ಕೊಂಡ್ಲಹಳ್ಳಿ: ರಾಜ್ಯದ ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚಾಗಿ ತಂಬಾಕು ಬೆಳೆಯಲಾಗುತ್ತಿದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಾಮಾಜಿಕ ಕಾರ್ಯಕರ್ತ ಕೆ.ಎಂ.ತಿಪ್ಪೇಸ್ವಾಮಿ ತಿಳಿಸಿದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಕೋನಸಾಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ತಂಬಾಕು ನಿಯಂತ್ರಣ ಕುರಿತು ಉಪನ್ಯಾಸದಲ್ಲಿ ನೀಡಿದರು.
ತಂಬಾಕು ಬೆಳೆ, ಅದರ ಉತ್ಪನ್ನಗಳ ಸೇವನೆ, ಹೊಗೆರಹಿತ ಮತ್ತು ಹೊಗೆಸಹಿತ ಉತ್ಪನ್ನಗಳಿಂದಾಗುವ ದುಷ್ಪರಿಣಾಮ, ತಂಬಾಕು ನಿಯಂತ್ರಣ ಕಾಯ್ದೆ ಕೋಟ್ಪಾ-2003ರ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಮುಖ್ಯಶಿಕ್ಷಕ ಡಿ.ಎಸ್.ಕರಿಬಸಪ್ಪ, ಶಿಕ್ಷಕರಾದ ಜಯಲಕ್ಷ್ಮಿ, ಜಿ.ಜಿ.ನಾಗರಾಜ್ ಇತರರಿದ್ದರು. ತಂಬಾಕು ಉತ್ಪನ್ನಗಳ ದುಷ್ಪರಿಣಾಮ ಕುರಿತ ಪ್ರಬಂಧ ಸ್ಪರ್ಧೆ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.