More

  ಐದು ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯ

  ಕೊಂಡ್ಲಹಳ್ಳಿ: ಮಗು ಐದು ವರ್ಷದೊಳಗಿದ್ದರೆ ಈ ಹಿಂದೆ ಹಾಕಿಸಿದ್ದರೂ ಸಹ ಮತ್ತೊಮ್ಮೆ ಲಸಿಕೆ ಹಾಕಿಸುವುದು ಕಡ್ಡಾಯ ಎಂದು ಡಾ.ಟಿ.ಶಿವಕುಮಾರ್ ತಿಳಿಸಿದರು.

  ಗ್ರಾಮದಲ್ಲಿ ಭಾನುವಾರ ಆರೋಗ್ಯ ಇಲಾಖೆಯಿಂದ ಹಮ್ಮಿಕೊಂಡಿದ್ದ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಮಾತನಾಡಿ, ಕೊಂಡ್ಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಗ್ರಾಪಂ ವ್ಯಾಪ್ತಿಯಲ್ಲಿ 0-5 ವರ್ಷದೊಳಗಿನ 2692 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಇದಕ್ಕಾಗಿ ವೈದ್ಯಾಧಿಕಾರಿ ಸೇರಿ, 12 ಜನರ ತಂಡ ರಚಿಸಲಾಗಿದೆ ಎಂದು ತಿಳಿಸಿದರು.

  ಲಸಿಕಾ ಕಾರ್ಯಕ್ರಮಕ್ಕೆ ಗ್ರಾಪಂ ಅಧ್ಯಕ್ಷೆ ಈರಕ್ಕ ಚಾಲನೆ ನೀಡಿದರು. ಫಾರ್ಮಸಿಸ್ಟ್ ವೆಂಕಟೇಶ್‌ನಾಯ್ಕ, ನವೀನ್, ಶೋಭಾ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts