ಕೊಳ್ಳೇಗಾಲ: ಪಟ್ಟಣದ ಶ್ರೀ ಮಹದೇಶ್ವರ ಕ್ರೀಡಾಂಗಣದಲ್ಲಿ ಆ.27ರಿಂದ 30 ರವರೆಗೆ ಜಿಲ್ಲಾ ಪಂಚಾಯಿತಿ, ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಸೂರಪುರ ಸರ್ಕಾರಿ ಪ್ರೌಢಶಾಲೆ ಸಹಯೋಗದಲ್ಲಿ ಪ್ರೌಢಶಾಲೆಗಳ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ತಾಲೂಕು ಮಟ್ಟದ ಕ್ರೀಡಾಕೂಟ ಅಯೋಜಿಸಲಾಗಿದೆ.
ಶಾಸಕ ಎ.ಆರ್. ಕೃಷ್ಣಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಹನೂರು ಶಾಸಕ ಎಂ.ಆರ್.ಮಂಜುನಾಥ್ ಚಾಲನೆ ನೀಡಲಿದ್ದಾರೆ. ಸಂಸದ ಸುನೀಲ್ ಬೋಸ್, ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಅಧ್ಯಕ್ಷ ಎಸ್.ಜಯಣ್ಣ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಮಧು ಜಿ.ಮಾದೇಗೌಡ, ಕೆ. ವಿವೇಕಾನಂದ, ನಗರಸಭೆ ಸದಸ್ಯೆ ಸುಮಾ ಸುಬ್ಬಣ್ಣ, ಉಪವಿಭಾಗಾಧಿಕಾರಿ ಬಿ.ಆರ್.ಮಹೇಶ್, ಡಿವೈಎಸ್ಪಿ ಎಂ.ಧರ್ಮೇಂದ್ರ, ತಹಸೀಲ್ದಾರ್ ಎಂ.ಮಂಜುಳಾ, ತಾಲೂಕು ಪಂಚಾಯಿತಿ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ ಎಂ.ಶಿವಪ್ರಕಾಶ್, ನಗರಸಭೆ ಪೌರಾಯುಕ್ತ ಎ.ರಮೇಶ್, ಚಾಮರಾಜನಗರ ಶಾಲಾ ಶಿಕ್ಷಣ ಇಲಾಖೆ (ಆಡಳಿತ) ಉಪ ನಿರ್ದೇಶಕ ರಾಮಚಂದ್ರ ರಾಜೇ ಅರಸ್, ಚಾಮರಾಜನಗರ ಡಯಟ್ (ಅಭಿವೃದ್ಧಿ) ಉಪ ನಿರ್ದೇಶಕ ಎಂ.ಕಾಶಿನಾಥ್, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಆರ್.ಶಂಕರ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಸ್.ರಂಗಸ್ವಾಮಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.