More

    ಕೊಲ್ಲೂರು ದೇವಳ ಮನ್ಮಹಾರಥೋತ್ಸವ

    ಕೊಲ್ಲೂರು: ದಕ್ಷಿಣ ಭಾರತದ ಪ್ರಸಿದ್ಧ ತೀರ್ಥಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ವಾರ್ಷಿಕ ಮನ್ಮಹಾರಥೋತ್ಸವ ಶನಿವಾರ ಸಡಗರ ಸಂಭ್ರಮದಿಂದ ಜರುಗಿತು.
    ದೇವಳದ ಪ್ರಧಾನ ಅರ್ಚಕ ಹಾಗೂ ತಂತ್ರಿ ಡಾ.ಕೆ.ರಾಮಚಂದ್ರ ಅಡಿಗ ನೇತೃತ್ವದಲ್ಲಿ ಮುಹೂರ್ತ, ಮಂಗಳಾರತಿ, ಪಂಚಾಮೃತ ಅಭಿಷೇಕ, ಕ್ಷಿಪ್ರಬಲಿ, ವಿಶೇಷ ಭೂತಬಲಿ ನಂತರ ರಥಾರೋಹಣ ಸಹಿತ ಹಲವು ಧಾರ್ಮಿಕ ವಿಧಿವಿಧಾನ ನಡೆಯಿತು. ಭಕ್ತರು ಮಧ್ಯಾಹ್ನ ಭೋಜನಶಾಲೆಯಲ್ಲಿ ಅನ್ನಪ್ರಸಾದ ಸ್ವೀಕರಿಸಿದರು.
    ಸಾಯಂಕಾಲ ಕೇವಲ 30 ಮೀ. ತನಕ ರಥ ಎಳೆಯಲಾಯಿತು. ಕೋವಿಡ್ ಕಾರಣದಿಂದ ರಥೋತ್ಸವಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿತ್ತು. ಆದರೂ ಎರಡು ಸಾವಿರಕ್ಕೂ ಹೆಚ್ಚು ಜನ ಜಾತ್ರೆಯಲ್ಲಿ ಭಾಗಿಯಾದರು. ಭಾನುವಾರ ರಾತ್ರಿ ದೇವರ ಅವಭೃತಸ್ನಾನ ನಡೆಯಲಿದೆ.

    ಜಾತ್ರಾ ಮಹೋತ್ಸವಕ್ಕೆ ಮಾ.27ರಂದು ಚಾಲನೆ ನೀಡಲಾಗಿತ್ತು. ಊರಿನ ಹತ್ತು ಸಮಸ್ತರು, ಭಕ್ತರು ಸೇರಿ ದೇವಸ್ಥಾನ, ಅಂಗಡಿ ಮುಂಗಟ್ಟು, ಮನೆ, ಬೀದಿಗಳನ್ನು ವಿದ್ಯುದ್ದೀಪಗಳಿಂದ ಅಲಂಕರಿಸಿದ್ದರು. ಆರು ದಿನ ಸ್ಥಳೀಯ ಕಲಾವಿದರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
    ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಜಿಲ್ಲಾಧಿಕಾರಿ ಜಿ.ಜಗದೀಶ್ ಮಾರ್ಗದರ್ಶನದಲ್ಲಿ ದೇವಳದ ಆಡಳಿತಾಧಿಕಾರಿ, ಎಸಿ ಕೆ.ರಾಜು ಮತ್ತು ಕಾರ್ಯನಿರ್ವಹಣಾಧಿಕಾರಿ ಬಿ.ಎಸ್.ಬಿ. ಮಹೇಶ್ ಉತ್ಸವದ ಉಸ್ತುವಾರಿ ವಹಿಸಿದ್ದರು. ಎಇಒ ಗೋವಿಂದ ನಾಯ್ಕ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಜಯಾನಂದ ಹೋಬಳೀದಾರ್, ಡಾ.ಅತುಲ್‌ಕುಮಾರ್ ಶೆಟ್ಟಿ, ಗೋಪಾಲಕೃಷ್ಣ ನಾಡ, ಸಂಧ್ಯಾ ರಮೇಶ್, ರತ್ನಾ ರಮೇಶ್, ಅರ್ಚಕ ವೃಂದ, ಸಿಬ್ಬಂದಿ ಜಾತ್ರೆಯ ಯಶಸ್ಸಿಗೆ ಸಹಕರಿಸಿದರು.

    ಕುಂದಾಪುರ ಡಿವೈಎಸ್‌ಪಿ ಶ್ರೀಕಾಂತ್ ನೇತೃತ್ವದಲ್ಲಿ ಬೈಂದೂರು ವೃತ್ತ ನಿರೀಕ್ಷಕ ಸಂತೋಷ್ ಆನಂದ್ ಕಾಯ್ಕಿಣಿ, ಕೊಲ್ಲೂರು ಠಾಣಾಧಿಕಾರಿ ನಾಸಿರ್ ಹುಸೈನ್, ಬೈಂದೂರು ಠಾಣಾಧಿಕಾರಿ ಸಂಗೀತಾ ಮತ್ತು ಸಿಬ್ಬಂದಿ ವರ್ಗ ಬಂದೋಬಸ್ತ್ ವಹಿಸಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts