ಕೊಳ್ಳೇಗಾಲ: ಪಟ್ಟಣದ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟುಕೊಂಡು ಇಸ್ಪೀಟ್ ಆಟವಾಡುತ್ತಿದ್ದ 11 ಜನರನ್ನು ಬಂಧಿಸಿ 1,06,000 ರೂ. ನಗದನ್ನು ವಶಕ್ಕೆ ಪಡೆಯಲಾಗಿದೆ.
ಕೊಳ್ಳೇಗಾಲ ಪಟ್ಟಣದ ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕಿ ಬಿ.ವಿ ವರ್ಷಗೆ ದೊರೆತ ಮಾಹಿತಿ ಮೇರೆಗೆ ಸೆ.10 ರಂದು ಬೆಳಗ್ಗೆ 10 ಗಂಟೆ ಸಮಯದಲ್ಲಿ ಕೊಳ್ಳೇಗಾಲ ಪಟ್ಟಣದ ಮೇದರ ಬೀದಿಯ ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾದ ಹಂದರ್ ಬಾಹರ್ ಎಂಬ ನಸೀಬಿನ ಇಸ್ಪೀಟ್ ಜೂಜಾಟ ಆಡುತ್ತಿದ್ದವರ ಮೇಲೆ ಕೊಳ್ಳೇಗಾಲ ಉಪವಿಭಾಗದ ಡಿವೈಎಸ್‌ಪಿ ರವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳೊಡನೆ ದಾಳಿ ಮಾಡಿ ಸ್ಥಳದಲ್ಲಿದ್ದ 11 ಜನ ಆರೋಪಿಗಳನ್ನು ವಶಕ್ಕೆ ಪಡೆದು ಸ್ಥಳದಲ್ಲಿದ್ದ 1 ಲಕ್ಷದ 6 ಸಾವಿರ ರೂ. ನಗದನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
TAGGED:Kollegala news