ಮಾಡಲಾಯಿತು. ಎಚ್.ಕೆ.ಟ್ರಸ್ಟ್ ಕಾರ್ಯದರ್ಶಿ ಪ್ರೇಮಲತಾ ಕೃಷ್ಣಸ್ವಾಮಿ, ರೋಟರಿ ಮಿಡ್‌ಟೌನ್ ಅಧ್ಯಕ್ಷ ದಕ್ಷಿಣ ಮೂರ್ತಿ, ಬೆಂಗಳೂರಿನ ಡಿವೈಎಸ್ಪಿ ಮಹಾನಂದ್ ಕೃಷ್ಣಸ್ವಾಮಿ, ಎಂಡಿಸಿಸಿ ಬ್ಯಾಂಕ್‌ನ ವ್ಯವಸ್ಥಾಪಕ ಪ್ರವೀಣ್ ಕುಮಾರ್, ನಗರಸಭೆ ಮಾಜಿ ಉಪಾಧ್ಯಕ್ಷ ಹರ್ಷ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ತೋಟೇಶ್, ಮುಸ್ಲಿಮರು ಹಾಗೂ ಇತರರು ಇದ್ದರು.