More

    ‘ನೈಜ ಘಟನೆಯಾಧಾರಿತ ಹತ್ಯ’ ಪ್ಯಾನ್ ಇಂಡಿಯಾ ಮಹಿಳಾ ಪ್ರಧಾನ ಚಿತ್ರದಲ್ಲಿ ಕೋಮಿಕಾ ಆಂಚಲ್

    ಬೆಂಗಳೂರು: ವರುಣ್ ಚೊಚ್ಚಲ ಬಾರಿಗೆ ಆ್ಯಕ್ಷನ್ ಕಟ್ ಹೇಳಿರುವ ನೈಜ ಘಟನೆಯಾಧಾರಿತ ಮಹಿಳಾ ಪ್ರಧಾನ ಸಿನಿಮಾ ‘ಹತ್ಯ’. ದೆಹಲಿಯ ನಿರ್ಭಯ ಹತ್ಯೆ, ಹೈದರಾಬಾದ್ ಕೊಲೆ ಮತ್ತು ಅತ್ಯಾಚಾರ, ಕೆಲವು ತಿಂಗಳ ಹಿಂದೆ ದೆಹಲಿಯಲ್ಲಿ ನಡೆದ ದೇಹವನ್ನು ತುಂಡು ಮಾಡಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ ಪ್ರಕರಣಗಳು ಸೇರಿದಂತೆ ಕೆಲವು ನೈಜ ಘಟನೆಗಳನ್ನು ಆಧರಿಸಿರುವ ಚಿತ್ರವಿದು.

    ‘ಚಿತ್ರದಲ್ಲಿ ನಾಯಕಿ ತನ್ನ ಸ್ನೇಹಿತರಿಂದಲೇ ಅತ್ಯಾಚಾರಕ್ಕೆ ಒಳಗಾಗಿರುತ್ತಾಳೆ. ಆ ನೋವನ್ನು ಯಾರ ಬಳಿಯೂ ಹೇಳಿಕೊಳ್ಳಲಾಗದೇ ತಾನೇ ಯಾತನೆ ಅನುಭವಿಸುತ್ತಿರುತ್ತಾಳೆ. ಈ ಘಟನೆಯಿಂದ ಆಕೆಯ ಮನಸ್ಥಿತಿ ಬದಲಾಗಿ, ಸೇಡು ತೀರಿಸಿಕೊಳ್ಳಲು ಮುಂದಾಗುತ್ತಾಳೆ. ದುಷ್ಟರನ್ನು ಶಿಕ್ಷಿಸುತ್ತಾಳಾ? ಹೇಗೆ? ಎಂಬುದೇ ಚಿತ್ರದ ಕಥೆ’ ಎಂದು ಮಾಹಿತಿ ನೀಡುತ್ತಾರೆ ವರುಣ್.

    ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ‘ಹತ್ಯ’ ನಿರ್ಮಾಣವಾಗಿದ್ದು, ಈಗಾಗಲೇ ಚಿತ್ರೀಕರಣ ಪೂರ್ಣಗೊಂಡಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು, ಪ್ಯಾನ್ ಇಂಡಿಯಾ ರಿಲೀಸ್‌ಗೆ ಚಿತ್ರತಂಡ ಸಿದ್ಧತೆ ಮಾಡಿಕೊಳ್ಳುತ್ತಿದೆ. ಚಿತ್ರದಲ್ಲಿ ವಿಕಾಸ್ ಗೌಡ, ಕೋಮಿಕಾ ಆಂಚಲ್, ಹ್ಯಾರಿ ಜೋಶ್, ಸಂತೋಷ್ ಮೇದಪ್ಪ, ಶ್ಯಾಮ್, ನಾಗೇಶ್ ಮಯ್ಯ ಪ್ರಮುಖ ತಾರಾಗಣದಲ್ಲಿದ್ದಾರೆ. ಚಿತ್ರಕ್ಕೆ ಪಿಕೆಎಚ್ ದಾಸ್ ಛಾಯಾಗ್ರಹಣ, ಅಲೆನ್ ಕ್ರಿಸ್ಟ ಸಂಗೀತ, ಸಂಜೀವ್ ರೆಡ್ಡಿ ಸಂಕಲನವಿರಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts