blank

ಕೋಮಲ್​ ಅಭಿನಯದ ‘ಯಲಾ ಕುನ್ನಿ’ ಮೂಲಕ ವಜ್ರಮುನಿ ಮೊಮ್ಮಗನ ಎಂಟ್ರಿ …

blank

ಬೆಂಗಳೂರು: ಕಳೆದ ವಾರವಷ್ಟೇ ‘ಯಲಾ ಕುನ್ನಿ – ಮೇರಾ ನಾಮ್ ವಜ್ರಮುನಿ’ ಎಂಬ ಚಿತ್ರದ ಘೋಷಣೆಯಾಗಿತ್ತು. ಈ ಚಿತ್ರದಲ್ಲಿ ಕೋಮಲ್​ ನಾಯಕನಾಗಿ ನಟಿಸುತ್ತಾರೆ ಎಂದು ಹೇಳಲಾಗಿತ್ತು. ಈಗ ಈ ಚಿತ್ರ ಸೋಮವಾರ ಸೆಟ್ಟೇರಿದೆ. ವಿಶೇಷವೆಂದರೆ, ಕನ್ನಡದ ಖ್ಯಾತ ಖಳನಟ ವಜ್ರಮುನಿ ಅವರ ಮೊಮ್ಮಗ ಆಕರ್ಶ್​ ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾನೆ.

ಇದನ್ನೂ ಓದಿ: ಮಹೇಶ್​ ಬಾಬು ಅಭಿನಯದ ಹೊಸ ಚಿತ್ರದ ಬಿಡುಗಡೆ ದಿನಾಂಕ ಫಿಕ್ಸ್​ …

ಕೋಮಲ್​ ಅಭಿನಯದ 'ಯಲಾ ಕುನ್ನಿ' ಮೂಲಕ ವಜ್ರಮುನಿ ಮೊಮ್ಮಗನ ಎಂಟ್ರಿ …ಸೋಮವಾರ, ‘ಯಲಾ ಕುನ್ನಿ’ ಚಿತ್ರದ ಮುಹೂರ್ತ ವಿಜಯನಗರದ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ವಜ್ರಮುನಿರವರ ಪತ್ನಿ ಲಕ್ಷ್ಮೀ ವಜ್ರಮುನಿ ಕ್ಯಾಮರಾ ಚಾಲನೆ ಮಾಡಿದರೆ, ಮೊದಲ ಸನ್ನಿವೇಶಕ್ಕೆ ವಜ್ರಮುನಿ ಅವರ ಹಿರಿಯ ಪುತ್ರ ವಿಶ್ವನಾಥ್ ಆರಂಭಫಲಕ ತೋರಿದರು, ವಜ್ರಮುನಿ ಯವರ ಕಿರಿಯ ಪುತ್ರ ಜಗದೀಶ್ ವಜ್ರಮುನಿ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಇದೇ ಮೊದಲ ಬಾರಿಗೆ ಈ ಚಿತ್ರದಲ್ಲಿ ಕೋಮಲ್​ ದ್ವಿಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಈ ಕುರಿತು ಮಾತನಾಡುವ ಅವರು, ‘ನಿರ್ದೇಶಕ ಪ್ರದೀಪ್ ಬಹಳ ಚೆನ್ನಾಗಿ ಕಥೆ, ಚಿತ್ರಕಥೆ , ಸಂಭಾಷಣೆ ಬರೆದಿದ್ದಾರೆ. ಚಿತ್ರದ ಮುಕ್ಕಾಲು ಭಾಗ 1981ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಶ್ರೀರಂಗಪಟ್ಟಣ, ಮೈಸೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. ಗಂಜಾಂ ಬಳಿ ಪುರಾತನ ದೇವಾಲಯವಿದ್ದು, ಆ ದೇವಾಲಯದಲ್ಲೇ ಹೆಚ್ಚಿನ ಚಿತ್ರೀಕರಣವಾಗಲಿದೆ. ಚಿತ್ರಕ್ಕಾಗಿ ವಿಶೇಷ ಸೆಟ್ ಸಹ ಹಾಕಲಾಗುವುದು’ ಎಂದು ಮಾಹಿತಿ ನೀಡಿದರು.

ಪ್ರದೀಪ್​ ಇದಕ್ಕೂ ಮುನ್ನ ಕನ್ನಡದ ಹಿರಿಯ ನಿರ್ದೇಶಕರ ಬಳಿ ಕೆಲಸ ಮಾಡಿದ್ದರಂತೆ. ‘ಇದು ನನ್ನ ನಿರ್ದೇಶನದ ಮೊದಲ ಚಿತ್ರ. ಈ ಹಿಂದೆ ‘ಸಡಗರ’ ಚಿತ್ರ ನಿರ್ಮಿಸಿದ್ದ ಮಹೇಶ್ ಗೌಡ್ರು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಕೋಮಲ್ ಕುಮಾರ್ ವಜ್ರಮುನಿಯಾದರೆ, ಅವರ ಬಲಗೈ ಬಂಟನಾಗಿ ಜಯಸಿಂಹ ಮುಸುರಿ ‘ಕನೆಕ್ಷನ್ ಕಾಳಪ್ಪ’ ನಾಗಿ ಕಾಣಿಸಿಕೊಳ್ಳಲಿದ್ದಾರೆ. ಗೋವಿನ ಹಾಡಿನಲ್ಲಿ ಬರುವ ವ್ಯಾಘ್ರ ಹುಲಿ ಅರ್ಭುತ ಮತ್ತು ಸತ್ಯವೇ ಭಗವಂತನೆಂದ ಪುಣ್ಯಕೋಟಿಯ ಕಥೆಯಿಂದ ಪ್ರೇರಿತವಾಗಿದೆ. ಏಪ್ರಿಲ್ ನಲ್ಲಿ ಚಿತ್ರೀಕರಣ ಆರಂಭವಾಗಲಿದೆ’ ಎಂದು ಪ್ರದೀಪ್​ ಹೇಳಿದರು.

ಇದನ್ನೂ ಓದಿ: ರೇಸ್​ ಕೋರ್ಸ್​ ರಸ್ತೆ ಇನ್ನು ಮುಂದೆ ಅಂಬರೀಶ್​ ರಸ್ತೆ; ನಾಮಫಲಕ ಅನಾವರಣಗೊಳಿಸಿದ ಸಿಎಂ

‘ಯಲಾ ಕುನ್ನಿ’ ಚಿತ್ರದಲ್ಲಿ ಕೋಮಲ್​ಗೆ ನಾಯಕಿಯಾಗಿ ಹೊಸ ಪ್ರತಿಭೆ ನಿಸರ್ಗ ಅಭಿನಯಿಸುತ್ತಿದ್ದಾರೆ.‌ ಯತಿರಾಜ್ ಜಗ್ಗೇಶ್, ‘ಫ್ರೆಂಚ್ ಬಿರಿಯಾನಿ’ ಮಹಾಂತೇಶ್ , ಜಯಸಿಂಹ ಮುಸುರಿ, ಅರವಿಂದ್ ರಾವ್, ಮಂಜು ಪಾವಗಡ, ರಾಜು ತಾಳಿಕೋಟೆ, ಶಿವರಾಜ್, ಬಿರಾದರ್, ವೆಂಕಟೇಶ್ ಪ್ರಸಾದ್ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಧರ್ಮವಿಶ್ ಸಂಗೀತ ‌ನಿರ್ದೇಶನ ಹಾಗೂ ಉದಯ್ ಲೀಲಾ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

VIDEO| 10 ಕೋಟಿ ರೂ. ಮೌಲ್ಯದ ಕಾರು ಖರೀದಿಸಿದ ನಟ ಶಾರುಖ್ ಖಾನ್!

Share This Article

ಈ ಮಸಾಲೆಗಳು ವಿಟಮಿನ್ ಬಿ 12 ವೇಗವಾಗಿ ಹೆಚ್ಚಾಗಲು ಸಹಕರಿಸುತ್ತವೆ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಜೀವಸತ್ವಗಳು ದೇಹದ ಕಾರ್ಯನಿರ್ವಹಣೆಗೆ ಮಾತ್ರ ಅಗತ್ಯವಲ್ಲ, ಅವು ಶಕ್ತಿಯನ್ನು ಸಹ ಒದಗಿಸುತ್ತವೆ. ಅವುಗಳ ಕೊರತೆಯು ನರಗಳು,…

ಪಿರಿಯಡ್ಸ್​ ನೋವನ್ನು ಕಡಿಮೆ ಮಾಡುವುದು ಹೇಗೆ?; ಮಹಿಳೆಯರು ತಿಳಿದುಕೊಳ್ಳಲೆಬೇಕಾದ ಮಾಹಿತಿ | Health Tips

ಋತುಬಂಧವನ್ನು ಈ ರೀತಿ ಅರ್ಥಮಾಡಿಕೊಳ್ಳಬಹುದು. ಋತುಬಂಧ ಎಂಬ ಪದವು ಎರಡು ಗ್ರೀಕ್ ಪದಗಳಿಂದ ಬಂದಿದೆ. ಮೆನೊ…

ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic

garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.  ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…