More

    ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ

    ಕೊಳ್ಳೇಗಾಲ: ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಪರಿಶಿಷ್ಟ ವರ್ಗಗಳ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಹಾಗೂ ಸರ್ಕಾರಿ ಬುಡಕಟ್ಟು ವಾಲ್ಮೀಕಿ ಆಶ್ರಮ ಶಾಲೆಗಳಿಗೆ 2024-25ನೇ ಸಾಲಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

    ತಾಲೂಕು ಪರಿಶಿಷ್ಟವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ವರ್ಗದ ಸರ್ಕಾರಿ ಬುಡಕಟ್ಟು ವಾಲ್ಮೀಕಿ ಆಶ್ರಮ ಶಾಲೆಗಳಾದ ಮಲೆ ಮಹದೇಶ್ವರಬೆಟ್ಟ, ಪೊನ್ನಾಚಿ, ರಾಚಪ್ಪಾಜಿನಗರ, ಬೈಲೂರು, ಕಂಚಗಳ್ಳಿ, ಕೋಣನಕೆರೆ, ಗಾಣಿಗಮಂಗಲ, ಜೀರಿಗೆ ಗದ್ದೆ, ಹಿರಿಯಂಬಲ, ನಕ್ಕುಂದಿ ಶಾಲೆಗಳಿಗೆ 1 ರಿಂದ 6ನೇ ತರಗತಿ ಪ್ರವೇಶಕ್ಕಾಗಿ ಸಂಬಂಧಪಟ್ಟ ಆಶ್ರಮ ಶಾಲೆಗಳ ಮುಖ್ಯಶಿಕ್ಷಕರಿಂದ ಅರ್ಜಿ ಪಡೆದು ಸಲ್ಲಿಸಬಹುದು.

    ಕೊಳ್ಳೇಗಾಲ ಪಟ್ಟಣ, ಬಂಡಳ್ಳಿ, ಒಡೆಯರಪಾಳ್ಯಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ ಮತ್ತು ಮಲೆ ಮಹದೇಶ್ವರಬೆಟ್ಟದ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ 5 ರಿಂದ 10ನೇ ತರಗತಿಗೆ ಹಾಗೂ ಕೊಳ್ಳೇಗಾಲ ಪಟ್ಟಣದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ ಪರಿಶಿಷ್ಟವರ್ಗಗಳ ವಿದ್ಯಾರ್ಥಿಗಳನ್ನು ಆದ್ಯತೆ ಮೇರೆಗೆ ಹಾಗೂ ಅರ್ಹ ಪರಿಶಿಷ್ಟಜಾತಿ, ಹಿಂದುಳಿದವರ್ಗಗಳ, ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಸಹ ಪ್ರವೇಶ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೇಲ್ವಿಚಾರಕರು ಹಾಗೂ ಕೊಳ್ಳೇಗಾಲದ ಶ್ರೀಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಿಂಭಾಗದಲ್ಲಿರುವ ತಾಲ್ಲೂಕು ಪರಿಶಿಷ್ಟವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts