

ಬೈಂದೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಪ್ರಜ್ವಲ್ ಕೊಠಾರಿ, ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಪ್ರಥಮ ಕಲಾ ವಿಭಾಗದ ಸುದೀಪ ಎಚ್. ಹಾಗೂ ಪ್ರಥಮ ವಾಣಿಜ್ಯ ವಿಭಾಗದ ಪಂಚಮಿ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.