

ಕಡಬ: ಕೊಂಬಾರು ಬೋಳ್ನಡ್ಕ ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ ನಾಯಕ ಧನುಷ್ ಉದ್ಘಾಟಿಸಿದರು. ಮಕ್ಕಳ ಗ್ರಾಮಸಭೆಯಲ್ಲಿ ಆರೋಗ್ಯ ಇಲಾಖೆಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ವಿಜಯ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿ ನೀಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿರಾಡಿ ವಲಯ ಮೇಲ್ವಿಚಾರಕರು ಪುಷ್ಪಾವತಿ, ಮಕ್ಕಳ ರಕ್ಷಣೆ ಮತ್ತು ಶಿಕ್ಷಣದ ಬಗ್ಗೆ ಮಾಹಿತಿ ನೀಡಿದರು. ಕಡಬ ಠಾಣೆಯ ಹೆಡ್ಕಾನ್ಸ್ಟೆಬಲ್ ಹರೀಶ್ ಮಕ್ಕಳಿಗೆ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಮಧುಸೂದನ್ ಓಡೊಳಿ, ಪಿಡಿಒ ರಾಘವೇಂದ್ರ ಮೊದಲಾದವರು ಇದ್ದರು.
ಗ್ರಾಮ ಪಂಚಾಯತಿ ನೌಕರ ಲೋಕನಾಥ ಕೆ. ನಿರೂಪಿಸಿ, ಸ್ವಾಗತಿಸಿದರು.