ಘನತ್ಯಾಜ್ಯ ನಿರ್ವಹಣಾ ಘಟಕ ಉದ್ಘಾಟನೆ

ಕೊಳ್ಳೇಗಾಲ: ತಾಲೂಕಿನ ಹರಳೆ ಗ್ರಾಮದಲ್ಲಿ ಪಂಚಾಯಿತಿ ವತಿಯಿಂದ ನಿರ್ಮಿಸಲಾಗಿದ್ದ ಘನತ್ಯಾಜ್ಯ ನಿರ್ವಹಣಾ ಘಟಕವನ್ನು ಶಾಸಕ ಎ.ಆರ್.ಕೃಷ್ಣಮೂರ್ತಿ ಶನಿವಾರ ಉದ್ಘಾಟಿಸಿದರು.

ಗ್ರಾಮದ ಹೊರವಲಯದಲ್ಲಿ ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ಘನತ್ಯಾಜ್ಯ ನಿರ್ವಹಣಾ ಘಟಕ ನಿರ್ಮಿಸಲಾಗಿದೆ. ಇದರ ಸದುಪಯೋಗ ಸಮರ್ಪಕವಾಗಿ ಆಗಬೇಕು ಎಂದರು. ಜನರು ತಮ್ಮ ಮನೆಯಂಗಳ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಂಗ್ರಹವಾದ ಘನ ತ್ಯಾಜ್ಯವನ್ನು ಸ್ಥಳೀಯವಾಗಿಯೇ ವಿಲೇವಾರಿ ಮಾಡುವ ಸಲುವಾಗಿ ಗ್ರಾ.ಪಂ. ಮಟ್ಟದಲ್ಲೇ ಘನ ತ್ಯಾಜ್ಯ ವಿಲೇವಾರಿ ಹಾಗೂ ನಿರ್ವಹಣಾ ಘಟಕಗಳನ್ನು ನಿರ್ಮಾಣ ಮಾಡಲಾಗಿದೆ. ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ಈಗಾಗಲೇ ತ್ಯಾಜ್ಯ ವಿಲೇವಾರಿ ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. ಅದೇ ಮಾದರಿಯಲ್ಲಿ ಹರಳೆ ಗ್ರಾಮದಲ್ಲೂ ನಿರ್ವಹಿಸಬೇಕು. ಜನರು ಇದನ್ನು ಸದುಪಯೋಗಪಡಿಸಿಕೊಳ್ಳಿ ಎಂದರು.

ಹರಳೆ ಗ್ರಾ.ಪಂ. ಅಧ್ಯಕ್ಷ ರಂಗಸ್ವಾಮಿ, ಉಪಾಧ್ಯಕ್ಷೆ ಮೀನಾ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಎಚ್.ವಿ.ಚಂದ್ರು, ತಾ.ಪಂ ಇಒ ಗುರುಶಾಂತಪ್ಪ ಬೆಳ್ಳುಂಡಗಿ, ಪಿಡಿಒ ರಾಜಮಣಿ, ಜಿ.ಪಂ ಜಿಲ್ಲಾ ಸಮಲೋಚಕ ಜೋಸೆಫ್ ಹಾಗೂ ಸದಸ್ಯರು, ಗ್ರಾಮಸ್ಥರು ಇದ್ದರು.

Share This Article

ಒಂದು ಬಾರಿ ಇದನ್ನು ಕುಡಿದರೆ ಸಾಕು ನಿಮ್ಮ ಹೊಟ್ಟೆ ಫುಲ್​ ಕ್ಲೀನ್ ಆಗಿಬಿಡುತ್ತೆ! Stomach problems

ತಿಂದ ಆಹಾರ ಸರಿಯಾಗಿ ಜೀರ್ಣವಾಗದಿದ್ದರೆ ಆ ನೋವು ( Stomach problems ) ಅಥವಾ ಕಿರಿಕಿರಿ…

Health Tips : ಸಕ್ಕರೆ ಕಾಯಿಲೆಯಿಂದ ಬಳಲುತ್ತೀದ್ದೀರಾ? ಬೆಳ್ಳಂಬೆಳಗ್ಗೆ ಕರಿಬೇವಿನ ಎಲೆಯ ನೀರನ್ನು ಕುಡಿಯಿರಿ ಸಾಕು

ಬೆಂಗಳೂರು: ಕರಿಬೇವು ಕೇವಲ ಬೆಳಗಿನ ತಿಂಡಿಗೆ ರುಚಿ ಕೊಡಲು ಒಗ್ಗರಣೆಗೆ ಮಾತ್ರ ಮೀಸಲಾಗಿಲ್ಲ. ಕರಿಬೇವಿನ ಎಲೆಗಳು…

ಮನೆಯಲ್ಲೇ ತಯಾರಿಸಿಕೊಳ್ಳಿ ಕೂದಲು ಸಂರಕ್ಷಣೆಯ ಶುದ್ಧ ತೈಲ

ಸದೃಢವಾದ, ಹೊಳೆಯುವ, ನೀಳ ಕೂದಲು ಬೇಕೆಂಬ ಆಸೆ ತುಂಬಾ ಜನರಿಗೆ ಇದ್ದೇ ಇರುತ್ತದೆ. ಜೊತೆಗೆ ಕೂದಲು…